ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ "ಸಿದ್ದ"ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಬಿಜೆಪಿ ಪ್ರಶ್ನಿಸಿದೆ.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ ಸಿದ್ದ: ಬಿಜೆಪಿ ಕಿಡಿ
ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ "ಸಿದ್ದ": ಬಿಜೆಪಿ ಕಿಡಿ
Follow us
|

Updated on: Sep 15, 2024 | 10:03 PM

ಬೆಂಗಳೂರು, ಸೆಪ್ಟೆಂಬರ್​​ 15: ಮಂಡ್ಯ (Mandya Violence) ಜಿಲ್ಲೆಯ ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಸಂಘಟನೆ ಕೈವಾಡ ಇದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗಿರುವ 76 ಆರೋಪಿಗಳ ಪೈಕಿ, A 44ಯೂಸೂಫ್, A 61ನಾಸೀರ್ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ “ಸಿದ್ದ”ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದೆ.

ಬಿಜೆಪಿ ಟ್ವೀಟ್​ 

ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ನೆಮ್ಮದಿ ಕೆಡಿಸಲು ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸಿ ಎಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ: ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಕೇರಳ ಮೂಲದವರಿಗೆ ನಾಗಮಂಗಲದಲ್ಲಿ ಏನು ಕೆಲಸ? ಇಡೀ ಪ್ರಕರಣವೇ ಪೂರ್ವ ಯೋಜಿತ ಎಂಬ ಶಂಕೆ ಇದರಿಂದ ಸ್ಪಷ್ಟವಾಗುತ್ತದೆ. ಈ ಪ್ರಕರಣವನ್ನು ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.