
ಬೆಂಗಳೂರು, ಸೆಪ್ಟೆಂಬರ್ 15: ಮಂಡ್ಯ (Mandya Violence) ಜಿಲ್ಲೆಯ ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್ಐ ಸಂಘಟನೆ ಕೈವಾಡ ಇದೆ ಎನ್ನಲಾಗುತ್ತಿದೆ. ಅರೆಸ್ಟ್ ಆಗಿರುವ 76 ಆರೋಪಿಗಳ ಪೈಕಿ, A 44ಯೂಸೂಫ್, A 61ನಾಸೀರ್ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ “ಸಿದ್ದ”ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಪ್ರಶ್ನಿಸಿದೆ.
ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ನೆಮ್ಮದಿ ಕೆಡಿಸಲು ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಹೇಳಿದೆ.
ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್ಪೆಕ್ಟರ್ ಅಮಾನತು
ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಓಲೈಕೆ ರಾಜಕಾರಣವನ್ನು ಸ್ವಲ್ಪ ಬದಿಗಿಟ್ಟು, ಕನ್ನಡಿಗರ ಹಿತದೃಷ್ಟಿಯಿಂದ ನಾಗಮಂಗಲ ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸಿ ಎಂದು ಬಿಜೆಪಿ ಆಗ್ರಹಿಸಿದೆ.
ಇದನ್ನೂ ಓದಿ: ಅಮಾಯಕರನ್ನು ಬಂಧಿಸಿರುವುದು ನಿಜ, ಚಾರ್ಜ್ಶೀಟ್ನಲ್ಲಿ ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ
ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಕೇರಳ ಮೂಲದವರಿಗೆ ನಾಗಮಂಗಲದಲ್ಲಿ ಏನು ಕೆಲಸ? ಇಡೀ ಪ್ರಕರಣವೇ ಪೂರ್ವ ಯೋಜಿತ ಎಂಬ ಶಂಕೆ ಇದರಿಂದ ಸ್ಪಷ್ಟವಾಗುತ್ತದೆ. ಈ ಪ್ರಕರಣವನ್ನು ಸರ್ಕಾರ ಎನ್ಐಎ ತನಿಖೆಗೆ ವಹಿಸಬೇಕು ಎಂದು ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.