ಕೋಟಾ ಶ್ರೀನಿವಾಸ್ ಪೂಜಾರಿಯಿಂದ ತೆರವಾದ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಕೋಟಾ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯ ವಿಧಾನಪರಿಷತ್​ ಉಪ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕಿಶೋರ್ ಕುಮಾರ್ ಪುತ್ತೂರ್​ಗೆ ಬಿಜೆಪಿ ಹೈಕಮಾಂಡ್​ ಮಣೆ ಹಾಕಿದೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್​ ಸಹ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಕೋಟಾ ಶ್ರೀನಿವಾಸ್ ಪೂಜಾರಿಯಿಂದ ತೆರವಾದ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ರಾಜು ಪೂಜಾರಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 02, 2024 | 8:46 PM

ನವದೆಹಲಿ, (ಅಕ್ಟೋಬರ್ 02):  ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್​ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ: ಕಟೀಲ್​ಗೆ ಶಾಕ್!

ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಾಸಭಾ ಕ್ಷೇತ್ರದಿಂದ ಗೆದ್ದು ಸಂಸತ್​ ಪ್ರವೇಶ ಮಾಡಿದ್ದರಿಂದ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್​ನಿಂದ ಐವರ ಹೆಸರುಗಳು ಕೇಳಿಬಂದಿದ್ದವು. ಭುಜಂಗ ಶೆಟ್ಟಿ, ಬೈಂದೂರಿನ ರಾಜು ಪೂಜಾರಿ, ಹರಿಪ್ರಸಾದ್ ರೈ, ಡಿ.ಆರ್​.ರಾಜು ಮತ್ತು ಉದಯ್ ಕುಮಾರ್ ಶೆಟ್ಟು ಮುನಿಯಾಲು ಅವರ ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್​ ರಾಜು ಪೂಜಾರಿ ಅವರಿಗೆ ಮಣೆ ಹಾಕಿದೆ. ರಾಜು ಪೂಜಾರಿ ಬೈಂದೂರು ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದಾರೆ.

ಇದು ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಅವರು ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಕೋಟ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾರಣ ಈಗ ಉಪಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಅ. 3 ಕೊನೆ ದಿನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 pm, Wed, 2 October 24

ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?