ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿಗೆ ಬಸವನಗೌಡ: ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ

ರಾಜ್ಯದ ಎರಡು ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಗುರುವಾರ ರಾತ್ರಿ ಘೋಷಿಸಲಾಗಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. 

ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿಗೆ ಬಸವನಗೌಡ: ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ
ಕಾಂಗ್ರೆಸ್​ ಧ್ವಜ (ಪ್ರಾತಿನಿಧಿಕ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 18, 2021 | 8:56 PM

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಗುರುವಾರ ರಾತ್ರಿ ಘೋಷಿಸಲಾಗಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಬಿ.ನಾರಾಯಣರಾವ್ ಪತ್ನಿ ಮಲ್ಲಮ್ಮ, ಮಸ್ಕಿ ಕ್ಷೇತ್ರದಲ್ಲಿ ಬಸವನಗೌಡ ತುರವಿಹಾಳಗೆ ಟಿಕೆಟ್ ಘೋಷಿಸಲಾಗಿದೆ. ಸಿಂದಗಿ ಕ್ಷೇತ್ರದ ಉಪ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಆದರೆ ಕಾಂಗ್ರೆಸ್​ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಗೆ ಟಿಕೆಟ್‌ ಘೋಷಿಸಿದೆ.

ಏಪ್ರಿಲ್ 17 ರಂದು ಉಪಚುನಾವಣೆಗಳ ಮತದಾನ ನಡೆಯಲಿದೆ. ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಮಾರ್ಚ್ 31 ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿತ್ತು. ಕೊರೊನಾ ಸೋಂಕಿಗೆ ತುತ್ತಾಗಿದ್ದ 65 ವರ್ಷದ ಸುರೇಶ್ ಅಂಗಡಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ 10 ದಿನಗಳ ಕಾಲ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆದಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ ವೆಂಟಿಲೇಟರ್ ತೆಗೆದು ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದರು.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಶ್ರದ್ಧಾ ಶೆಟ್ಟರ್ (ಸುರೇಶ್ ಅಂಗಡಿ ಪುತ್ರಿ), ಡಾ.ಗಿರೀಶ್ ಸೋನವಾಲ್ಕರ್, ಮಹಾಂತೇಶ್ ಕವಟಗಿಮಠ್, ಪ್ರಮೋದ್ ಮುತಾಲಿಕ್, ಮಾಜಿ ಸಂಸದ ರಮೇಶ್ ಕತ್ತಿ, ಡಾ.ರವಿ ಪಾಟೀಲ್, ರಮೇಶ್ ದೇಶಪಾಂಡೆ, ವಕೀಲ ಎಂ.ಬಿ.ಜಿರಲಿ, ಉದ್ಯಮಿ ಮಹಾಂತೇಶ್ ವಕ್ಕುಂದ, ಉಜ್ವಲಾ ಬಡವನಾಚೆ, ದೀಪಾ ಕುಡಚಿ ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌, ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ (ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ), ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ಘೋಷಿಸುವ ಸಾಧ್ಯತೆಗಳಿವೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗಾರ್, ಮಾಜಿ ಶಾಸಕ ಮಲ್ಲಿಕಾರ್ಜುನ್ ಖೂಬಾ, ಬಸವಕಲ್ಯಾಣ ತಾಲೂಕಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯ ಗುಂಡೂರೆಡ್ಡಿ, ಭಾರತೀಯ ಆಹಾರ ನಿಗಮದ ಸದಸ್ಯ ಉಮೇಶ್ ಬಿರಬಿಟ್ಟೆ, ಪ್ರದೀಪ್ ವಾತಡೆ ಆಕಾಂಕ್ಷಿಗಳಾಗಿದ್ದಾರೆ. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.

ಉಪ ಚುನಾವಣೆ ಘೋಷಣೆಯಾದ ಈ ಹೊತ್ತಲ್ಲಿ ರಾಜ್ಯದಲ್ಲಿ ಸಿಡಿ ರಾಜಕೀಯದ ಧ್ವನಿ ಜೋರಾಗಿದೆ. ಕಾಂಗ್ರೆಸ್​ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಂಗಡಿಗರು ಸಿಡಿ ವಿಷಯ ಇಟ್ಟುಕೊಂಡು ಬಿಜೆಪಿಯ ಅಭ್ಯರ್ಥಿಗಳನ್ನು ಮಣಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವುದು ಈಗಾಗಲೇ ಖಚಿತವಾಗಿದೆ. ಆದರೆ ಬಿಜೆಪಿ ಸಿಡಿ ರಾಜಕೀಯ ಮಾಡಲು ಅವಕಾಶ ನೀಡದೇ, ಕಮಲದ ಧ್ವಜ ಹಾರಿಸುವ ಸಿದ್ಧತೆಯಲ್ಲಿದೆ. ಈ ಕಾರಣಗಳಿಂದ ಬೆಳಗಾವಿ ಲೋಕಸಭಾ ಉಪ ಚುನಾವಣೆ ಕಣ ಅತ್ಯಂತ ರೋಚಕ ಘಟ್ಟದತ್ತ ಮುಖಮಾಡುವುದಂತೂ ಗ್ಯಾರಂಟಿ.

ಉಳಿದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯವಿರುವುದರಿಂದ ಆಡಳಿತಾರೂಢ ಬಿಜೆಪಿಗೆ ಸವಾಲಾಗಿದೆ. ಆದರೂ, ಮೇಲ್ನೋಟಕ್ಕೆ ಜಾತಿ ಸಮೀಕರಣವನ್ನು ಗಮನಿಸಿದರೆ ಬಿಜೆಪಿಗೆ ಸ್ವಲ್ಪ ಮುನ್ನಡೆ ಸಿಗಬಹುದು ಎನ್ನುವ ಅಂದಾಜು ಮಾಡಲಾಗುತ್ತಿದೆ.

ಇದನ್ನೂ ಓದಿ: ವಿಶ್ಲೇಷಣೆ | ಕರ್ನಾಟಕದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಘೋಷಿಸಲಿಲ್ಲ ಏಕೆ?

ಇದನ್ನೂ ಓದಿ: ಉಪ ಚುನಾವಣೆಯನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ: ಬಸವರಾಜ ಬೊಮ್ಮಾಯಿ

Published On - 8:53 pm, Thu, 18 March 21

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್