Karnataka Byelection: ಸಿಂದಗಿ, ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

Congress Candidates: ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ್ ಮನಗೂಳಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್‌ ಮಾನೆ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.

Karnataka Byelection: ಸಿಂದಗಿ, ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
ಕಾಂಗ್ರೆಸ್

ಬೆಂಗಳೂರು: ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ್ ಮನಗೂಳಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರಕ್ಕೆ ಶ್ರೀನಿವಾಸ್‌ ಮಾನೆ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು 2 ಕ್ಷೇತ್ರಗಳ ಬೈಎಲೆಕ್ಷನ್‌ ನಡೆಯಲಿದೆ.

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿ ಕೇಳಿಬಂದಿತ್ತು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಕಾಂಗ್ರೆಸ್​ನ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದರು. 2018ರ ಚುನಾವಣೆ ಸಂದರ್ಭದಲ್ಲಿ ಹಾಲಿ ಶಾಸಕರಾಗಿದ್ದರೂ ಕಾಂಗ್ರೆಸ್ ಟಿಕೆಟ್ ವಂಚಿತರಾಗಿದ್ದ ಮಾಜಿ ಸಚಿವ ಮನೋಹರ ತಹಶೀಲ್ದಾರ ಕೂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇವರ ಜೊತೆಗೆ ಪ್ರಕಾಶಗೌಡ ಪಾಟೀಲ ಸೇರಿದಂತೆ ಮತ್ತೂ ಕೆಲವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗಿತ್ತು.

ಅಕ್ಟೋಬರ್ 30ರಂದು ನಡೆಯುವ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ ಎಂದು ಸಿಂಧಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದರು. ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂಧಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ತೇವೆ. ಅಕ್ಟೋಬರ್ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುತ್ತೆ. ಬಿಜೆಪಿ ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದರು.

ಹಾನಗಲ್: ಮೂವರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರ ಸಲ್ಲಿಕೆ
ಹಾನಗಲ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇವತ್ತು ಮೂವರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಜ್ ಶೇಖ್, ಲೋಕಶಕ್ತಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಶಿವಕುಮಾರ ತಳವಾರ ಎರಡು ನಾಮಪತ್ರ ಸಲ್ಲಿಕೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಅಶೋಕ ಹಣಜಿ ನಾಮಪತ್ರ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರಕ್ಕೆ ಅಕ್ಟೋಬರ್ 30, 2021 ರಂದು ಉಪಚುನಾವಣೆ ನಡೆಯಲಿದೆ. ಚುನಾವಣಾಧಿಕಾರಿ ಅನ್ನಪೂರ್ಣ ಮುದಕಮ್ಮನವರಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳು ಇವರು
ಹೆಚ್.ಡಿ.ಕುಮಾರಸ್ವಾಮಿ ಸಿಂಧಗಿ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ ನಿಯಾಜ್ ಶೇಕ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ ಮಾಡಿದ್ದಾರೆ.

ಇದನ್ನೂ ಓದಿ: Karnataka Bypolls 2021: ಕೊನೆಗೂ ಹಾನಗಲ್ ಉಪಚುನಾವಣೆ ಬಿಜೆಪಿ ಉಸ್ತುವಾರಿ ಪಟ್ಟಿಗೆ ಬಿವೈ ವಿಜಯೇಂದ್ರ ಸೇರ್ಪಡೆ

ಇದನ್ನೂ ಓದಿ: ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

Read Full Article

Click on your DTH Provider to Add TV9 Kannada