ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Karnataka Legislative Council Elections: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕಾಂಗ್ರೆಸ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 29, 2023 | 10:48 AM

ನವದೆಹಲಿ/ಬೆಂಗಳೂರು, (ಅಕ್ಟೋಬರ್ 29): ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ(Karnataka Legislative Council Elections)  ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಒಟ್ಟು 5 ಸ್ಥಾನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ,  ಆಗ್ನೇಯ ಶಿಕ್ಷಕ್ಷ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ.

ರಾಜಾಜಿನಗರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುಕಂಡಿದ್ದ ಪುಟ್ಟಣ್ಣ ಅವರಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಮೊನ್ನೇ ಅಷ್ಟೇ ಬಿಜೆಪಿ ತೊರೆದು ಕಾಂಂಗ್ರೆಸ್ ಸೇರಿರುವ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ ಟಿ.ಡಿ.ಶ್ರೀನಿವಾಸ್ ಅವರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್​ ನೀಡಲಾಗಿದೆ.

ಕ್ಷೇತ್ರ ಮತ್ತು ಅಭ್ಯರ್ಥಿ ಹೆಸರು

  • ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿಗೌಡ
  • ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
  •  ನೈಋತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್
  • ಆಗ್ನೇಯ ಶಿಕ್ಷಕರ ಕ್ಷೇತ್ರ-ಟಿ.ಡಿ.ಶ್ರೀನಿವಾಸ್
  • ಈಶಾನ್ಯ ಪದವೀಧರ ಕ್ಷೇತ್ರ-ಡಾ.ಚಂದ್ರಶೇಖರ ಪಾಟೀಲ್

ಪದವೀಧರ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನವೆಂಬರ್ 6 ಕೊನೆಯ ದಿನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ನೋಂದಾಯಿಸಲು ಪದವೀಧರರು ಆಸಕ್ತಿಯನ್ನು ತೋರಿಸುತ್ತಿಲ್ಲ. ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 30ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕವೂ ನೋಂದಣಿಗೆ ಅವಕಾಶ ಇರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Published On - 10:10 am, Sun, 29 October 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ