ಆರ್ ಆರ್ ನಗರದಲ್ಲಿ ತ್ರಿಕೋನ ಸ್ಫರ್ಧೆ, ಮೂವರಿಗೂ ಗೆಲ್ಲುವ ವಿಶ್ವಾಸ

ನವೆಂಬರ್ 3ರಂದು ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆ ರಂಗೇರಿದ್ದು ರಾಜ್ಯದಲ್ಲಿ ಮೂರು ಪ್ರಮುಖ ಪಕ್ಷಗಳಾಗಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿ(ಎಸ್)ಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಸಮರದಲ್ಲಿ ಹೋರಾಡಲಿರುವ ಪಕ್ಷಗಳ ಅಭ್ಯರ್ಥಿಗಳು ಇಂದು ನಾಮಪತ್ರವನ್ನು ಸಲ್ಲಿಸಿದ್ದು ಎಲ್ಲರೂ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಟ್ಟಾ ಹುರಿಯಾಳಾಗಿದ್ದ ಮುನಿರತ್ನ ಕಳೆದ ವರ್ಷ ಬಿಜೆಪಿಗೆ ಜಿಗಿದು ಈಗ ಆರ್ ಆರ್ ನಗರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದ್ದಿದ್ದಾರೆ. ದಿವಂಗತ ಐಎಎಸ್ ಅಧಿಕಾರಿ, ಡಿಕೆ ರವಿ ಅವರ […]

ಆರ್ ಆರ್ ನಗರದಲ್ಲಿ ತ್ರಿಕೋನ ಸ್ಫರ್ಧೆ, ಮೂವರಿಗೂ ಗೆಲ್ಲುವ ವಿಶ್ವಾಸ
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 14, 2020 | 9:14 PM

ನವೆಂಬರ್ 3ರಂದು ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆ ರಂಗೇರಿದ್ದು ರಾಜ್ಯದಲ್ಲಿ ಮೂರು ಪ್ರಮುಖ ಪಕ್ಷಗಳಾಗಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿ(ಎಸ್)ಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಸಮರದಲ್ಲಿ ಹೋರಾಡಲಿರುವ ಪಕ್ಷಗಳ ಅಭ್ಯರ್ಥಿಗಳು ಇಂದು ನಾಮಪತ್ರವನ್ನು ಸಲ್ಲಿಸಿದ್ದು ಎಲ್ಲರೂ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಟ್ಟಾ ಹುರಿಯಾಳಾಗಿದ್ದ ಮುನಿರತ್ನ ಕಳೆದ ವರ್ಷ ಬಿಜೆಪಿಗೆ ಜಿಗಿದು ಈಗ ಆರ್ ಆರ್ ನಗರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದ್ದಿದ್ದಾರೆ. ದಿವಂಗತ ಐಎಎಸ್ ಅಧಿಕಾರಿ, ಡಿಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿಸಿದೆ. ಹಾಗೆಯೇ, ಜೆಡಿ(ಎಸ್) ಕೃಷ್ಣಮೂರ್ತಿ ಎನ್ನುವವರಿಗೆ ಟಿಕೆಟ್ ನೀಡಿದೆ.

ಮುನಿರತ್ನ ನಾಮಪತ್ರ ಸಲ್ಲಿಸುವಾಗ ಅವರೊಂದಿಗೆ ಬಿ ಎಸ್ ಯಡಿಯೂರಪ್ಪನವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಅಶ್ವಥ್ ನಾರಾಯಣ, ಹಿರಿಯ ಸಚಿವ ಆರ್ ಅಶೋಕ ಮತ್ತು ಇತರ ಕೆಲ ನಾಯಕರು ಜೊತೆಗಿದ್ದರು. ನಾಮಪತ್ರ ಸಲ್ಲಿಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಕಂದಾಯ ಸಚಿವರು, ‘‘ಡಿಕೆ ಶಿವಕುಮಾರ್ ಅವರಾಟ ಕೇವಲ ಕನಕಪುರಕ್ಕೆ ಮಾತ್ರ ಸೀಮಿತವಾಗಿದೆ. ಇದು ಆರ್ ಆರ್ ನಗರ, ಇಲ್ಲಿ ಕಲ್ಲುಬಂಡೆಗಳಿಲ್ಲ, ಈ ಕ್ಷೇತ್ರದಲ್ಲಿ ವಿದ್ಯಾವಂತ ಮತದಾರರಿದ್ದಾರೆ ಮತ್ತು ಬುದ್ಧಿವಂತ ನಾಗರಿಕರಿದ್ದಾರೆ. ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ಮಾಡಿರುವುದರಿಂದ ನಾವು ಸುಲಭವಾಗಿ ಗೆಲ್ಲುತ್ತೇವೆ,’’ ಎಂದು ಹೇಳಿದರು.

ಕಾಂಗ್ರೆಸ್​ನ ಅಭ್ಯರ್ಥಿ ಕುಸುಮಾ ಅವರು ಪಕ್ಷದ ಹಿರಿಯ ನಾಯಕರ ದಂಡಿನೊಂದಿಗೆ ನಾಮಪತ್ರ ಸಲ್ಲಿಸಲು ಆಗಮಿಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಯುಟಿ ಖಾದರ್ ಮೊದಲಾದವರೆಲ್ಲ ಕುಸುಮಾ ಅವರೊಂದಿಗಿದ್ದರು. ನಾಮಪತ್ರ ಸಲ್ಲಿಸಿದ ನಂತರ ಮಾತಾಡಿದ, ಸಿದ್ದರಾಮಯ್ಯ, ‘‘ಮನಿರತ್ನ ದುಡ್ಡಿನಾಸೆ ಮತ್ತು ತನ್ನ ಮೇಲಿರುವ ಕೇಸುಗಳಿಂದ ಬಚಾವಾಗಲು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಾರೆ, ಅವರು ಹಿಂದೆ ಇಲ್ಲಿಂದ ಗೆದ್ದಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ, ಈ ಭಾಗದ ಲೋಕ ಸಭಾ ಸದಸ್ಯರು ಕಾಂಗ್ರೆಸ್​ನವರಾಗಿದ್ದಾರೆ, ಮತ್ತು ಈ ಮತಕ್ಷೇತ್ರದಲ್ಲಿ ಬರುವ ವಾರ್ಡ್​ಗಳ ಪೈಕಿ 6ರಲ್ಲಿ ನಮ್ಮ ಪಕ್ಷದ ಕಾರ್ಪೊರೇಟರ್​ಗಳು ಪ್ರತಿನಿಧಿಸುತ್ತಿದ್ದಾರೆ, ಹಾಗಾಗಿ ನಮ್ಮ ಗೆಲುವಿಗೆ ಯಾವುದೇ ಅಡೆತಡೆಗಳಿಲ್ಲ,’’ ಎಂದರು. ಕುಸುಮಾ ಅವರು ನಾಮಪತ್ರ ಸಲ್ಲಿಸುವ ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 

ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಜೊತೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ‘‘ಈ ಬಾರಿ ನಾನೇ ಉಸ್ತುವಾರಿ ವಹಿಸಿಕೊಂಡು ಅಖಾಡಕ್ಕಿಳಿಯುತ್ತೇನೆ,’’ ಎಂದು ಹೇಳಿದರು.

ರಾಜರಾಜೇಶ್ವರಿ ನಗರ ಮುನಿರತ್ನಗೆ ಭದ್ರಕೋಟೆಯಾಗಿದ್ದರೂ ಈ ಸಲ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರಿಗೆ ಟಿಕೆಟ್ ನೀಡುತ್ತಿದ್ದಂತೆಯೇ ಆರ್‌ ಆರ್ ನಗರ ಬಿಜೆಪಿ ಕಾರ್ಯಕರ್ತರು ರೊಚ್ಚಿಗೆದ್ದು ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಹಗರಣದಲ್ಲಿ ಸಿಲುಕಿರುವ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ, ತಮ್ಮ ನಿಲುವು ಏನೆಂದು ಬಿಜೆಪಿ ನಾಯಕರು ಕೇಳಲಿಲ್ಲ. ರಾಷ್ಟ್ರಮಟ್ಟದಲ್ಲಿ ಪಕ್ಷ ತಮ್ಮನ್ನು ಅವಮಾನಿಸಿಲಾಗಿದೆ, ತಮಗೆ ತಕ್ಕ ಮನ್ನಣೆ ಕೊಟ್ಟಿಲ್ಲ ಅಂದ್ರೆ ತಟಸ್ಥರಾಗಿಬಿಡುವ ಎಚ್ಚರಿಕೆ ನೀಡಿದ್ದಾರೆ.

ಆರ್​ ಆರ್ ನಗರ ಉಪ ಚುನಾವಣೆ ಕಣ ಈಗ ಕಾವೇರಿದ್ದು, ನಾಳೆಯಿಂದ ಪ್ರಚಾರದ ಭರಾಟೆ ಶುರುವಾಗಲಿದೆ.

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್