Congress Bus Yatra: ಡಿಕೆ ಶಿವಕುಮಾರ್ ಆಂಡ್​ ಟೀಂ ಮುಳಬಾಗಿಲು, ಕೆಜಿಎಫ್​​ ಭೇಟಿ

ಕಾಂಗ್ರೆಸ್​​​ ವಿಧಾನಸಭಾಕ್ಷೇತ್ರವಾರು ಬಸ್​ ಯಾತ್ರೆ ಪ್ರಾರಂಭಿಸಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ​ ನೇತೃತ್ವದ ಬಸ್​ ಯಾತ್ರೆ ಮುಳಬಾಗಿಲು ಮತ್ತು ಕೆಜಿಎಫ್​​ಗೆ ತೆರಳಿದೆ.

Follow us
TV9 Web
| Updated By: Digi Tech Desk

Updated on:Feb 03, 2023 | 2:05 PM

ಬೆಂಗಳೂರು: ರಾಜ್ಯ ಕಾಂಗ್ರೆಸ್ (Congress)​ ನಾಯಕರು ಪ್ರಜಾಧ್ವನಿ ಹೆಸರಿನಲ್ಲಿ ಬಸ್​ ಯಾತ್ರೆ ಮಾಡುತ್ತಿದ್ದು ಜಿಲ್ಲಾವಾರು ಬಸ್​ ಯಾತ್ರೆ (Bus Yatra) ಪೂರ್ಣಗೊಂಡಿದೆ. ಈಗ ಎರಡು ತಂಡಗಳಾಗಿ ವಿಧಾನಸಭಾಕ್ಷೇತ್ರವಾರು ಬಸ್​ ಯಾತ್ರೆ ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆ ಇಂದು (ಫೆ.3) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದ ಬಸ್​ ಯಾತ್ರೆ ಮುಳಬಾಗಿಲು ಹಾಗೂ ಕೆಜಿಎಫ್​​ಗೆ ಹೊರಡಲಿದೆ. ಈ ಸಂಬಂಧ ಡಿಕೆ ಶಿವಕುಮಾರ್ ನೇತೃತ್ವದ ತಂಡ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಸಲೀಂ ಅಹಮದ್, ದಿನೇಶ್ ಗೂಳಿಗೌಡ, ಯೂತ್ ರಾಷ್ಟ್ರೀಯ ಅಧ್ಯಕ್ಷ ಬಿವಿ ಶ್ರೀನಿವಾಸ್ ಹೊರಡಲಿದ್ದಾರೆ. ಪ್ರಜಾಧ್ವನಿ ಬಸ್ ಯಾತ್ರೆ ಕೆಪಿಸಿಸಿ ಕಚೇರಿಯಿಂದ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ತಲುಪಿದೆ.

ಈ ಕುರಿತು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾತನಾಡಿ ಪ್ರಜಾಧ್ವನಿ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಜಿಲ್ಲೆಗಳನ್ನು ಮುಗಿಸಿದ್ದೇವೆ. ನಾವು ಏನು ನಿರೀಕ್ಷೆ ಮಾಡಿದ್ವೋ ಅದರ ಎರಡರಷ್ಟು ಜನ ಸೇರಿದ್ದಾರೆ. ಇದರ ಅರ್ಥ ಜನರ ಸಮಸ್ಯೆ ಇತ್ತಿಚೀಗೆ ದುಪ್ಪಟ್ಟಾಗಿದೆ. ಹಾಸನ ಮತ್ತು ಮಂಡ್ಯದಲ್ಲಿ ಒಬ್ಬರೇ ಒಬ್ಬರು ನಮ್ಮ ಶಾಸಕರಿಲ್ಲ. ಆದರೂ ಅಲ್ಲಿ ಜನ ಸೇರಿದ್ದು ನೋಡಿ ನನಗೆ ಅಶ್ಚರ್ಯವಾಗಿದೆ. ಶಾಸಕರು ಇಲ್ಲದೆ ಇರುವ ಜಿಲ್ಲೆಯಲ್ಲಿ ಅಷ್ಟು ಜನ ಸೇರಿದ್ದು ದಾಖಲೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಇಂದಿನಿಂದ ಬೀದರ್​ನಲ್ಲಿ ಕಾಂಗ್ರೆಸ್​ ಪ್ರಜಾಧ್ವನಿ ಸಮಾವೇಶ, ಸಿದ್ದರಾಮಯ್ಯರಿಂದ ಚಾಲನೆ

ಬಸವಣ್ಣನವರ ಕರ್ಮ ಭೂಮಿಯಿಂದ ಸಿದ್ಧರಾಮಯ್ಯ ಹೊರಡುತ್ತಿದ್ದಾರೆ

ಬಸವಣ್ಣನವರ ಕರ್ಮ ಭೂಮಿಯಿಂದ ಸಿದ್ಧರಾಮಯ್ಯನವರು ಹೊರಡುತ್ತಿದ್ದಾರೆ. ಬರೆದಿಟ್ಟು ಕೊಳ್ಳಿ ಬಿಜೆಪಿ ಸರ್ಕಾರ ಇನ್ನು 50 ದಿನ ಮಾತ್ರ. ನಾನು ಎರಡು ಬಾರಿ ಸರ್ವೇ ಮಾಡಿದ್ದೇನೆ 160 ಸೀಟು ನಮಗೆ ಸಿಗುತ್ತೆ. 135 ಸೀಟು ಬಂದೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಿಡಿಸಿದರು.

ಪ್ರಣಾಳಿಕೆ ವಿಚಾರದಲ್ಲಿ ಪರಮೇಶ್ವರ್ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು ಪರಮೇಶ್ವರ್ ನಮ್ಮ ಪಕ್ಷದ ಆಸ್ತಿ. ಅವರು ಬಹಳ ಸುದೀರ್ಘವಾಗಿ ಪಕ್ಷ ಕಟ್ಟಿದವರು. ಬೆಂಗಳೂರಿಗೆ ಒಂದು ವಿಶೇಷವಾದ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ತರಬೇಕಿದೆ. ಬೆಂಗಳೂರು ಟ್ರಾಫಿಕ್ ಮ್ಯಾನ್ಮೆಂಜ್ಮೆಂಟ್​​ಗೆ ಸಂಬಂಧಿಸಿ ಸುರ್ಜೆವಾಲಾ ಚರ್ಚೆ ಮಾಡಿದ್ದಾರೆ ಎಂದು ತಿಳಿಸಿದರು.

ಈ ಹಿನ್ನೆಲೆ ಪರಮೇಶ್ವರ್ ನೇತೃತ್ವದಲ್ಲಿ ಒಂದು ತಂಡ ಸಿಂಗಾಪುರಕ್ಕೆ ಹೋಗಲಿದೆ. ಸಿಂಗಾಪುರಕ್ಕೆ ಒಂದು ಟೀಂ ಕಳಿಸಲು ನಿರ್ಧಾರ ಮಾಡಿದ್ದೇವೆ. ಅದರ ಬಗ್ಗೆ ಪರಮೇಶ್ವರ್ ಸುರ್ಜೆವಾಲಾ ಅವರ ಜೊತೆ ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಬಂದಿರೋ ಕಳಂಕ ತಪ್ಪಿಸುವ ನಿಟ್ಟಿನಲ್ಲಿ ಚರ್ಚೆಯಾಗಿದೆ. ಸರ್ಕಾರ ಭ್ರಷ್ಟಚಾರದಲ್ಲೇ ಮುಳುಗಿ ಹೋಗಿದೆ. ಈ ಯಾತ್ರೆ ಜನರ ಸಮಸ್ಯೆಗಳನ್ನ ತಿಳಿಯಲು. ನಾವು ಸುಳ್ಳು ಅಶ್ವಾಸನೆ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

ಭಿನ್ನಾಭಿಪ್ರಾಯಗಳು ಇರಬಹುದು, ಅಸಮಾಧಾನ ಅಂತ ಅರ್ಥೈಸುವುದು ಸರಿಯಲ್ಲ

ನಾನು 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಈ ಅನುಭವ ಆಧಾರದ ಮೇಲೆ ಸುರ್ಜೇವಾಲ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಕೆಲವು ಮಹತ್ವದ ವಿಚಾರಗಳನ್ನು ಸುರ್ಜೇವಾಲ ಜತೆ ಚರ್ಚಿಸಿದ್ದೇನೆ. ಕೆಲವು ಭಿನ್ನಾಭಿಪ್ರಾಯಗಳು ಇರಬಹುದು. ಹಾಗಂತ ಅಸಮಾಧಾನ ಅಂತ ಅರ್ಥೈಸುವುದು ಸರಿಯಲ್ಲ. ನನ್ನ ಅಭಿಪ್ರಾಯಗಳನ್ನು ರಣದೀಪ್​ ಸುರ್ಜೇವಾಲ ಬಳಿ ಹೇಳಿದ್ದೇನೆ ಎಂದು ಬೆಂಗಳೂರಿನಲ್ಲಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:06 am, Fri, 3 February 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ