ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಚುನಾವಣೆಗೆ ಬಿಜೆಪಿ ಬೆಂಬಲ ಕೋರಿದ್ರಾ ಕಾಂಗ್ರೆಸ್ ಅಭ್ಯರ್ಥಿ?

ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಐದು ಮಂದಿ ನಾಮಪತ್ರ ಸಲ್ಲುಸಿದ್ದು ಪೈಪೋಟಿ ಇದೇ ಎನ್ನಲಾಗಿದೆ. ಚುನಾವಣೆ ಅಂತ್ಯಗೊಳ್ಳಲು ನಾಲ್ಕು ದಿನ ಬಾಕಿ ಇರುವಾಗ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣರನ್ನು ಅವರ ಕಚೇರಿಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಭೇಟಿಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ.

ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಚುನಾವಣೆಗೆ ಬಿಜೆಪಿ ಬೆಂಬಲ ಕೋರಿದ್ರಾ ಕಾಂಗ್ರೆಸ್ ಅಭ್ಯರ್ಥಿ?
ಉಡುಪಿ ಜಿಲ್ಲಾ ಯೂತ್ ಕಾಂಗ್ರೆಸ್ ಚುನಾವಣೆಗೆ ಬಿಜೆಪಿ ಬೆಂಬಲ ಕೋರಿದ್ರಾ ಕಾಂಗ್ರೆಸ್ ಅಭ್ಯರ್ಥಿ?
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 16, 2024 | 8:51 PM

ಉಡುಪಿ, ಸೆಪ್ಟೆಂಬರ್​ 16: ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ (bjp) ಪಕ್ಷ ಸದಸ್ಯತ್ವ ಅಭಿಯಾನ ಕೈಗೊಂಡಿದ್ದಾರೆ. ಪಕ್ಷಕ್ಕಾಗಿ ಹೊಸ ಕಾರ್ಯಕರ್ತರನ್ನು ಜೋಡಿಸುವ ನಿಟ್ಟಿನಲ್ಲಿ ಎರಡು ಪಕ್ಷದ ಕಾರ್ಯಕರ್ತರುಗಳು ಹೊಸ ಸದಸ್ಯರನ್ನು ನೋಂದಾಯಿಸುವಲ್ಲಿ ಬೂತ್ ಮಟ್ಟದ ಅಭಿಯಾನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿ ಬಿಜೆಪಿ ಶಾಸಕರ ಹಾಗೂ ಕಾರ್ಯಕರ್ತರ ಬೆಂಬಲ ಕೋರಿದ್ದಾರೆನ್ನಲಾದ ಫೋಟೋಗಳು ಹಾಗೂ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

2024 ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಆಂತರಿಕ ಚುನಾವಣೆ: ಪರ ವಿರೋಧ ಚರ್ಚೆ, ಕಾಂಗ್ರೆಸ್​ಗೆ ಭಾರೀ ಮುಖಭಂಗ

ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಐದು ಮಂದಿ ನಾಮಪತ್ರ ಸಲ್ಲಿಸಿದ್ದು ಪೈಪೋಟಿ ಇದೇ ಎನ್ನಲಾಗಿದೆ. ಇನ್ನು ಚುನಾವಣೆ ಸೆ. 20ರಂದು ನಡೆಯಲಿದ್ದು, ಅದಕ್ಕೂ ಮುನ್ನ ನಾಲ್ಕು ದಿನ ಬಾಕಿ ಇರುವಾಗಲೇ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಅವರ ಕಚೇರಿಯಲ್ಲಿ ಭೇಟಿಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೊಳಗಾಗಿದ್ದು, ಕಾಂಗ್ರೆಸ್​ಗೆ ಮುಖಭಂಗವಾಗಿ ಪರಿಣಮಿಸಿದೆ.

ಇದನ್ನೂ ಓದಿ: ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಯಶ್​​ಪಾಲ್ ಸುವರ್ಣ ವಿರುದ್ಧ ಕೇಸ್​

ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣರನ್ನು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಎಬಿವಿಪಿ ಕಾರ್ಯಕರ್ತರನ್ನು ಜೊತೆಗೆ ಕರೆದುಕೊಂಡು ಹೋಗಿ ಯುವ ಕಾಂಗ್ರೆಸ್ ಚುನಾವಣೆಗೆ ಬೆಂಬಲ ಕೋರಿದ್ದರೆನ್ನಲಾದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಕಾಂಗ್ರೆಸ್ ಪಾಳಯದಲ್ಲಿ ವಿಪರೀತ ಆಕ್ರೋಶ ಭುಗಿಲೆದ್ದಿದ್ದೆ.

ಇದನ್ನೂ ಓದಿ: ರಾಮಕೃಷ್ಣರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ತಡೆಹಿಡಿದ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಪ್ರಸ್ತುತ ಕರ್ನಾಟಕದಲ್ಲಿ ನಡೆಯುತ್ತಿರುವ ಯುವ ಕಾಂಗ್ರೆಸ್ ಚುನಾವಣೆ ಆಗಸ್ಟ್ 20 ರಿಂದ ಸೆಪ್ಟೆಂಬರ್ 20 ರವರೆಗೆ ಏಕ ಕಾಲದಲ್ಲಿ ಸದಸ್ಯತ್ವ ಹಾಗೂ ಚುನಾವಣೆ ನಡೆಯುತ್ತಿದ್ದು, ರಾಜ್ಯದಲ್ಲಿ ಈಗಾಗಲೇ ಹದಿನೆಂಟು ಲಕ್ಷಕ್ಕೂ ಮೀರಿ ಸದಸ್ಯತ್ವ ನಡೆದಿರುತ್ತದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:20 pm, Mon, 16 September 24