AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರದ ಸಾಧನೆಯ ಸಮಾವೇಶ; ಬಸವರಾಜ ಬೊಮ್ಮಾಯಿ ವ್ಯಂಗ್ಯ

1 ಸಾವಿರ ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ ಬಳಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆದಿದ್ದು, ಈ ಬೃಹತ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಈ ಸಮಾವೇಶದ ಬಗ್ಗೆ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಟೀಕಾ ಪ್ರಹಾರ ನಡೆಸಿದ್ದಾರೆ.

ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರದಿಂದ ಭ್ರಷ್ಟಾಚಾರದ ಸಾಧನೆಯ ಸಮಾವೇಶ; ಬಸವರಾಜ ಬೊಮ್ಮಾಯಿ ವ್ಯಂಗ್ಯ
Basavaraj BommaiImage Credit source: PTI
ಸುಷ್ಮಾ ಚಕ್ರೆ
|

Updated on:Feb 14, 2026 | 5:40 PM

Share

ಬೆಂಗಳೂರು, ಫೆಬ್ರವರಿ 14: ಕರ್ನಾಟಕ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ (Congress) ಸಾಧನಾ ಸಮಾವೇಶ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಇಂದು ಹಾವೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದೆ. ಈ ಸಮಾವೇಶಕ್ಕೆ ಸ್ವಯಂ ಪ್ರೇರಿತವಾಗಿ ಜನರು ಬರಲು ಸಾಧ್ಯವಿಲ್ಲ ಎಂದು ಅರಿತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನಿನಲ್ಲಿ ಇರುವ ಜನರಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮ ಮಾಡಿದ್ದಾರೆ” ಎಂದು ಟೀಕಿಸಿದ್ದಾರೆ.

“ನಮ್ಮ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ನಾವು ಅಕ್ರಮ ಇದ್ದದ್ದನ್ನು ಸಕ್ರಮ ಮಾಡಿದ್ದೇವೆ. ಅದರ ಮುಖಾಂತರ ಸಾಲ ಸಿಗುವ ವ್ಯವಸ್ಥೆ ಮಾಡಿದ್ದೇವೆ. ಈಗ ಜನರ ಆಸ್ತಿಯನ್ನು ಅವರೇ ಕೊಂಡುಕೊಳ್ಳುವ ವ್ಯವಸ್ಥೆ ಮಾಡಿ ಕಾಂಗ್ರೆಸ್ ಸರ್ಕಾರ ಬರಿದಾದ ಖಜಾನೆ ತುಂಬಲು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಾ ಶುಲ್ಕವನ್ನು ಬಡವರ ತಲೆ ಮೇಲೆ ಹೇರಿದೆ. ಒಬ್ಬ ಬಡವ 3-4 ಲಕ್ಷ ಕಟ್ಟುವ ಪರಿಸ್ಥಿತಿ ಬಂದಿದೆ. ಅಷ್ಟೇ ಅಲ್ಲ, ಈ ವ್ಯವಸ್ಥೆ ಮಾಡಲು ಕಂದಾಯ ಇಲಾಖೆಯಲ್ಲಿ ಬಹಳ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಭ್ರಷ್ಟಾಚಾರದ ಸಾಧನೆಯ ಸಮಾವೇಶ. ಬಡವರ ತಲೆ ಮೇಲೆ ಆರ್ಥಿಕ ಭಾರದ ಹೊಡೆತವನ್ನು ಈ ಸರ್ಕಾರ ಕೊಡುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಕಾಂಗ್ರೆಸ್​​ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ

“ಇದೇ ಜಾಗದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆ ಅಡಿಯಲ್ಲಿ ಯಾವುದೇ ಮನೆಗಳನ್ನು ಕಟ್ಟುವ ಪ್ರಕ್ರಿಯೆ ರಾಜ್ಯದಲ್ಲಿ ನಡೆಯುತ್ತಿಲ್ಲ. ಒಂದು ಸಾವಿರ ದಿವಸದ ವ್ಯರ್ಥ ಆಡಳಿತದ ಶೂನ್ಯ ಸಾಧನೆಯ ಈ ಸಮಾವೇಶವನ್ನು ಬಡವರು ಹಿಡಿ ಶಾಪ ಹಾಕುತ್ತಿರುವುದು ಸತ್ಯ. ಇದು ಅತ್ಯಂತ ಖಂಡನೀಯ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Sat, 14 February 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ