ಎಕ್ಸಿಟ್​ಪೋಲ್​ನಿಂದ ಕಾಂಗ್ರೆಸ್ ಶಾಸಕರಿಗೆ ತಳಮಳ: ಶಾಸಕಾಂಗ ಸಭೆಯಲ್ಲಿ ಧೈರ್ಯ ಹೇಳಿದ ಸಿಎಂ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಸೋಲಿಗೆ ಆಯಾ ಕ್ಷೇತ್ರ ವ್ಯಾಪ್ತಿಯ ಶಾಸಕರು, ಸಚಿವರೇ ಹೊಣೆ ಎಂದು ಕಾಂಗ್ರೆಸ್​​ ಆಂತರಿಕ ವಲಯದಲ್ಲಿ ಹೇಳಲಾಗಿತ್ತು. ಇದೇ ಕಾರಣಕ್ಕೆ ಇದೀಗ ಎಕ್ಸಿಟ್ ಪೋಲ್ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಶಾಸಕರಲ್ಲಿ ಆತಂಕ ಮನೆ ಮಾಡಿದೆ. ಹೀಗಾಗಿ ಭಾನುವಾರ ನಡೆದ ಸಿಎಲ್​ಪಿ ಸಭೆಯಲ್ಲಿ ಶಾಸಕರಿಗೆ ಸಿಎಂ ಧೈರ್ಯದ ಮಾತುಗಳನ್ನಾಡಿದ್ದಾರೆ.

ಎಕ್ಸಿಟ್​ಪೋಲ್​ನಿಂದ ಕಾಂಗ್ರೆಸ್ ಶಾಸಕರಿಗೆ ತಳಮಳ: ಶಾಸಕಾಂಗ ಸಭೆಯಲ್ಲಿ ಧೈರ್ಯ ಹೇಳಿದ ಸಿಎಂ ಸಿದ್ದರಾಮಯ್ಯ
ಎಕ್ಸಿಟ್​ಪೋಲ್​ನಿಂದ ಕಾಂಗ್ರೆಸ್ ಶಾಸಕರಿಗೆ ತಳಮಳ: ಶಾಸಕಾಂಗ ಸಭೆಯಲ್ಲಿ ಧೈರ್ಯ ಹೇಳಿದ ಸಿಎಂ ಸಿದ್ದರಾಮಯ್ಯ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on:Jun 03, 2024 | 7:55 AM

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆ (Lok Sabha Elections) ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಯಾರು ದೇಶದ ಗದ್ದುಗೆ ಹಿಡಿಯಲಿದ್ದಾರೆ ಎಂಬ ಕುತೂಹಲ 160 ಕೋಟಿ ಭಾರತೀಯರಲ್ಲಿ ಗರಿಗೆದರಿದೆ. ಈ ಮಧ್ಯೆ ಮತಗಟ್ಟೆ ಸಮೀಕ್ಷೆಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಭರ್ಜರಿ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಇಂಡಿಯಾ ಮೈತ್ರಿಕೂಟ 150 ಸ್ಥಾನಗಳಿಂದ 200ರ ಒಳಗೆ ಗೆಲ್ಲಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಈ ಎಕ್ಸಿಟ್‌ ಪೋಲ್‌ ಕೇಸರಿ ಪಾಳಯ ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿದೆ. ಆದರೆ, ಕಾಂಗ್ರೆಸ್ (Congress) ಪಾಳಯದಲ್ಲಿ ತಳಮಳ ಸೃಷ್ಟಿಯಾಗಿದೆ. ಇದೆಲ್ಲಾ ಬೋಗಸ್ ಎಕ್ಸಿಟ್ ಪೋಲ್ ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಕಿಡಿಕಾರಿದ್ದಾರೆ. 295 ಸ್ಥಾನಗಳಲ್ಲಿ ಗೆಲ್ಲೋದಾಗಿ ರಾಹುಲ್ ಗಾಂಧಿ, ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಾರೂ ಧೃತಿಗೆಡಬೇಡಿ: ಶಾಸಕರಿಗೆ ಸಿಎಂ ಆತ್ಮಸ್ಥೈರ್ಯ

ಕರ್ನಾಟಕದಲ್ಲೂ ಕಾಂಗ್ರೆಸ್‌ ಎರಡಂಕಿ ದಾಟಲ್ಲ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಇದು ಕೈ ಶಾಸಕರಲ್ಲಿ ಕಳವಳ ತಂದಿಟ್ಟಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಭಾನುವಾರ ರಾತ್ರಿ ಶಾಸಕಾಂಗ ಸಭೆ ಕರೆದಿದ್ದರು. ಸಭೆಯಲ್ಲಿ ಮತದಾನೋತ್ತರ ಸಮೀಕ್ಷಾ ವರದಿ, ಲೋಕಸಭೆ ಚುನಾವಣೆ ಫಲಿತಾಂಶ, ಎಂಎಲ್ಸಿ ಚುನಾವಣೆ, ಮುಂದಿನ ಸಾಧ್ಯ ಸಾಧ್ಯತೆಗಳ ಬಗ್ಗೆ ಚರ್ಚಿಸಲಾಗಿದೆ.

ಸಿಎಲ್‌ಪಿ ಸಭೆಯಲ್ಲಿ ಚರ್ಚಿಸಿದ್ದೇನು?

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್​​ಗೆ ಸಂಕಷ್ಟ ಎಂದು ರಾಜ್ಯ ಕಾಂಗ್ರೆಸ್‌ನ ಶಾಸಕರು ಆತಂಕಗೊಂಡಿದ್ದಾರೆ. ನಿನ್ನೆ ಸಿಎಲ್‌ಪಿ ಸಭೆಯಲ್ಲಿ ಸಿಎಂ, ಡಿಸಿಎಂ ಇದೇ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಧೈರ್ಯ ತುಂಬಿದ್ದಾರೆ. ಮತದಾನೋತ್ತರ ಸಮೀಕ್ಷೆ ವರದಿ ನೋಡಿ ಯಾರೂ ಧೃತಿಗೆಡೇಡಿ. ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದೇವೆ. ಕ್ಷೇತ್ರಗಳಲ್ಲಿ ಭಿನ್ನಾಭಿಪ್ರಾಯವಿಲ್ಲದೆ ಕೆಲಸ ಮಾಡಿದ್ದೇವೆ. ಚುನಾವಣೆ ಬಗ್ಗೆ ನಾವು ಕೂಡ ವರದಿ ತರಿಸಿಕೊಂಡಿದ್ದೇವೆ. ಏನೇ ಆದರೂ ಕರ್ನಾಟಕದಲ್ಲಿ ನಾವು ಎರಡಂಕಿ ದಾಟುತ್ತೇವೆ. ಗುಪ್ತಚರ ಇಲಾಖೆ ವರದಿ ಪ್ರಕಾರ 14-18 ಸ್ಥಾನಗಳಲ್ಲಿ ಗೆಲ್ಲುವ ಅವಕಾಶವಿದೆ. ಹೀಗಾಗಿ ಯಾರೂ ಕೂಡ ಧೃತಿಗೆಡುವ ಅವಶ್ಯಕತೆಯಿಲ್ಲ ಎಂದು ಕೈ ಶಾಸಕರಿಗೆ ಸಿಎಂ, ಡಿಸಿಎಂ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

‘ಮಾಧ್ಯಮಗಳು ಯಾಕೆ ಆ ರೀತಿ ಕೊಟ್ಟಿದ್ದಾವೆ ಗೊತ್ತಿಲ್ಲ’

ಇನ್ನು ಸಿಎಲ್‌ಪಿ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಲ್ಲಾ ಮಾಧ್ಯಮಗಳು ಯಾಕೆ ಆ ರೀತಿ ವರದಿ ಕೊಟ್ಟಿದ್ದಾವೆ ಗೊತ್ತಿಲ್ಲ. ಅದೇನೆ ಇರಲಿ ನಾವು ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಇಂಡಿಯಾ ಮೈತ್ರಿಕೂಟಕ್ಕೂ ಗೆಲುವು ಆಗಲಿದೆ‌. ಇಂದಿನ ಎಐಸಿಸಿ ಅಧ್ಯಕ್ಷರ ಜೊತೆಗಿನ ಸಭೆಯಲ್ಲೂ ಅದೇ ವಿಶ್ವಾಸ ವ್ಯಕ್ತವಾಗಿದೆ ಎಂದು ಶಾಸಕರು, ಸಚಿವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ.

ಇದನ್ನೂ ಓದಿ: TV9 Polstrat Exit Poll: ಕರ್ನಾಟಕದಲ್ಲಿ ಗ್ಯಾರಂಟಿ ‘ಕೈ’ ಹಿಡಿದನೇ ಮತದಾರ? ಟಿವಿ9 ಪೋಲ್​ಸ್ಟ್ರಾಟ್ ಮತಗಟ್ಟೆ ಸಮೀಕ್ಷೆ ವಿವರ ಇಲ್ಲಿದೆ

400 ಸೀಟ್‌ಗಿಂತ ಹೆಚ್ಚು ಗೆಲ್ಲುತ್ತೇವೆ ಎಂದ ಜೋಶಿ

ಎಕ್ಸಿಟ್‌ಪೋಲ್ ಭವಿಷ್ಯದಿಂದ ಬಿಜೆಪಿ ನಾಯಕರು ಹಿರಿಹಿರಿ ಹಿಗ್ಗಿದ್ದಾರೆ. ಎಕ್ಸಿಟ್‌ಪೋಲ್‌ಗಿಂತ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೂನ್ 4ರ ನಂತ್ರ ಟಕಾ ಟಕ್ ಗಿರಾಕಿಗಳನ್ನ ಹುಡುಕಬೇಕು ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Mon, 3 June 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ