AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಿಗೆ ಅಪಮಾನ ಆರೋಪ: ಎಚ್​ಡಿ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ

ಚುನಾವಣೆ ಹೊತ್ತಲ್ಲಿ ಒಂದು ಹೇಳಿಕೆ ಒಂದು ಪಕ್ಷಕ್ಕೆ ಎಷ್ಟು ದುಬಾರಿ ಆಗುತ್ತೆ. ಮತ್ತೊಂದು ಪಕ್ಷಕ್ಕೆ ಎಷ್ಟು ಲಾಭ ತಂದು ಕೊಡುತ್ತೆ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಇದೀಗ, ಮಾಜಿ ಸಿಎಂ ಕುಮಾರಸ್ವಾಮಿ ಗ್ಯಾರಂಟಿ ಟೀಕಿಸೋ ಭರದಲ್ಲಿ ಆಡಿದ ಮಾತು ಬಿಜೆಪಿ-ಜೆಡಿಎಸ್​ಗೆ ದುಬಾರಿ ಆಗ್ತಿದೆ. ಹೌದು...ಕಾಂಗ್ರೆಸ್ ಗ್ಯಾರಂಟಿಯಿಂದ ನನ್ನ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಎಚ್​ಡಿಕೆ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ಮಹಿಳೆಯರಿಗೆ ಅಪಮಾನ ಆರೋಪ: ಎಚ್​ಡಿ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on:Apr 15, 2024 | 8:54 PM

Share

ಬೆಂಗಳೂರು, (ಏಪ್ರಿಲ್ 15): ‘ಈ ಸರ್ಕಾರ ಐದು ಗ್ಯಾರಂಟಿ (guarantee scheme) ಘೋಷಣೆ ಮಾಡಿ, ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ’ ಎನ್ನುವ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನೇ ಲೋಕಸಭಾ ಚುನಾವಣೆಗೆ ಅಸ್ತ್ರವನ್ನಾಗಿರು ಮಾಡಿಕೊಂಡಿರುವ ಕಾಂಗ್ರೆಸ್, ಎಚ್​ಡಿಕೆ ವಿರುದ್ಧ ಪ್ರತಿಭಟನೆಗಿಳಿದಿದೆ. ಈಗಾಗಲೇ ಈ ಸಂಬಂಧ ರಾಜ್ಯ ಮಹಿಳಾ ಆಯೋಗ ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ಬಗ್ಗೆ ಉತ್ತರಿಸುವಂತೆ ನೋಟಿಸ್​ ಸಹ ಜಾರಿ ಮಾಡಿದೆ. ಇದೀಗ ಕಾಂಗ್ರೆಸ್​ ಮತ್ತೊಂದೆ ಹೆಜ್ಜೆ ಮುಂದೆ ಹೋಗಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾಜಿ ಸಂಸದ ಉಗ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ ಅವರು ಇಂದು(ಏಪ್ರಿಲ್ 15) ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹೇಳಿಕೆಗೆ ಸಮಜಾಯಿಷಿ ನೀಡಿ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ. ಅಲ್ಲದೇ ಕ್ಷಮೆ ಯಾಚಿಸುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಕುಮಾರಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ರಾಜ್ಯ NDA ನಾಯಕರಿಗೆ ಶಾಕ್​​: ಸಂಜಯ ಪಾಟೀಲ್​, ಕುಮಾರಸ್ವಾಮಿಗೆ ನೋಟಿಸ್; ಮಹಿಳಾ ಆಯೋಗ

ದಳಪತಿ ಮೇಲೆ ಮುಗಿಬಿದ್ದ ಕಾಂಗ್ರೆಸ್!

ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಪಡೆ ನಿಗಿನಿಗಿ ಅಂತಿದೆ. ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಆದಿಯಾಗಿ ಸಚಿವರು, ಕಾಂಗ್ರೆಸ್ ನಾಯಕರು ತಿರುಗೇಟು ನೀಡುತ್ತಿದ್ದಾರೆ. ದಾರಿ ತಪ್ಪಿದ್ದಾರೆ ಅಂದ್ರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ. ಇನ್ನು ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಖಂಡಿಸಿದೆ. ಅಲ್ಲದೇ ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಇದೀಗ ನೋಟಿಸ್​ ಸಹ ಜಾರಿ ಮಾಡಿದೆ.

ಕುಮಾರಸ್ವಾಮಿ ಏನೇ ಹೇಳಿದ್ರು, ಕಾಂಗ್ರೆಸ್ ಪಾಲಿಗಂತು ಬ್ರಹ್ಮಾಸ್ತ್ರ ಸಿಕ್ಕಂತಾಗಿದೆ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಪ್ರತಿಭಟನೆಗೆ ಕರೆ ನೀಡಲು ಡಿಕೆ ಶಿವಕುಮಾರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಹೀಗಾಗಿ ದಾರಿ ತಪ್ಪಿದ ದಂಗಲ್ ಇನ್ಯಾವ ಹಂತಕ್ಕೆ ಹೋಗುತ್ತೋ ಕಾದು ನೋಡಬೇಕಿದೆ.

ಜೆಡಿಎಸ್ ನಿಂದ ಮಹಿಳಾ ಆಯೋಗಕ್ಕೆ ದೂರು

ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್​ ಕುಮಾರಸ್ವಾಮಿ ವಿರುದ್ಧ ಮಗಿಬಿದ್ದಿದೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್​ ಸಹ ಕಾಂಗ್ರೆಸ್​ನವರು ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ಹೇಮಮಾಲಿನಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಜೆಡಿಎಸ್​, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:51 pm, Mon, 15 April 24

Follow Us
TV9 Web
TV9 Web

TV9 Kannada

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!