AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನ: ವೇಣುಗೋಪಾಲ್​

ಇಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಚಿವರ ಜೊತೆ ಸಭೆ ಮಾಡಲಾಗಿದೆ. ರಾಜ್ಯದ ಗಂಭೀರ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಪ್ರತಿಕ್ರಿಯಿಸಿದ್ದು, ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನ: ವೇಣುಗೋಪಾಲ್​
ಸಿಎಂಗೆ ಶೋಕಾಸ್ ನೋಟಿಸ್​​ ಹುನ್ನಾರ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನ: ವೇಣುಗೋಪಾಲ್​
ಪ್ರಸನ್ನ ಗಾಂವ್ಕರ್​
| Edited By: |

Updated on: Aug 04, 2024 | 7:20 PM

Share

ಬೆಂಗಳೂರು, ಆಗಸ್ಟ್​ 04: ಸಿಎಂ ಸಿದ್ದರಾಮಯ್ಯ (Siddaramaiah) ಶೋಕಾಸ್ ನೋಟಿಸ್ ನೀಡಲು ರಾಜಭವನ ಬಳಸಿಕೊಂಡಿದ್ದಾರೆ. ಈ ಹುನ್ನಾರದ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಎಐಸಿಸಿ  ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ (KC Venugopal)​ ಹೇಳಿದ್ದಾರೆ. ನಗರದಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರ ಜೊತೆ ಸಭೆಯ ಬಳಿಕ ಪ್ರತಿಕ್ರಿಯಿಸಿದ ಅವರು, ರಾಜ್ಯದ ಜನತೆಗೆ ಎಲ್ಲವನ್ನೂ ತಿಳಿಸಿ ಎಂದು ಸಚಿವರಿಗೆ ಸೂಚಿಸಿದ್ದೇವೆ ಎಂದಿದ್ದಾರೆ.

ನಾವು ಭಯ ಪಡುತ್ತಿಲ್ಲ, ನಾವು ಎಲ್ಲವನ್ನೂ ಎದುರಿಸಲು ಸನ್ನದ್ದರಾಗಿದ್ದೇವೆ: ವೇಣುಗೋಪಾಲ್

ಭ್ರಷ್ಟಾಚಾರದ ಬಗ್ಗೆ ಬಿಜೆಪಿ ನಾಯಕರು ಮಾತಾಡುವುದು ದೊಡ್ಡ ಜೋಕ್. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ದ ಎಷ್ಟು ಪ್ರಕರಣಗಳಿಲ್ಲ? ಪ್ರಜ್ವಲ್ ರೇವಣ್ಣ ವಿರುದ್ದ ಎಷ್ಟು ಪ್ರಕರಣಗಳಿಲ್ಲ?  ಇದಕ್ಕಾಗಿಯೇ ಸಿಎಂ ವಿರುದ್ದ ಅವರು ಮಾತಾಡುತ್ತಿದ್ದಾರೆ. ನಾವು ಭಯ ಪಡುತ್ತಿಲ್ಲ, ನಾವು ಎಲ್ಲವನ್ನೂ ಎದುರಿಸಲು ಸನ್ನದ್ದರಾಗಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಅನುಮಾನಾಸ್ಪದ ಸಾವು: ಆಡಿಯೋ ಬಗ್ಗೆ ಸ್ನೇಹಿತನ ಸ್ಫೋಟಕ ಹೇಳಿಕೆ

ಬಿಜೆಪಿ ಹುನ್ನಾರದಿಂದಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಿದ್ದಿತ್ತು. ಇದೇ ಮಾದರಿಯಲ್ಲಿ ಕರ್ನಾಟಕ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ ಕಾಂಗ್ರೆಸ್​ ವಿರುದ್ಧ ಹುನ್ನಾರ ಆಗಿದ್ದನ್ನು ಗಮನಿಸಬಹುದು. ಅವರವರ ಮಕ್ಕಳ ರಕ್ಷಣೆ ಮಾಡಿಕೊಳ್ಳಲು ಕಾಂಗ್ರೆಸ್ ವಿರುದ್ಧ ಆರೋಪ ಹೊರಿಸಿದರು ಎಂದಿದ್ದಾರೆ.

ಸಿಎಂ ಪ್ರಾಮಾಣಿಕತೆ ಬಗ್ಗೆ ಎಲ್ಲರಿಗೂ ಗೊತ್ತಿದೆ, ಅವರು ಹೊಸಬರಲ್ಲ. ಎಲ್ಲಿ ಶುರು ಮಾಡಿ ಎಲ್ಲಿಗೆ ಬಂದು ತಲುಪಿದ್ದಾರೆ ಅಂತಾ ಗೊತ್ತಿದೆ. ಸಿದ್ದರಾಮಯ್ಯ ಚಾರಿತ್ರ್ಯದ ಬಗ್ಗೆ ಎಲ್ಲರಿಗೂ ಅರಿವಿದೆ. ಬಿಜೆಪಿ, ಜೆಡಿಎಸ್‌ಗೆ ಹಿನ್ನಡೆ ಆಗಬಹುದೆಂದು ಷಡ್ಯಂತ್ರ ಮಾಡಿ ಹುನ್ನಾರ ಮಾಡಲಾಗಿದೆ. ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸಲು ಹೀಗೆ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸಿಎಂ ಆದೇಶಕ್ಕೂ ಇಲ್ಲ ಕಿಮ್ಮತ್ತು, ನಿವೃತ್ತ ಅಧಿಕಾರಿಯನ್ನೇ 2 ವರ್ಷ ಮುಂದುವರಿಸಲು ಜಮೀರ್ ಸೂಚನೆ

ಸಭೆಯಲ್ಲಿ ಸಚಿವ ಎಂಬಿ ಪಾಟೀಲ್, ಸಚಿವ ಕೆಎನ್ ರಾಜಣ್ಣ, ಸಚಿವ ಎಸ್​ಎಸ್ ಮಲ್ಲಿಕಾರ್ಜುನ, ಡಿಸಿಎಂ ಡಿಕೆಶಿವಕುಮಾರ್, ಶರಣಪ್ರಕಾಶ್ ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗ ರೆಡ್ಡಿ, ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಕೆಸಿ ವೇಣುಗೋಪಾಲ್, ಭೈರತಿ ಸುರೇಶ್, ಚೆಲುವರಾಯಸ್ವಾಮಿ, ಹೆಚ್​ಕೆ ಪಾಟೀಲ್ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು