ಅಂಬೇಡ್ಕರರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್; ಸಿದ್ದರಾಮಯ್ಯ ತಮ್ಮ ಸಾಫ್ಟ್​​​ವೇರ್ ಅಪ್​ಡೇಟ್ ಮಾಡ್ಕೊಳ್ಳಲಿ- ಸಿಟಿ ರವಿ

ಭಾರತದತ್ತ ಕೇಂದ್ರಿತ ವಿದೇಶಾಂಗ ನೀತಿ ಯುಗ ಆರಂಭ ಆಗಿದೆ. ಮೋದಿಯವರು ಪ್ರಧಾನಿ ಆದ ಬಳಿಕ ಭಾರತ ಕೇಂದ್ರಿತ ವಿದೇಶಾಂಗ ನೀತಿಗೆ ಒತ್ತು ನೀಡಿದರು. ಸಂಸತ್ತಿನಲ್ಲಿ ವಿಪಕ್ಷಗಳ ಅಸಹಕಾರದ ನಡುವೆಯೂ ಸರ್ಕಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ - CT Ravi

ಅಂಬೇಡ್ಕರರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್; ಸಿದ್ದರಾಮಯ್ಯ ತಮ್ಮ ಸಾಫ್ಟ್​​​ವೇರ್ ಅಪ್​ಡೇಟ್ ಮಾಡ್ಕೊಳ್ಳಲಿ- ಸಿಟಿ ರವಿ
ಸಿಟಿ ರವಿ
Follow us
| Updated By: ಸಾಧು ಶ್ರೀನಾಥ್​

Updated on:Aug 12, 2021 | 1:12 PM

ಬೆಂಗಳೂರು: ಭಾರತದತ್ತ ಕೇಂದ್ರಿತ ವಿದೇಶಾಂಗ ನೀತಿ ಯುಗ ಆರಂಭ ಆಗಿದೆ. ಮೋದಿಯವರು ಪ್ರಧಾನಿ ಆದ ಬಳಿಕ ಭಾರತ ಕೇಂದ್ರಿತ ವಿದೇಶಾಂಗ ನೀತಿಗೆ ಒತ್ತು ನೀಡಿದರು. ಸಂಸತ್ತಿನಲ್ಲಿ ವಿಪಕ್ಷಗಳ ಅಸಹಕಾರದ ನಡುವೆಯೂ ಸರ್ಕಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. 671 ಒಬಿಸಿ ಸಮುದಾಯಗಳು ನ್ಯಾಯ ಪಡೆಯಲು ಸಾಧ್ಯವಾಗಲಿದೆ. ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ. ಇದರಿಂದ ಬಿಜೆಪಿಯ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯ ಬದ್ಧತೆ ಸಾಬೀತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಹೇಳಿದ್ದಾರೆ.

ನಮ್ಮ ರಾಜಕೀಯ ವಿರೋಧಿಗಳು ಹಳೆಯ ಗ್ರಾಮಾಫೋನ್ ಪ್ಲೇಟ್ ತಿರುಗಿಸುತ್ತಲೇ ಇರ್ತಾರೆ. ಅದರಲ್ಲಿ ಒಬ್ಬರು ಸಿದ್ದರಾಮಯ್ಯ. ಸಿದ್ದರಾಮಯ್ಯರು ಅಪ್ ಡೇಟ್ ಆಗಬೇಕು. ನಾವು ಅಂಬೇಡ್ಕರ್ ವಿರೋಧಿ ಅಲ್ಲ. ಅಂಬೇಡ್ಕರ್ ರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್. ನಿಮ್ಮ ಸಾಫ್ಟ್ ವೇರ್ ಅಪ್ ಡೇಟ್ ಮಾಡ್ಕೊಳ್ಳಿ. ಕಳೆದ ಏಳು ವರ್ಷಗಳಿಂದ ಹಿಂದುಳಿದ ವರ್ಗದವರೇ ಪ್ರಧಾನಿಯಾದವರು. ಕಾಂಗ್ರೆಸ್ ಕಲಾಂರನ್ನು ಎರಡನೇ ಅವಧಿಗೆ ರಾಷ್ಟ್ರಪತಿ ಮಾಡಿಲ್ಲ. ಮೋದಿ ಸಂಪುಟದಲ್ಲಿ 27 ಒಬಿಸಿ ವರ್ಗಕ್ಕೆ ಸೇರಿದವರಿಗೆ ಸಚಿವ ಸ್ಥಾನ ಸಿಕ್ಕಿದೆ, ಪ್ರಾದೇಶಿಕ ನ್ಯಾಯವೂ ಸಿಕ್ಕಿದೆ ಎಂದು ಬಿಜೆಪಿ ನಾಯಕ ಸಿ ಟಿ ರವಿ ಹೇಳಿದರು.

ಸಿದ್ದರಾಮಯ್ಯಗೆ ಹ್ಯಾಪಿ ಬರ್ಥ್​​​ ಡೇ ಹೇಳಿದ ರವಿ:

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ. ವೈಯುಕ್ತಿಕ ಬದುಕು ಚೆನ್ನಾಗಿರಲಿ. ಸಿದ್ದರಾಮಯ್ಯನವರಿಗೆ ರಾಜಕೀಯೇತರವಾಗಿ ಶುಭ ಹಾರೈಸುತ್ತೇನೆ ಎಂದು ರವಿ ಇದೇ ವೇಳೆ ಸಿದ್ದರಾಮಯ್ಯಗೆ ಜನ್ಮದಿನದ ಶುಭಾಶಯ ಹೇಳಿದರು.

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ, ಬಿಜೆಪಿ ಇದಕ್ಕೆ ಹೆದರುವುದಿಲ್ಲ ಮಣಿಯುವುದಿಲ್ಲ- ರವಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಪ್ರಕರಣವನ್ನು ಪ್ರಸ್ತಾಪಿಸಿದ ಸಿಟಿ ರವಿ, ಈ ಘಟನೆಯನ್ನು ಬಿಜೆಪಿ ಖಂಡಿಸುತ್ತದೆ. ವಿಶೇಷ ತನಿಖಾ ತಂಡದ ಮೂಲಕ ತನಿಖೆ‌ ಮಾಡಬೇಕು. ಹೀನ ಕೃತ್ಯ ನಡೆಸಿದವರ ಮೇಲೆ ಕ್ರಮ ಆಗಬೇಕು. ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗ ಇಲ್ಲ. ಇಂತಹ ಘಟನೆಗಳಿಗೆ ನಾವು ಹೆದರುವುದಿಲ್ಲ ಮಣಿಯುವುದಿಲ್ಲ ಎಂದು ಬೆಂಗಳೂರಿನಲ್ಲಿ ಗುಡುಗಿದರು.

ಕಾಂಗ್ರೆಸ್ ಕಚೇರಿಯಲ್ಲಿ ಬೇಕಾದರೆ ನೆಹರು ಹುಕ್ಕಾ ಬಾರ್ ತೆಗೆಯಲಿ:

ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ಬೇಕಾದರೆ ತೆಗೆಯಲಿ. ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ಮಾಡಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಎಂದು ಸಿಟಿ ರವಿ ಹೇಳಿದರು.

(congress defeated dr br ambedkar twice no social justice by congress says bjp leader ct ravi in bangalore)

Published On - 12:45 pm, Thu, 12 August 21

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು