ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್ಆರ್ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣವನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಈ ಕೇಸ್ನ್ನು ಸಿಬಿಐಗೆ ವಹಿಸಿ ಎಂದು ಪ್ರತಿಭಟನೆ ಮೂಲಕ ಆಗ್ರಹಿಸುತ್ತಿದ್ದಾರೆ.
ಮಾಜಿ ಮೇಯರ್ ರಾಮಚಂದ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಎದುರು ಕೈ ಕಾರ್ಯಕರ್ತರು ಧರಣಿ ನಡೆಸುತ್ತಿದ್ದು, ಸಂತೋಷ್ ಆತ್ಮಹತ್ಯೆಗೆ ಪ್ರಯತ್ನಿಸಲು ಸತ್ಯ ಕಾರಣವೇನೆಂದು ತಿಳಿಯಬೇಕು. ಹಾಗಾಗಿ ಕೂಡಲೇ ಇದನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಏನೋ ಗೌಪ್ಯವಿದೆ…!
ಇಂದು ಕಾರವಾರದಲ್ಲಿ ಮಾತನಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಅದ್ಯಾವುದೋ ಪರ್ಸನಲ್ ವಿಡಿಯೋ ಇದೆ ಎಂದು ಹೇಳಿದ್ದಾರೆ. ಇದರಲ್ಲಿ ಏನೋ ಗೌಪ್ಯವಿದೆ. ಸರ್ಕಾರ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಬೇರೆ ತನಿಖೆ ಆಗಬೇಕು ಎಂದಿದ್ದಾರೆ.
ಇದನ್ನೂ ಓದಿ: CM ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಯ್ತಾ.. ಆ ಪರ್ಸನಲ್ ವಿಡಿಯೋ?
Published On - 5:09 pm, Sat, 28 November 20