ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್: ಕಾಂಗ್ರೆಸ್​​ ಮುಖಂಡ ಪಕ್ಷದಿಂದ ಉಚ್ಚಾಟನೆ​

| Updated By: ರಮೇಶ್ ಬಿ. ಜವಳಗೇರಾ

Updated on: Jun 07, 2024 | 3:55 PM

ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರಪ್ಪ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ಟ್ರೋಲ್ ಆಗುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ ಕೆ ಸುಧಾಕರ್ ಅವರಿಗೆ ರಾಜೀನಾಮೆ ಸವಾಲ್ ಹಾಕಿ ಇದೀಗ ಮುಜುಗರಕ್ಕೀಡಾಗಿದ್ದು, ಅವರ ರಾಜೀನಾಮೆ ಪತ್ರ ಸಹ ವೈರಲ್ ಆಗಿದೆ. ಇನ್ನು ಈ ರಾಜೀನಾಮೆ ಪತ್ರವನ್ನು ಬೇರೆ ಯಾರು ಅಲ್ಲ ಕಾಂಗ್ರೆಸ್​ ಮುಖಂಡನೇ ವೈರಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ, ಈ ಹಿನ್ನೆಲೆಯಲ್ಲಿ ಇದೀಗ ಕೈ ಮುಖಂಡ ಉಚ್ಛಾಟನೆಗೊಂಡಿದ್ದಾರೆ.

ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್: ಕಾಂಗ್ರೆಸ್​​ ಮುಖಂಡ ಪಕ್ಷದಿಂದ ಉಚ್ಚಾಟನೆ​
ಪ್ರದೀಪ್ ಈಶ್ವರ್​
Follow us on

ಬೆಂಗಳೂರು/ಚಿಕ್ಕಬಳ್ಳಾಪುರ, (ಜೂನ್ 07): ಲೋಕಸಭಾ ಚುನಾವಣೆ ಫಲಿತಾಂಶ (Loksabha Election Results 2024) ಪ್ರಕಟವಾಗುತ್ತಿದ್ದಂತೆಯೇ ಶಾಸಕ ಪ್ರದೀಪ್ ಈಶ್ವರ್ (Pradeep Eshwar)​ ರಾಜೀನಾಮೆ ಪತ್ರ ವೈರಲ್ ಆಗಿದೆ. ಸ್ವತಃ ಕಾಂಗ್ರೆಸ್​ ಪಕ್ಷದ ಪದಾಧಿಕಾರಿಯೊಬ್ಬರು ನಕಲಿ ರಾಜೀನಾಮೆ ಪತ್ರ ರೆಡಿ ಮಾಡಿ ವೈರಲ್​ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೀಗಾಗಿ ಪಕ್ಷದ ಯುವ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಯೂತ್ ಕಾಂಗ್ರೆಸ್ (Youth congress) ಕಾರ್ಯದರ್ಶಿಯಾಗಿದ್ದ ಎಸ್.ಎಂ ಜಗದೀಶ್ ಎಂಬುವರೇ ಪ್ರದೀಪ್ ಈಶ್ವರ್ ಅವರ ನಕಲಿ ರಾಜೀನಾಮೆ ಪತ್ರವನ್ನು ವೈರಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದ ಜಗದೀಶ್ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಶಾಸಕ ಪ್ರದೀಪ್ ಈಶ್ವರ್ ಅವರ ನಕಲಿ ರಾಜೀನಾಮೆ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಪ್ರದೀಪ್ ಈಶ್ವರ್ ಮನೆಗೆ ಕಲ್ಲು ಹೊಡೆಸಿದ ಆರೋಪ ಕೇಳಿಬಂದಿದೆ. ಈ ಎಲ್ಲಾ ಆರೋಪಗಳ ಮೇಲೆ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಜಗದೀಶ್​ನನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಪ್ರದೀಪ್ ಈಶ್ವರ್ ರಾಜೀನಾಮೆ ನೀಡಿದ್ರಾ? ರಾಜೀನಾಮೆ ಪತ್ರ ವೈರಲ್!

ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದ ಬಳಿಕ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ರಾಜೀನಾಮೆ ಮುನ್ನಲೆಗೆ ಬಂದಿದೆ. ಬಿಜೆಪಿ ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್​​ಗಿಂತ ಒಂದೇ ಒಂದು ಹೆಚ್ಚು ಮತ ಪಡೆದುಕೊಂಡಿರೆ ರಾಜೀನಾಮೆ ನೀಡುತ್ತೇನೆ. ಅಲ್ಲದೇ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಸವಾಲ್ ಹಾಕಿದ್ದರು. ಆದ್ರೆ, ಸುಧಾಕರ್ ಚಿಕ್ಕಬಳ್ಳಾಪುರದಲ್ಲೇ 20 ಸಾವಿರಕ್ಕೂ ಅಧಿಕ ಮತಗಳನ್ನು ಲೀಡ್ ಪಡೆದುಕೊಂಡಿದ್ದಾರೆ. ಹೀಗಾಗಿ ಇದೀಗ ಪ್ರದೀಪ್​ ಈಶ್ವರ್ ರಾಜೀನಾಮೆ ಯಾವಾಗ ಎಂದು ಟ್ರೋಲ್ ಮಾಡಲಾಗುತ್ತಿದೆ. ಅಲ್ಲದೇ ಬಿಜೆಪಿ ಕಾರ್ಯಕರ್ತರು ಸಹ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ. ಈ ರಾಜೀನಾಮೆ ಟ್ರೋಲ್ ಮಧ್ಯ ಪ್ರದೀಶ್ ಈಶ್ವರ್​ ಅವರ ರಾಜೀನಾಮೆ ಪತ್ರ ವೈರಲ್ ಆಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಈ ವಿಚಾರ ಪ್ರದೀಪ್ ಈಶ್ವರ್ ಗಮನಕ್ಕೆ ಬಂದಿದ್ದು, ಇದೊಂದು ನಕಲಿ ರಾಜೀನಾಮೆ ಪತ್ರ. ಇದನ್ನು ವೈರಲ್ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ