AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೆ ಚುನಾವಣೆ ಕಾವು: ಉಪ ಚುನಾವಣೆಗಳಿಗೆ ಉಸ್ತುವಾರಿ ಸಮಿತಿ ರಚಿಸಿದ ಕಾಂಗ್ರೆಸ್

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಲವು ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಉಷಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಈ ಉಪಚುನಾವಣೆಗೆ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಾಗಿ ಹಾಗೂ ಅಭ್ಯರ್ಥಿಗಳ ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸುವ ಸಲುವಾಗಿ ಉಸ್ತುವಾರಿ ಸಮಿತಿಗಳು ರಚಿಸಲಾಗಿದೆ. 

ಕರ್ನಾಟಕದಲ್ಲಿ ಮತ್ತೆ ಚುನಾವಣೆ ಕಾವು: ಉಪ ಚುನಾವಣೆಗಳಿಗೆ ಉಸ್ತುವಾರಿ ಸಮಿತಿ ರಚಿಸಿದ ಕಾಂಗ್ರೆಸ್
ಕರ್ನಾಟಕದಲ್ಲಿ ಮತ್ತೆ ಚುನಾವಣೆ ಕಾವು: ಉಪ ಚುನಾವಣೆಗಳಿಗೆ ಉಸ್ತುವಾರಿ ಸಮಿತಿ ರಚಿಸಿದ ಕಾಂಗ್ರೆಸ್
ಪ್ರಸನ್ನ ಗಾಂವ್ಕರ್​
| Edited By: |

Updated on:Jun 19, 2024 | 9:40 PM

Share

ಬೆಂಗಳೂರು, ಜೂನ್​ 19: ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ವಿಧಾನ ಪರಿಷತ್​ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಜುಲೈ 12 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆ ಉಪ ಚುನಾವಣಾ ತಂತ್ರಗಾರಿಕೆ ರೂಪಿಸಲು ಕಾಂಗ್ರೆಸ್ (Congress)​ ಉಸ್ತುವಾರಿ ಸಮಿತಿ ರಚನೆ ಮಾಡಿದೆ. ಸಚಿವರು, ಸಂಸದರು, ಡಿಸಿಸಿ ಅಧ್ಯಕ್ಷರನ್ನೊಳಗೊಂಡ ಉಸ್ತುವಾರಿ ಸಮಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ರಚಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರಕ್ಕೆ ಸಚಿವ ಚಲುವರಾಯಸ್ವಾಮಿ, ಶಿಗ್ಗಾಂವಿ‌ ಕ್ಷೇತ್ರಕ್ಕೆ ಸಚಿವ ಈಶ್ವರ್ ಖಂಡ್ರೆ, ಸಂಡೂರು ಕ್ಷೇತ್ರಕ್ಕೆ ಸಚಿವ ಜಮೀರ್‌ ಅಹಮದ್ ಖಾನ್ ಮತ್ತು ಉಡುಪಿ-ದಕ್ಷಿಣ ಕನ್ನಡ ಪರಿಷತ್ ಸ್ಥಾನದ ಉಪ ಚುನಾವಣೆಗೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.

ಚನ್ನಪಟ್ಟಣ ಕೇತ್ರದಿಂದ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ, ಸಂಸದರಾದ ಬಳಿಜ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೇ ನೀಡಿದ್ದಾರೆ. ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಿಂದ ಸ್ಫರ್ಧಿಸಿ ಗೆದ್ದಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಸಂಸದರಾಗಿ ಆಯ್ಕೆ ಹಿನ್ನೆಲೆ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಡೂರು ಕೇತ್ರದ ಹಾಲಿ ಶಾಸಕರಾಗಿದ್ದ ಇ. ತುಕಾರಾಮ್​ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಡುಪಿ-ದಕ್ಷಿಣ ಕನ್ನಡ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ವಿಧಾನ ಪರಿಷತ್​ ಸ್ಥಾನ ತೆರವಾಗಿತ್ತು.

ಇದನ್ನೂ ಓದಿ: ಚನ್ನಪಟ್ಟಣದಿಂದ ವಿಧಾನಸಭೆ ಉಪ ಚುನಾವಣೆ ಸ್ಪರ್ಧೆ ಇಲ್ಲ, ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಸುತ್ತೇವೆ: ಡಿಕೆ ಸುರೇಶ್

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಲವು ವಿಧಾನಸಭಾ ಕ್ಷೇತ್ರದ ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಉಷಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಈ ಉಪಚುನಾವಣೆಗೆ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಾಗಿ ಹಾಗೂ ಅಭ್ಯರ್ಥಿಗಳ ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸುವ ಸಲುವಾಗಿ ಈ ಮೇಲಿರುವ ಉಸ್ತುವಾರಿ ಸಮಿತಿಗಳು ರಚಿಸಲಾಗಿದೆ.

ಇದನ್ನೂ ಓದಿ: ಪರಿಷತ್ ಚುನಾವಣೆ: ಕಾಂಗ್ರೆಸ್​​ನಿಂದ ಅಚ್ಚರಿ ಅಭ್ಯರ್ಥಿ ಆಯ್ಕೆ: ಯಾರು ಈ ಬಲ್ಕಿಸ್ ಭಾನು?

ಜೂನ್​ 25ರಂದು ಉಪ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದೆ. ಜುಲೈ 2 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 5 ನಾಮಪತ್ರ ವಾಪಸ್​ ಪಡೆಯಲು ಕೊನೆಯ ದಿನವಾಗಿದೆ. ಜುಲೈ 12 ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆ ವರೆಗೂ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ಆರಂಭವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:53 pm, Wed, 19 June 24