ಕೇವಲ ಲಂಚಕ್ಕಾಗಿ ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್​ಗಳನ್ನು ರದ್ದುಮಾಡುತ್ತಿದೆ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Nov 20, 2024 | 2:59 PM

ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರು ಗ್ಯಾರಂಟಿ ಯೋಜನೆಗಳ ವಿರುದ್ಧ ಅಭಿಯಾನವೊಂದನ್ನು ಶುರುಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗ್ಯಾರಂಟಿ ಯೋಜನೆಗಳು ಇನ್ನು ಸಾಕು ನಮ್ಮ ಕ್ಷೇತ್ರಗಳ ರಸ್ತೆಗಳನ್ನು ದುರಸ್ತಿ ಮಾಡಿಕೊಳ್ಳಲು ಹಣ ಬಿಡುಗಡೆ ಮಾಡಿ ಅಂತ ಅಗ್ರಹಿಸಿದ್ದಾರೆ ಎಂದು ಅಶೋಕ ಹೇಳಿದರು.

ಬೆಂಗಳೂರು: ಬಡವರ ಮನೆ ಅನ್ನ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರದ ಪಾಪದ ಕೊಡ ತುಂಬಿದೆ ಅದರ ಮಂತ್ರಿಗಳು ನರಕಕ್ಕೆ ಹೋಗೋದು ಗ್ಯಾರಂಟಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿದರು. ಪರಿಷ್ಕರಣೆ ನೆಪದಲ್ಲಿ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿರುವ ಸರ್ಕಾರ ಕೇವಲ ಲಂಚಕ್ಕಾಗಿ ಇದನ್ನು ಮಾಡುತ್ತಿದೆ, ಹಾಗೆ ಸಂಗ್ರಹವಾಗುವ ಸುಮಾರು ₹20,000 ಕೋಟಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಅಂತ ಸರ್ಕಾರದ ವಿರುದ್ಧ ಕೆಂಡಕಾರುತ್ತಿರುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ನೀಡುವ ಹವಣಿಕೆ ಸರ್ಕಾರದ್ದು ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಇವತ್ತು ದೇಶವೇನೇದರೂ ಉಳಿದಿದ್ದರೆ ಅದು ಬಿಜೆಪಿ ಮತ್ತು ಆರೆಸ್ಸೆಸ್​ನಿಂದ ಮಾತ್ರ: ಅಶೋಕ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.