AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAS Officer Transfer: ಐಎಎಸ್, ಐಪಿಎಸ್ ಆಯ್ತು ಈಗ ಕೆಎಎಸ್ ಸರದಿ; 75 ಮಂದಿ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ ಒಂದೇ ದಿನ 75 ಕೆಎಎಸ್​ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಿವಿಧ ಸ್ಥಳಗಳಿಗೆ ಕೆಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

KAS Officer Transfer: ಐಎಎಸ್, ಐಪಿಎಸ್ ಆಯ್ತು ಈಗ ಕೆಎಎಸ್ ಸರದಿ; 75 ಮಂದಿ ಅಧಿಕಾರಿಗಳ ವರ್ಗಾವಣೆ
ವಿಧಾನಸೌಧ
Ganapathi Sharma
|

Updated on: Jun 20, 2023 | 4:02 PM

Share

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ವರ್ಗಾವಣೆ ಪರ್ವ ಜೋರಾಗಿದೆ. ಸೋಮವಾರವಷ್ಟೇ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಮಂಗಳವಾರ ಒಂದೇ ದಿನ 75 ಕೆಎಎಸ್​ ಅಧಿಕಾರಿಗಳ (KAS Officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಿವಿಧ ಸ್ಥಳಗಳಿಗೆ ಕೆಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಕೆಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸುವುದಕ್ಕೂ ಕೆಲವೇ ಗಂಟೆಗಳ ಮುನ್ನ ಸರ್ಕಾರವು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.

ಐಪಿಎಸ್​ ಅಧಿಕಾರಿ ರವಿ ಡಿ ಚನ್ನಣ್ಣನವರ್ ತಮ್ಮ ವರ್ಗಾವಣೆಗೆ ತಡೆ ತಂದಿದ್ದರಿಂದ ಮುಖಭಂಗಕ್ಕೀಡಾಗಿದ್ದ ಸರ್ಕಾರ ತಾತ್ಕಾಲಿಕವಾಗಿ ಯಾವುದೇ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡದಿರುವ ನಿರ್ಧರಿಸಿತ್ತು. ಇದೀಗ ಮತ್ತೆ ವರ್ಗಾವಣೆ ಆರಂಭಿಸಿದೆ.

ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ಎರಡು ವಾರಗಳ ಹಿಂದೆ ವರ್ಗಾವಣೆ ಮಾಡಲಾಗಿತ್ತು.

ಇದನ್ನೂ ಓದಿ: IAS Officer Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ವಿವರ

ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಸೋಮವಾರ ಸರ್ಕಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಮತ್ತೆ ವರ್ಗಾವಣೆ ಪರ್ವ ಮುಂದುವರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ