ಮೈಸೂರು ದಸರಾ ಮೆರವಣಿಗೆಯಲ್ಲಿ ಅನುರಣಿಸಲಿದೆ ಕಾಂಗ್ರೆಸ್ ಗ್ಯಾರಂಟಿ ಸ್ತಬ್ಧಚಿತ್ರ! ಏರ್​ ಶೋ ನಡೆಸಲು ಚಿಂತನೆ; ಸಿಎಂ ಸಿದ್ದರಾಮಯ್ಯ

ಪ್ರಸಕ್ತ ವರ್ಷ 5 ಗ್ಯಾರಂಟಿಗಳ ಬಗ್ಗೆ ತಿಳಿಸುವ ಸ್ತಬ್ಧಚಿತ್ರ ಇರಲಿದೆ. ಈ ಬಾರಿ ದಸರಾ ಹಬ್ಬವನ್ನು ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಮಾಡಬೇಕು ಎಂದು ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ದಸರಾ ಮೆರವಣಿಗೆಯಲ್ಲಿ ಅನುರಣಿಸಲಿದೆ ಕಾಂಗ್ರೆಸ್ ಗ್ಯಾರಂಟಿ ಸ್ತಬ್ಧಚಿತ್ರ! ಏರ್​ ಶೋ ನಡೆಸಲು ಚಿಂತನೆ; ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
TV9 Web
| Updated By: Digi Tech Desk

Updated on:Aug 04, 2023 | 10:45 AM

ಬೆಂಗಳೂರು: ಈ ಬಾರಿಯ ಮೈಸೂರು ದಸರಾ (Mysuru Dasara) ಮಹೋತ್ಸವದ ಮೆರವಣಿಗೆಯಲ್ಲಿ ಕಾಂಗ್ರೆಸ್ ಸರ್ಕಾರದ 5 ಉಚಿತ ಗ್ಯಾರಂಟಿಗಳ (Guarantee Schemes) ಬಗ್ಗೆ ತಿಳಿಸುವ ಸ್ತಬ್ಧಚಿತ್ರ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೋಮವಾರ ಸಂಜೆ ತಿಳಿಸಿದರು. ‘ಮೈಸೂರು ದಸರಾ ಮಹೋತ್ಸವ ಉನ್ನತ ಮಟ್ಟದ ಸಮಿತಿ’ಯ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿದ ಮಾತನಾಡಿದ ಅವರು, ಪ್ರಸಕ್ತ ವರ್ಷ 5 ಗ್ಯಾರಂಟಿಗಳ ಬಗ್ಗೆ ತಿಳಿಸುವ ಸ್ತಬ್ಧಚಿತ್ರ ಇರಲಿದೆ ಎಂದರು. ಈ ಬಾರಿ ದಸರಾ ಹಬ್ಬವನ್ನು ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಮಾಡಬೇಕು ಎಂದು ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ ಎಂದು ಅವರು ತಿಳಿಸಿದರು.

ದಸರಾ ಪಾರಂಪರಿಕ ಉತ್ಸವ. ಇದು ಹೆಚ್ಚೆಚ್ಚು ಜನರ ಉತ್ಸವ ಆಗಬೇಕು. ವಿಜಯನಗರ ಅರಸರ ಕಾಲದಲ್ಲಿ ಉತ್ಸವ ಹಂಪಿಯಲ್ಲಿ ನಡೆಯುತ್ತಿತ್ತು. ಆಮೇಲೆ ಮೈಸೂರಿನಲ್ಲಿ ರಾಜರುಗಳು ಮಾಡಿಕೊಂಡು ಬಂದರು. ಇದೀಗ ಸರ್ಕಾರ ಆಚರಣೆ ಮಾಡಿಕೊಂಡು ಬರುತ್ತಿದೆ. ಜನರ ಆಕರ್ಷಣೆ ಮಾಡುವುದು, ದೀಪಾಲಂಕಾರ, ಮೆರವಣಿಗೆ, ಜಂಬೂಸವಾರಿ, ಸ್ತಬ್ಧಚಿತ್ರಗಳ ಮೆರವಣಿಗೆ ಮುಖ್ಯ. ಸ್ತಬ್ಧಚಿತ್ರಗಳ ಆಯ್ಕೆ ಮಾಡುವಾಗ ಐದು ಗ್ಯಾರಂಟಿಗಳನ್ನು ಪ್ರತಿಬಿಂಬಿಸುವ ಹಾಗೂ ಅವುಗಳ ಬಗ್ಗೆ ಜನರಿಗೆ ತಿಳಿಸುವಂಥದ್ದನ್ನು ಆಯ್ಕೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಅಕ್ಟೋಬರ್ 15ರಂದು ದಸರಾ ಮಹೋತ್ಸವ ಉದ್ಘಾಟನೆ; ಸಿದ್ದರಾಮಯ್ಯ

ಅಕ್ಟೋಬರ್ 15ರಂದು ಬೆಳಗ್ಗೆ 10.15 ರಿಂದ 10.30 ರೊಳಗೆ ಶುಭ ಲಗ್ನದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಮೈಸೂರು ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ನನಗೆ ಹೊಣೆ ನೀಡಿದ್ದಾರೆ. ದಸರಾ ಪೂರ್ವಭಾವಿ ಸಭೆಯಲ್ಲಿ ಒಬ್ಬರ ಹೆಸರಿನ ಬಗ್ಗೆ ಚರ್ಚೆ ಮಾಡಿದ್ದೇವೆ. ಕೆಆರ್ ಕ್ಷೇತ್ರದ ಶಾಸಕರು ಸುತ್ತೂರು ಶ್ರೀಗಳ ಹೆಸರು ಪ್ರಸ್ತಾಪ ಮಾಡಿದ್ದಾರೆ. ಆದರೆ, ಉದ್ಘಾಟಕರ ಹೆಸರು ಅಂತಿಮವಾಗಿಲ್ಲ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ಏರ್ ಶೋ ಆಯೋಜನಗೆ ಚಿಂತನೆ

ಪ್ರಸಕ್ತ ವರ್ಷ ದಸರಾ ಅಂಗವಾಗಿ ಏರ್ ಶೋ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಈ ವಿಚಾರವಾಗಿ ರಕ್ಷಣಾ ಸಚಿವರ ಜೊತೆ ಚರ್ಚೆ ಮಾಡುತ್ತೇವೆ. ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ದಸರಾ ವೇಳೆ ಏರ್ ಶೋ ಆಯೋಜಿಸಿದ್ದೆವು ಎಂದು ಅವರು ಹೇಳಿದರು. ಮೈಸೂರು ದಸರಾ ಮಹೋತ್ಸವದಲ್ಲಿ ಅನಗತ್ಯ ಖರ್ಚು ಇರಬಾರದು. ಶಕ್ತಿ ಯೋಜನೆ ಜಾರಿಯಾಗಿರುವ ಕಾರಣ ಮಹಿಳೆಯರು ಹೆಚ್ಚು ಬರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: Mysuru Dasara 2023: ದಸರಾ; ಆಗಸ್ಟ್ ಅಂತ್ಯದಲ್ಲಿ ಮೈಸೂರಿಗೆ ಗಜಪಯಣ

ದೀಪಾಲಂಕಾರ ದಸರಾ ಮಹೋತ್ಸವದ ಒಂದು ವಾರ ಆದಮೇಲೂ ಇರಬೇಕು. ಈ ಬಾರಿ ದೀಪಾಲಂಕಾರ ಬಹಳ ಚೆನ್ನಾಗಿ ಇರಬೇಕು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರಬೇಕು. ವಸ್ತು ಪ್ರದರ್ಶನ ಸರ್ಕಾರಿ ಇಲಾಖೆಗಳಿಂದ ಉತ್ತಮವಾಗಿ ನಡೆಯಬೇಕು. ಶ್ರೀರಂಗಪಟ್ಟಣ ಚಾಮರಾಜನಗರ ದಲ್ಲೂ ದಸರಾ ಉತ್ಸವ ನಡೆಯುತ್ತದೆ. ಸ್ಥಳೀಯ ಕಲಾವಿದರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಅವಕಾಶ ನೀಡಬೇಕು. ಕರ್ನಾಟಕದ ಬಹಳ ಒಳ್ಳೆಯ ಕಲಾವಿದರನ್ನು ಗುರುತಿಸಿ ಸಂಗೀತ, ನೃತ್ಯ, ಜಾನಪದ ಪ್ರದರ್ಶನ ಆಯೋಜಿಸಬೇಕು. ಎಲ್ಲ ಪ್ರಕಾರಗಳಲ್ಲಿ ಉತ್ತಮ ಕಲಾವಿದರಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​​​ಸಿ ಮಹದೇವಪ್ಪ, ಸಚಿವ ಶಿವರಾಜ್​ ತಂಗಡಗಿ, ಕೆ ವೆಂಕಟೇಶ್, ಭೈರತಿ ಸುರೇಶ್​​, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಧಿಕಾರಿ ಭಾಗವಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:17 pm, Mon, 31 July 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು