ಬಿಜೆಪಿಯು ಸಮಾಜವನ್ನು ಕಟ್ಟುವ ಕೆಲಸ ಮಾಡಿದರೆ ಕಾಂಗ್ರೆಸ್ ಒಡೆಯುವ ಕೆಲಸ ಮಾಡುತ್ತಿದೆ: ಕಟೀಲು
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಲೇವಡಿ ಮಾಡಿದ್ದಾರೆ. ಬಿಜೆಪಿಯು ಕಟ್ಟುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಟಿಪ್ಪು ಜಯಂತಿಯನ್ನು ಮಾಡಿ ಹಿಂದೂ-ಮುಸ್ಲಿಮರನ್ನು ಒಡೆದರು, ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಹೀಗಾಗಿ ಜನತೆಯು ಕಾಂಗ್ರೆಸ್ ಪಕ್ಷವನ್ನು ತಿರಸ್ಕಾರ ಮಾಡಿರುವ ಕಾರಣ ಇದೀಗ ಭಾರತ್ ಜೋಡೋ ಎನ್ನುವ ನಾಟಕ ಶುರು ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಭಾರತ್ ಜೋಡೋ ಮಧ್ಯೆ ಕಾಂಗ್ರೆಸ್ ನಾಯಕರ ಜಗಳ ಹೆಚ್ಚಾಗಿದೆ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಗಳವೂ ಕೂಡ ಮಿತಿಮೀರಿದೆ. ಚುನಾವಣೆಗೂ ಮುಂಚೆಯೇ ರಾಜ್ಯ ಕಾಂಗ್ರೆಸ್ ಇಬ್ಭಾಗ ಆಗಲಿದೆ, ಅಲ್ಲದೇ ಕಾಂಗ್ರೆಸ್ನಲ್ಲಿ ಮೂರನೇ ಶಕ್ತಿ ಕೇಂದ್ರ ನಿರ್ಮಾಣ ಆಗುತ್ತಿದೆ.
ಮಲ್ಲಿಕಾರ್ಜುನ ಖರ್ಗೆ ಅಧ್ಯರಾದರೆ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯಗೆ ಜಾಗವಿಲ್ಲ. ಮಲ್ಲಿಕಾರ್ಜುನ ಖರ್ಗೆಯನ್ನು ಸೋಲಿಸಿದವರೇ ಸಿದ್ದರಾಮಯ್ಯ, ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸುತ್ತಾರೆ ಎಂದು ಕಟೀಲು ಹೇಳಿದ್ದಾರೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ