AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಅಲರ್ಟ್ ಆದ ‘ಕೈ’ ಹೈಕಮಾಂಡ್; ಲಕ್ಷ್ಮಣ ಸವದಿ ಜೊತೆ ನಿರಂತರ ಸಂಪರ್ಕ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ‘ಕೈ’ ಹೈಕಮಾಂಡ್ ಅಲರ್ಟ್ ಆಗಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಕೂಡ ಪಕ್ಷ ಬಿಡದಂತೆ ಕೈ ನಾಯಕರು ಎಚ್ಚರಿಕೆ ವಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕ ಲಕ್ಷ್ಮಣ ಸವದಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸವದಿಗೆ ಕರೆ ಮಾಡಿ ಚರ್ಚೆ ಮಾಡಿದ್ದಾರೆ.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಅಲರ್ಟ್ ಆದ ‘ಕೈ’ ಹೈಕಮಾಂಡ್; ಲಕ್ಷ್ಮಣ ಸವದಿ ಜೊತೆ ನಿರಂತರ ಸಂಪರ್ಕ
ಲಕ್ಷ್ಮಣ ಸವದಿ
Sahadev Mane
| Updated By: ಆಯೇಷಾ ಬಾನು|

Updated on: Feb 03, 2024 | 10:00 AM

Share

ಬೆಳಗಾವಿ, ಫೆ.03: ಮಾಜಿ ಸಿಎಂ, ಕಾಂಗ್ರೆಸ್​ನ ಎಂಎಲ್​ಸಿ ಆಗಿದ್ದ ಜಗದೀಶ್ ಶೆಟ್ಟರ್ (Jagadish Shettar) ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ಸಿಗದಿದ್ದಕ್ಕೆ ಬಿಜೆಪಿ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಕಾಂಗ್ರೆಸ್ (Congress) ಸೇರಿದ್ದರು. ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಎಂಎಲ್​ಸಿ ಸ್ಥಾನ ನೀಡಿ ಗೌರವಿಸಿತ್ತು. ಇಷ್ಟೆಲ್ಲ ಇದ್ದರೂ ಜಗದೀಶ್ ಶೆಟ್ಟರ್​ ಮತ್ತೆ ಬಿಜೆಪಿಗೆ (BJP) ಸೇರಿದ್ದಾರೆ. ಇದು ಕಾಂಗ್ರೆಸ್​ಗೆ ಭಾರೀ ಆಘಾತ ತಂದಿದೆ. ಮತ್ತೊಂದೆಡೆ ಲಕ್ಷ್ಮಣ ಸವದಿ (Laxman Savadi) ಕೂಡ ಬಿಜೆಪಿ ಸೇರುತ್ತಾರೆ ಎಂಬ ಬಗ್ಗೆ ಮಾತುಗಳು ಹರಿದಾಡುತ್ತಿದ್ದು ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ‘ಕೈ’ ಹೈಕಮಾಂಡ್ ಅಲರ್ಟ್ ಆಗಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದವರನ್ನ ಪಕ್ಷದಲ್ಲೇ ಉಳಿಸಿಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಪಕ್ಷ ಬಿಟ್ಟು ಹೋಗದಂತೆ ನೋಡಿಕೊಳ್ಳಲು ಕಾಂಗ್ರೆಸ್ ನಾನಾ ಸರ್ಕಸ್ ಮಾಡುತ್ತಿದೆ. ಶಾಸಕ ಲಕ್ಷ್ಮಣ ಸವದಿ ಕೂಡ ಪಕ್ಷ ಬಿಡದಂತೆ ಕೈ ನಾಯಕರು ಎಚ್ಚರಿಕೆ ವಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಶಾಸಕ ಲಕ್ಷ್ಮಣ ಸವದಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ಪಕ್ಷ ಬಿಡಬೇಡಿ ಎಂದು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಲಕ್ಷ್ಮಣ ಸವದಿಗೆ ಹೇಳಿದ್ದಾರೆ. ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಸವದಿಗೆ ಕರೆ ಮಾಡಿ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಬಿಡದಂತೆ ಮತ್ತು ಸೂಕ್ತ ಸ್ಥಾನಮಾನ ನೀಡುವುದಾಗಿ ಸವದಿಗೆ ಭರವಸೆ ನೀಡಿದ್ದಾರೆ. ಮುಂದಿನ ವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರು ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ದೆಹಲಿಯಲ್ಲಿ ಸುರ್ಜೇವಾಲ ಭೇಟಿ ವೇಳೆ ಕೆಲ ಬೇಡಿಕೆ ಇಡಲು ಸವದಿ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕುಂಕುಮ ಬೇಡ ಎನ್ನುವ ಇವರು ಹಿಂದೂನಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿಟಿ ರವಿ ಕಿಡಿ

ಇತ್ತೀಚೆಗೆ ಜಗದೀಶ್‌ ಶೆಟ್ಟರ್‌ ಅವರು ಹುಬ್ಬಳ್ಳಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದರು. ಕಾಂಗ್ರೆಸ್‌ನ ಬಹಳಷ್ಟು ಜನರು ನನ್ನ ಸಂಪರ್ಕದಲ್ಲಿದ್ದಾರೆ. ಶೀಘ್ರದಲ್ಲೇ ಅವರೆಲ್ಲ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದರು. ನನ್ನ ಜೊತೆ ಕಾಂಗ್ರೆಸ್ ಸೇರಿದವರು ಎಲ್ಲರೂ ವಾಪಸ್ ಬಿಜೆಪಿಗೆ ಬರುತ್ತಾರೆ. ಬೇರೆ ಬೇರೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಕೂಡ ಬಿಜೆಪಿ ಸೇರಲು ಇಚ್ಛೆ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ಜೊತೆಗೆ ಬಿಜೆಪಿಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ ಹೇಳಿಕೆ ನೀಡಿದ್ದರು. ಸದ್ಯ ಈಗ ಕಾಂಗ್ರೆಸ್ ಅಲರ್ಟ್ ಆಗಿದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದವರನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಪಡುತ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!