ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಬಗ್ಗೆ ಹೇಳಿಕೆ ನೀಡದಿರುವಂತೆ ಖಡಕ್ ಸೂಚನೆ ನೀಡಿದ ಕಾಂಗ್ರೆಸ್ ಹೈಕಮಾಂಡ್

ಇತ್ತೀಚಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಉತ್ತಮ ಸಾಧನೆ ಮಾಡಿದೆ. ಈ ಸಮಯದಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ಹೇಳಬಾರದು ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಬಗ್ಗೆ ಹೇಳಿಕೆ ನೀಡದಿರುವಂತೆ ಖಡಕ್ ಸೂಚನೆ ನೀಡಿದ ಕಾಂಗ್ರೆಸ್ ಹೈಕಮಾಂಡ್
ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ
Follow us
TV9 Web
| Updated By: guruganesh bhat

Updated on:Jun 21, 2021 | 4:58 PM

ದೆಹಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂಬ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೇವಾಲ ಕಾಂಗ್ರೆಸ್​ನ ಎಲ್ಲ ಶಾಸಕರಿಗೆ ಈ ಸೂಚನೆ ನೀಡಿದ್ದು, ಮುಂದೆ ಸಿಎಂ ಯಾರಾಗಬೇಕೆಂದು ಶಾಸಕರು ನಿರ್ಧರಿಸುತ್ತಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್​ನ ಮುಂದಿನ ಸಿಎಂ ಅರ್ಬಯರ್ಥಿಯ ಬಗ್ಗೆ ಯಾವುದೇ ಹೇಳಿಕೆ ನೀಡಬೇಡಿ ಎಂದು ನಿರ್ದೇಶನ ನೀಡಿದ್ದಾರೆ.

ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಮಾರಕವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಹೋರಾಟ ಮಾಡುತ್ತಿದೆ. ಇತ್ತೀಚಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಉತ್ತಮ ಸಾಧನೆ ಮಾಡಿದೆ. ಈ ಸಮಯದಲ್ಲಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ಹೇಳಬಾರದು ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಸದ್ಯ ವಿಪಕ್ಷ ನಾಯಕನಾಗಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬರ್ಥದ ಮಾತುಗಳನ್ನು ಶಾಸಕ ಜಮೀರ್ ಅಹ್ಮದ್ ಇತ್ತೀಚಿಗಷ್ಟೇ ಹೇಳಿದ್ದರು. ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ತೀರ್ಮಾನಿಸುತ್ತದೆ. ನಾನು, ಡಿ.ಕೆ. ಶಿವಕುಮಾರ್ ತೀರ್ಮಾನ ಮಾಡೋಕೆ ಆಗಲ್ಲ ಎಂದು ಪ್ರತಿಕ್ರಿಯಿಸಿದ್ದರು. ತದ ನಂತರ ಅದು ನನ್ನ ವೈಯಕ್ತಿಕ ಹೇಳಿಕೆ. ರಾಜ್ಯದ ಜನರ ಅಭಿಪ್ರಾಯ ನಾನು ಹೇಳಿದ್ದೇನೆ ಎಂದು ಜಮೀರ್ ಅಹ್ಮದ್ ತಿಳಿಸಿದ್ದರು.

ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿಕೆ ಹೀಗಿತ್ತು ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಈ ವಿಚಾರದಲ್ಲಿ ನನಗೆ 100ಕ್ಕೆ 200ರಷ್ಟು ನಂಬಿಕೆ ಇದೆ. ಜನ ಕೂಡ ಸಿದ್ದರಾಮಯ್ಯ ಸಿಎಂ ಆಗಬೇಕು ಎನ್ನುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಮೂಲಕ  ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ ಬೆನ್ನಲ್ಲೇ ಇನ್ನೋರ್ವ ಶಾಸಕ ಈ ಬೇಡಿಕೆ ಇಟ್ಟಂತಾಗಿತ್ತು.   ಶಾಸಕ ಜಮೀರ್ ಅಹ್ಮದ್, ಜನ ಹಾರೈಸಿದರೆ ಪಕ್ಷದ ಹೈಮಾಂಡ್​ನಿಂದ ಕೂಡ ಅವರನ್ನು ಮುಖ್ಯಮಂತ್ರಿ ಆಗುವುದರಿಂದ ತಡೆಯಲು ಸಾಧ್ಯವಿಲ್ಲ ಎಂಬರ್ಥದ ಹೇಳಿಕೆ ಮೂಲಕ ಕಾಂಗ್ರೆಸ್​ನ ಭಿನ್ನಮತಗಳಿಗೆ ಧ್ವನಿಯಾಗಿದ್ದರು. ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿಕೆ ಈ ಧ್ವನಿಗೆ ಇನ್ನೊಂದು ಟಿಸಿಲು ಮೂಡಿತ್ತು.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು. ಇದನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಒಬ್ಬರೇ ಅಲ್ಲ, ಕಾಂಗ್ರೆಸ್‌ನ ಎಲ್ಲ ಮುಖಂಡರು ಇದನ್ನೇ ಹೇಳುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಹೇಳುತ್ತಾರೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿಲ್ಲವೆಂಬ ಕೊರಗು ಜನರಲ್ಲಿದೆ ಎಂದು ಅವರು ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ವ್ಯಕ್ತಿ ಪೂಜೆ ಬೇಡ ಎಂದು ಹೇಳಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅವರು ಈ ಮಾತನ್ನು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ನಾಯಕತ್ವ ಗೊಂದಲ ಇಲ್ಲ. ರಾಜ್ಯದಲ್ಲಿ ಮತ್ತೆ ಒಳ್ಳೆಯ ಯೋಜನೆಗಳು ಬೇಕಾದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದರು.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

ಯಡಿಯೂರಪ್ಪ, ಮಗ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ; ಇದನ್ನು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ: ಸಿದ್ದರಾಮಯ್ಯ

(Congress High Command directs dont talk about Congress CM candidate in Karnataka to MLAs)

Published On - 4:54 pm, Mon, 21 June 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ