ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮೀ ಗುಂಡೂರಾವ್ ವಿಧಿವಶ

|

Updated on: Jan 06, 2021 | 7:55 AM

ಕೆಪಿಸಿಸಿ ಮಾಜಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮೀ(72) ವಿಧಿವಶರಾಗಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮೀ ಗುಂಡೂರಾವ್ ವಿಧಿವಶ
ಕೆಪಿಸಿಸಿ ಮಾಜಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮೀ ಗುಂಡೂರಾವ್
Follow us on

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಪತ್ನಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮೀ ಗುಂಡೂರಾವ್ (72) ವಿಧಿವಶರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ವರಲಕ್ಷ್ಮೀ ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಬುಧವಾರ ದೇವನಹಳ್ಳಿ ತೋಟದಲ್ಲಿ ನಡೆಸಲು ಕುಟುಂಬದವರು ನಿರ್ಧರಿಸಿದ್ದಾರೆ.

ವರಲಕ್ಷ್ಮೀ ಅವರ ಸಾವಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ವರಲಕ್ಷ್ಮೀ ಅವರ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಈ ದುಃಖದ ಸಮಯದಲ್ಲಿ ಗುಂಡೂರಾವ್ ಕುಟುಂಬಕ್ಕೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯಲ್ಲೇ ಮೂರು ರೀತಿಯ ಅತೃಪ್ತರಿದ್ದಾರೆ; ದಿನೇಶ್ ಗುಂಡೂರಾವ್ ವ್ಯಂಗ್ಯ

Published On - 7:50 am, Wed, 6 January 21