ಕೊನೆಗೂ ತಿಹಾರ್ ಜೈಲು ಪಾಲಾದ ಕಾಂಗ್ರೆಸ್​ನ ಟ್ರಬಲ್ ಶೂಟರ್​

ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಕೊನೆಗೂ ತಿಹಾರ್ ಜೈಲು ಪಾಲಾಗಿದ್ದಾರೆ.  2 ದಿನಗಳಿಂದ ಅನಾರೋಗ್ಯದ ಕಾರಣ ದೆಹಲಿಯ ಆರ್​ಎಂಎಲ್​ ಆಸ್ಪತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಡಿಕೆಶಿ ಆರೋಗ್ಯ ಸ್ಥಿರ ಎಂಬ ವೈದ್ಯರ ವರದಿ ಹಿನ್ನೆಲೆಯಲ್ಲಿ ಡಿಕೆಶಿಯನ್ನು ತಿಹಾರ್ ಜೈಲಿಗೆ ಪೊಲೀಸರು ಕರೆದೊಯ್ದಿದ್ದಾರೆ. ಕಳೆದ 14 ದಿನಗಳಿಂದ ಇಡಿ ಅಧಿಕಾರಿಗಳ ವಶದಲ್ಲಿದ್ದ ಡಿ.ಕೆ.ಶಿವಕುಮಾರ್​ಗೆ ಸೆ.17ರಂದು 14 ದಿನಗಳ ಕಾಲ ದೆಹಲಿ ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆದ್ರೆ ಡಿಕೆಶಿಗೆ ಕಳೆದ 2  ದಿನಗಳಿಂದ ಹೈ […]

ಕೊನೆಗೂ ತಿಹಾರ್ ಜೈಲು ಪಾಲಾದ ಕಾಂಗ್ರೆಸ್​ನ ಟ್ರಬಲ್ ಶೂಟರ್​
ಸಾಧು ಶ್ರೀನಾಥ್​

Updated on: Sep 19, 2019 | 12:48 PM

ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಕೊನೆಗೂ ತಿಹಾರ್ ಜೈಲು ಪಾಲಾಗಿದ್ದಾರೆ.  2 ದಿನಗಳಿಂದ ಅನಾರೋಗ್ಯದ ಕಾರಣ ದೆಹಲಿಯ ಆರ್​ಎಂಎಲ್​ ಆಸ್ಪತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಡಿಕೆಶಿ ಆರೋಗ್ಯ ಸ್ಥಿರ ಎಂಬ ವೈದ್ಯರ ವರದಿ ಹಿನ್ನೆಲೆಯಲ್ಲಿ ಡಿಕೆಶಿಯನ್ನು ತಿಹಾರ್ ಜೈಲಿಗೆ ಪೊಲೀಸರು ಕರೆದೊಯ್ದಿದ್ದಾರೆ.

ಕಳೆದ 14 ದಿನಗಳಿಂದ ಇಡಿ ಅಧಿಕಾರಿಗಳ ವಶದಲ್ಲಿದ್ದ ಡಿ.ಕೆ.ಶಿವಕುಮಾರ್​ಗೆ ಸೆ.17ರಂದು 14 ದಿನಗಳ ಕಾಲ ದೆಹಲಿ ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆದ್ರೆ ಡಿಕೆಶಿಗೆ ಕಳೆದ 2  ದಿನಗಳಿಂದ ಹೈ ಬಿಪಿ, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಆರ್​ಎಂಎಲ್​ ಆಸ್ಪತ್ರೆಗೆ ದಾಖಲಾಗಿದ್ದರು.

ಇನ್ನು ಈಗಾಗಲೇ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಸಹ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ ತಿಹಾರ್ ಜೈಲಿನ ಸೆಲ್​ ನಂಬರ್​ 7ರಲ್ಲಿ ಡಿಕೆಶಿಯನ್ನು ಇರಿಸಲಾಗುತ್ತೆ. ಅಲ್ಲದೆ. ಡಿಕೆಶಿಗೆ ಲೈಬ್ರೆರಿಯಲ್ಲಿ ಪುಸ್ತಕ ಓದಲು ಅವಕಾಶ ನೀಡಲಾಗುತ್ತೆ, ನಿರ್ದಿಷ್ಟ ಸಮಯದವರೆಗೆ ಟಿವಿ ನೋಡುವುದಕ್ಕೂ ಅವಕಾಶ ನೀಡಲಾಗುವುದು. ಜೈಲಿನಲ್ಲಿ ವಿಶೇಷ ಸೌಲಭ್ಯ ಬೇಕಾದ್ರೆ ಕೋರ್ಟ್​ ಅನುಮತಿ ಪಡೆಯಬೇಕಾಗಿದೆ.

ಪ್ರಕರಣದ ಹಿನ್ನೆಲೆ
2 ವರ್ಷಗಳ ಹಿಂದೆ ದೆಹಲಿಯ ಡಿ.ಕೆ.ಶಿವಕುಮಾರ್ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ದಾಖಲೆಯಿಲ್ಲದ 8.69 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿತ್ತು. ಅಂದಿನಿಂದಲೂ ಐಟಿ ಅಧಿಕಾರಿಗಳು ಬೆಂಗಳೂರಿನ ನಿವಾಸ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿ, ವಿಚಾರಣೆ ನಡೆಸುತ್ತಿದ್ದರು.

ಈ ಬಗ್ಗೆ ಹಣದ ಮೂಲ ನೀಡುವಂತೆ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ಸಮನ್ಸ್​ ನೀಡಿದ್ದರು. ಇಡಿ ಸಮನ್ಸ್​ ಪ್ರಶ್ನಿಸಿ ಡಿಕೆಶಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ ಹೈಕೋರ್ಟ್​ ಡಿಕೆಶಿ ಅರ್ಜಿಯನ್ನು ವಜಾಗೊಳಿಸಿತು. ಬಳಿಕ ಇಡಿ ಅಧಿಕಾರಿಗಳು ಮತ್ತೊಂದು ಸಮನ್ಸ್​ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ರು.

ಆಗಸ್ಟ್​ 30ರಿಂದ ಡಿ.ಕೆ.ಶಿವಕುಮಾರ್ ಸತತ 4 ದಿನಗಳ ಕಾಲ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ರು. ಆದ್ರೆ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಇಡಿ ಡಿಕೆಶಿಯನ್ನು 10 ದಿನಗಳ ಕಾಲ ತಮ್ಮ ವಶಕ್ಕೆ ಪಡೆಯಿತು. ಅವಧಿ ಮುಗಿದ ಬಳಿಕ ಮತ್ತೆ 4 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಡಿಕೆಶಿಯನ್ನು ಇಡಿ ವಶಕ್ಕೆ ಪಡೆಯಿತು. ಈ ವೇಳೆ ಸೆ.12ರಂದು ಡಿಕೆಶಿ ಪುತ್ರಿ ಐಶ್ವರ್ಯಾಗೂ ಸಮನ್ಸ್​ ನೀಡಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದರು. ಬಳಿಕ ಸೆ.17ರಂದು ಡಿಕೆಶಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿ ಕೋರ್ಟ್​ ಆದೇಶಿಸಿತು.

Published On - 12:20 pm, Thu, 19 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us