ಸ್ಟಾಲಿನ್​ಗೆ ಯಡಿಯೂರಪ್ಪ ಪತ್ರ ಬರೆದಿದ್ದೇ ತಪ್ಪು; ನಾವು ಡ್ಯಾಂ ಕಟ್ಟಲು ಅವರ ಅನುಮತಿ ಏಕೆ ಬೇಕು?: ಸಿದ್ದರಾಮಯ್ಯ

ಕೋರ್ಟ್ ಆದೇಶದಂತೆ ನಾವು ಕೆಲಸವನ್ನು ಮಾಡಬೇಕು. ಸಿಎಂ ಪತ್ರ ಬರೆದಿದ್ದಕ್ಕೆ ಸ್ಟಾಲಿನ್ ರಿಯಾಕ್ಟ್ ಮಾಡಿದ್ದಾರೆ. ಡ್ಯಾಂನಿಂದ ಅವರ ಪಾಲಿನ ನೀರಿಗೆ ಸಮಸ್ಯೆ ಆಗಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸ್ಟಾಲಿನ್​ಗೆ ಯಡಿಯೂರಪ್ಪ ಪತ್ರ ಬರೆದಿದ್ದೇ ತಪ್ಪು; ನಾವು ಡ್ಯಾಂ ಕಟ್ಟಲು ಅವರ ಅನುಮತಿ ಏಕೆ ಬೇಕು?: ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ
TV9kannada Web Team

| Edited By: ganapathi bhat

Jul 05, 2021 | 4:12 PM

ಬೆಂಗಳೂರು: ಮೇಕೆದಾಟು ಯೋಜನೆ ಸಂಬಂಧ ಬಿ.ಎಸ್. ಯಡಿಯೂರಪ್ಪ ಹಾಗೂ ಎಂ.ಕೆ. ಸ್ಟಾಲಿನ್ ಪತ್ರದ ಮುಖೇನ ನಡೆಸಿದ ಮಾತುಕತೆ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಯಡಿಯೂರಪ್ಪ ಪತ್ರ ಬರೆದಿದ್ದೇ ತಪ್ಪು. ನಾವು ಡ್ಯಾಂ ಕಟ್ಟಲು ಅವರ ಅನುಮತಿ ಏಕೆ ಬೇಕು? ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೋರ್ಟ್ ಆದೇಶದಂತೆ ನಾವು ಕೆಲಸವನ್ನು ಮಾಡಬೇಕು. ಸಿಎಂ ಪತ್ರ ಬರೆದಿದ್ದಕ್ಕೆ ಸ್ಟಾಲಿನ್ ರಿಯಾಕ್ಟ್ ಮಾಡಿದ್ದಾರೆ. ಡ್ಯಾಂನಿಂದ ಅವರ ಪಾಲಿನ ನೀರಿಗೆ ಸಮಸ್ಯೆ ಆಗಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆ ವಿಪಕ್ಷಗಳು ಶಾಮೀಲು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಅಂಥ ಭ್ರಷ್ಟ ಸರ್ಕಾರದಲ್ಲಿ ಇವರೇಕೆ ಮುಂದುವರಿಯಬೇಕು. ಬಹಳ ದಿನದಿಂದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅಂತಹ ಕಡೆ ಶಾಸಕನಾಗಿ ಮುಂದುವರಿದಿದ್ದು ಯಾಕೆ. ನಮ್ಮ ಬಗ್ಗೆ ಮಾತನಾಡಲು ಅವರಿಗೆ ಅಧಿಕಾರ ಇಲ್ಲ ಎಂದು ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

‘ವಿಪಕ್ಷಗಳು ಸತ್ತು ಹೋಗಿವೆ’ ಎಂದು ಯತ್ನಾಳ್​ ಹೇಳಿಕೆಗೆ ಪ್ರತ್ಯುತ್ತರ ನೀಡಿದ್ದಾರೆ. ಯತ್ನಾಳ್ ಮಾತನಾಡಿದ್ರಲ್ಲ, ಆಮೇಲೆ ಏನ್ ಮಾಡಿದರು. ರಾಜ್ಯದಲ್ಲಿ ಭ್ರಷ್ಟ ಸರ್ಕಾರವಿದೆ, ಅವರು ಏನ್ ಮಾಡ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬರಬೇಕಿತ್ತಲ್ಲವೇ? ಸುಮ್ನೆ ವಿರೋಧ ಪಕ್ಷಗಳ ಬಗ್ಗೆ ಯತ್ನಾಳ್ ಮಾತಾಡುತ್ತಾರೆ. ಅವರ ಪಕ್ಷದ ಬಗ್ಗೆ ಯತ್ನಾಳ್​ ನೋಡಿಕೊಳ್ಳಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮೇಕೆದಾಟು ಯೋಜನೆ ಸಂಬಂಧ ಬಸವರಾಜ ಬೊಮ್ಮಾಯಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಮೇಕೆದಾಟು ಯೋಜನೆಗೆ ಈಗಾಗಲೇ ಡಿಪಿಆರ್​ ಆಗಿದೆ. ಮೇಕೆದಾಟು ಕುಡಿಯುವ ನೀರಿನ ಯೋಜನೆ 4 ದಶಕದ್ದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಗೆ 4 ಪ್ರಾಜೆಕ್ಟ್​ ಮಾಡಲಾಗಿತ್ತು. ನ್ಯಾಷನಲ್​ ಹೈಡ್ರೋ ಎಲೆಕ್ಟ್ರಿಕ್​ ಕಾರ್ಪೊರೇಷನ್​ನಿಂದ ಇದಕ್ಕೆ ಮಾರ್ಗದರ್ಶನ ನೀಡಲಾಗಿತ್ತು. ಅದಾದ ಮೇಲೆ ಹಲವಾರು ಬಾರಿ ಮಾರ್ಪಾಡುಮಾಡಲಾಗಿದೆ. 2012ರಲ್ಲಿ ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಲಾಗಿತ್ತು. ಕುಡಿಯುವ ನೀರಿನ ಬಳಕೆಗೆ ನಿರ್ಧಾರ ಮಾಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ತಮಿಳುನಾಡು ಈ ವಿಚಾರದಲ್ಲಿ ಹೊಸದಾಗಿ ಆಕ್ಷೇಪ ಮಾಡ್ತಿಲ್ಲ. ಅಲ್ಲಿ ಸರ್ಕಾರ ಬದಲಾಗಿದೆ. ಎರಡೂ ರಾಜ್ಯಗಳಿಗೆ ಅನುಕೂಲ ಆಗತ್ತೆ ಅಂತ ನಾವು ಅರ್ಥ ಮಾಡಿಸುವ ಪ್ರಯತ್ನ ಮಾಡಿದ್ದೆವು. ಆದರೆ ಅವರ ಉತ್ತರದ ವೈಖರಿ ಸರಿಯಾಗಿಲ್ಲ. ನಮ್ಮ ಲೀಗಲ್ ಬ್ಯಾಟಲ್ ನಾವು ಮುಂದುವರಿಸ್ತೇವೆ. ಈ ಯೋಜನೆ ನಾವು ಮಾಡಿಯೇ ಮಾಡ್ತೇವೆ. ಪರಿಸರ ಸಂಬಂಧಿ ಅನುಮತಿ ಕೂಡ ತೆಗೆದುಕೊಳ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ‘ಕುತ್ತಾ’ ಎಂದ ಸಿದ್ದರಾಮಯ್ಯ; ನಾನು ಸಿಎಂ ಆಗಿದ್ರೆ ಸಚಿವೆ ನಿರ್ಮಲಾ ಮನೆ ಮುಂದೆ ಪ್ರತಿಭಟನೆ ಮಾಡ್ತಿದ್ದೆ ಎಂದರು

ಬೆಳಗಾವಿಯಲ್ಲೇ ಈ ಬಾರಿಯ ಅಧಿವೇಶನ ನಡೆಸಬೇಕು: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪಟ್ಟು?

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada