Karnataka ByElection 2021: ಕಾಂಗ್ರೆಸ್​ಗೆ ಬೈ ಬೈ, ಬಿಜೆಪಿಗೆ ಜೈಜೈ ಎಂದ ಕಾಂಗ್ರೆಸ್​ ಮುಖಂಡ ಲಖನ್ ಜಾರಕಿಹೊಳಿ

ಬಿಜೆಪಿ ನಾಯಕರ ಭೇಟಿಯ ನಂತರ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಖನ್ ಜಾರಕಿಹೊಳಿ‌, ದೊಡ್ಡವರು ಮನೆಗೆ ಬಂದು ಆಹ್ವಾನ ನೀಡಿದ್ದಾರೆ. ನಾನು ಆಯ್ತು ಅಂತಾ ಹೇಳಿದ್ದೇನೆ. ಅಂತಿಮವಾಗಿ ಬೆಂಬಲಿಗರ ಜೊತೆ ಚರ್ಚಿಸಿದ ಮೇಲೆ ಅಧಿಕೃತವಾಗಿ ಘೋಷಿಸುತ್ತೇನೆ ಎಂದಿದ್ದಾರೆ.

Karnataka ByElection 2021: ಕಾಂಗ್ರೆಸ್​ಗೆ ಬೈ ಬೈ, ಬಿಜೆಪಿಗೆ ಜೈಜೈ ಎಂದ ಕಾಂಗ್ರೆಸ್​ ಮುಖಂಡ ಲಖನ್ ಜಾರಕಿಹೊಳಿ
ಲಖನ್​ ಜಾರಕಿಹೊಳಿ
Follow us
Skanda
|

Updated on:Apr 05, 2021 | 2:08 PM

ಬೆಳಗಾವಿ: ರಾಜ್ಯದಲ್ಲಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು ಬೆಳಗಾವಿ ಭಾಗದಲ್ಲಿ ಭಾರೀ ಪ್ರಭಾವ ಬೀರಬಲ್ಲ ಜಾರಕಿಹೊಳಿ ಸಹೋದರರು ಗೋಕಾಕ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ನಡುವೆಯೇ ಕಾಂಗ್ರೆಸ್​ ನಾಯಕ ಲಖನ್ ಜಾರಕಿಹೊಳಿಯನ್ನು ಬಿಜೆಪಿಗೆ ಸೇರಿಸಿಕೊಳ್ಳಲು ನಿರ್ಧರಿಸಲಾಗಿದ್ದು ಆಹ್ವಾನವನ್ನೂ ನೀಡಲಾಗಿದೆ. ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಉಮೇಶ್ ಕತ್ತಿ, ಭೈರತಿ ಬಸವರಾಜ್ ಗೋಕಾಕದಲ್ಲಿರುವ ಲಖನ್​ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿಗೆ ಬನ್ನಿ ಎಂದು ಸ್ವಾಗತಿಸಿದ್ದಾರೆ.

ಬಿಜೆಪಿ ನಾಯಕರ ಭೇಟಿಯ ನಂತರ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಖನ್ ಜಾರಕಿಹೊಳಿ‌, ಬಿಜೆಪಿ ನಾಯಕರು ಬಂದು ಆಹ್ವಾನ ನೀಡಿದ್ದಾರೆ. ಬಿಜೆಪಿಗೆ ಸೇರುವ ಕುರಿತು ಸಹೋದರರಾದ ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್​ನಲ್ಲಿ ಈಸ್ಟ್, ವೆಸ್ಟ್, ನಾರ್ತ್, ಸೌತ್ ಎಂದು 4 ಹೈಕಮಾಂಡ್ ಇದೆ ಏ.17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆಯಲ್ಲಿ ನಾನು ಬಿಜೆಪಿಗೆ ಬೆಂಬಲ ಸೂಚಿಸುತ್ತೇನೆ. ಕಾಂಗ್ರೆಸ್​ನಿಂದ ಸತೀಶ್​ ಜಾರಕಿಹೊಳಿಗೆ ಟಿಕೆಟ್​ ನೀಡಿದ್ದು ಏಕೆಂದು ಅರ್ಥವಾಗಿಲ್ಲ. ನನಗೆ ಅವರ ಪರ ಪ್ರಚಾರಕ್ಕೆ ಹೋಗಲು ಮುಜುಗರವಾಗುತ್ತದೆ ಎಂದು ಹೇಳಿರುವ ಲಖನ್​, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯ ಕಾಂಗ್ರೆಸ್​ನಲ್ಲಿಯೂ ನಾಲ್ಕು ಜನರ ಹೈಕಮಾಂಡ್ ಇದೆ. ಈಸ್ಟ್, ವೆಸ್ಟ್, ನಾರ್ತ್, ಸೌತ್ ಎಂದು 4 ಹೈಕಮಾಂಡ್ ಆಗಿದೆ. ಒಳ್ಳೆಯವರಿಗೆ ಕಾಂಗ್ರೆಸ್​ನಲ್ಲಿ ಬೆಲೆ ಇಲ್ಲ. ಹೀಗಾಗಿ ಪಕ್ಷದಲ್ಲಿ ಸಂಪರ್ಕ ಕಡಿಮೆ ಮಾಡಿಕೊಂಡಿದ್ದೇನೆ. ದೊಡ್ಡವರು ಮನೆಗೆ ಬಂದು ಆಹ್ವಾನ ನೀಡಿದ್ದಾರೆ. ನಾನು ಆಯ್ತು ಅಂತಾ ಹೇಳಿದ್ದೇನೆ. ಅಂತಿಮವಾಗಿ ಬೆಂಬಲಿಗರ ಜೊತೆ ಚರ್ಚಿಸಿದ ಮೇಲೆ ಅಧಿಕೃತವಾಗಿ ಘೋಷಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲ ದಿನಗಳಿಂದ ಅಸಮಾಧಾನಗೊಂಡಂತೆ ಕಾಣುತ್ತಿರುವ ಲಖನ್​ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಬಗ್ಗೆ ಹೈಕಮಾಂಡ್​ ಮಟ್ಟದಲ್ಲೇ ಹರಿಹಾಯ್ದಿದ್ದರು. ಅಲ್ಲದೇ, ಡಿ.ಕೆ.ಶಿವಕುಮಾರ್​ ವಿಚಾರದಲ್ಲಿ ಜಾಗರೂಕರಾಗಿರುವಂತೆ ಸಹೋದರ ಸತೀಶ್​ ಜಾರಕಿಹೊಳಿಗೆ ತಿಳಿಸಿದ್ದರು ಎಂಬ ವಿಚಾರಗಳು ಹೊರಬಿದ್ದಿದ್ದವು. ಅದಾಗಿ ಕೆಲ ದಿನಗಳ ಅಂತರದಲ್ಲೇ ಲಖನ್​ ಜಾರಕಿಹೊಳಿ ಕಾಂಗ್ರೆಸ್​ ತೊರೆದು ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Ramesh Jarkiholi Corona Positive​: ರಮೇಶ್​ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್​; ಗೋಕಾಕ್​ ಆರೋಗ್ಯಾಧಿಕಾರಿ ಸ್ಪಷ್ಟನೆ 

ಹೈಕಮಾಂಡ್​ ಡಿಕೆಶಿ​ ರಾಜೀನಾಮೆ ಪಡೆಯಲಿ: ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಆಗ್ರಹ

Published On - 2:06 pm, Mon, 5 April 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್