ರಾಣಿ ಚೆನ್ನಮ್ಮನ ಕಿತ್ತೂರು ಕೋಟೆ ದುರಸ್ತಿಗೆ ಹಣ ನೀಡಿ: ಪಂಚಮಸಾಲಿ ಸಮಾವೇಶದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯ

ರಾಯಣ್ಣ ಪ್ರಾಧಿಕಾರಕ್ಕೆ ಸಿದ್ದರಾಮಯ್ಯ 250 ಕೋಟಿ ರೂ. ನೀಡಿದ್ದರು. ಈಗ ನಮ್ಮ ಸಮುದಾಯದ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಣಿ ಚೆನ್ನಮ್ಮ ಕಿತ್ತೂರು ಕೋಟೆ ದುರಸ್ತಿಗೆ ಹಣ ನೀಡಬೇಕು: ಲಕ್ಷ್ಮೀ ಹೆಬ್ಬಾಳ್ಕರ್

ರಾಣಿ ಚೆನ್ನಮ್ಮನ ಕಿತ್ತೂರು ಕೋಟೆ ದುರಸ್ತಿಗೆ ಹಣ ನೀಡಿ: ಪಂಚಮಸಾಲಿ ಸಮಾವೇಶದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಒತ್ತಾಯ
ಲಕ್ಷ್ಮೀ ಹೆಬ್ಬಾಳ್ಕರ್
Follow us
TV9 Web
| Updated By: ganapathi bhat

Updated on:Apr 06, 2022 | 7:49 PM

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಸಚಿವ ನಿರಾಣಿ ಶುಭ ಸಂದೇಶವನ್ನು ಕೊಡುವ ನಂಬಿಕೆ ಇದೆ. ನಮಗೆ ಯಾರ ಭಿಕ್ಷೆಯೂ ಬೇಡ, ಆಶ್ವಾಸನೆಗಳು ಬೇಡ. ನಮ್ಮ ಹಕ್ಕು ನಮಗೆ ನೀಡಬೇಕು. ಕಿತ್ತೂರು ಚೆನ್ನಮ್ಮ ಅರಮನೆ ಹಾಳಾಗಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಆದರೆ, ಈ ಹಿಂದೆ ರಾಣಿ ಚೆನ್ನಮ್ಮನ ಬಂಟ ರಾಯಣ್ಣ ಪ್ರಾಧಿಕಾರವನ್ನು ಸಿದ್ದರಾಮಯ್ಯ ಮಾಡಿದ್ದರು. ಪ್ರಾಧಿಕಾರಕ್ಕೆ ಸಿದ್ದರಾಮಯ್ಯ 250 ಕೋಟಿ ರೂ. ನೀಡಿದ್ದರು. ಈಗ ನಮ್ಮ ಸಮುದಾಯದ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕೇಳುತ್ತಿದ್ದೇನೆ. ರಾಣಿ ಚೆನ್ನಮ್ಮ ಕಿತ್ತೂರು ಕೋಟೆ ದುರಸ್ತಿಗೆ ಹಣ ನೀಡಬೇಕು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸರ್ಕಾರವನ್ನು ಒತ್ತಾಯಿಸಿದರು.

ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸುವಂತೆ ಕಳೆದ ಕೆಲವಾರು ದಿನಗಳಿಂದ ಹೋರಾಟ ನಡೆಯುತ್ತಿದೆ. ಇಂದು (ಫೆ.21) ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಸಮಾರಂಭ ಆಯೋಜಿಸಲಾಗಿದೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು.

ನಗರದ ಅರಮನೆ ಮೈದಾನದಲ್ಲಿ ಪಂಚಮಸಾಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿಗಾಗಿ ಹೋರಾಟ ಕೈಗೊಂಡಿದೆ. ಸಮಾವೇಶದಲ್ಲಿ ಕಾಂಗ್ರೆಸ್, ಬಿಜೆಪಿ ಎಂಬ ಪಕ್ಷ ಬೇಧವಿಲ್ಲದೆ ಉಭಯ ಪಕ್ಷಗಳ ಶಾಸಕರು, ಸಚಿವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹಲವು ಸಂಘಟನೆಗಳು, ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ವಚನಾನಂದಶ್ರೀ ಪಾಲ್ಗೊಂಡಿದ್ದಾರೆ.

ನಿರಾಣಿ ಭಾಷಣಕ್ಕೆ ಕೈ ಬೀಸಿ ವಿರೋಧ ವ್ಯಕ್ತಪಡಿಸಿದ ಜನ 2A ಮೀಸಲಾತಿ ಹೋರಾಟಕ್ಕೆ ಸರ್ಕಾರದ ಬೆಂಬಲವಿದೆ. 2A ಮೀಸಲಾತಿ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಮ್ಮ ಸರ್ಕಾರದ ಮೇಲೆ ವಿಶ್ವಾಸ ಇಡಿ ನಾವು ಮುಂದಿನ ದಿನಗಳಲ್ಲಿ ಮೀಸಲಾತಿ ಕೊಡಿಸುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು. ಮುರುಗೇಶ್ ನಿರಾಣಿ ಈ ಹೇಳಿಕೆಗೆ ನೆರೆದಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾವೇಶಕ್ಕೆ ಸೇರಿದ್ದ ಜನರು ಕೈ ಬೀಸಿ ವಿರೋಧ ವ್ಯಕ್ತಪಡಿಸಿದರು.

70 ವರ್ಷದಿಂದ ಹಲವು ಸರ್ಕಾರಗಳು ಬಂದು ಹೋಗಿದ್ದವು. ಆಗ ನೀವ್ಯಾರು ಕೈ ತೋರಿಸಲಿಲ್ಲ, ಈಗ ಕೈ ತೋರಿಸುತ್ತೀರಾ? ಎಂದು ಜನರು ಕೈ ತೋರಿಸಿದ್ದಕ್ಕೆ ಸಚಿವ ಮುರುಗೇಶ್ ನಿರಾಣಿ ಸಿಟ್ಟಿನಿಂದ ಪ್ರತಿಕ್ರಿಯಿಸಿದರು.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ಘೋಷಣೆ ಸಮಾವೇಶದ ಕೊನೆಗೆ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್ ಹೆಸರು ಘೋಷಣೆಯಾಗಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಈ ವಿಚಾರವನ್ನು ಸಮಾವೇಶದಲ್ಲಿ ಅಧಿಕೃತವಾಗಿ ಘೋಷಿಸಿದರು.

ಮೀಸಲಾತಿ ಸಿಗುವವರೆಗೆ ಸರ್ಕಾರವನ್ನು ಸುಮ್ಮನೆ ಬಿಡಬಾರದು. ಈ ಹೋರಾಟಕ್ಕೆ 2 ಪಂಚಮಸಾಲಿ ಪೀಠಗಳು ಒಂದಾಗಿವೆ. ಇಂದು ಪೂಜ್ಯರು ಹೇಳಿದಂತೆ ನಾವು ಮುಂದೆ ಸಾಗೋಣ. ವಿಧಾನಸೌಧದ ಮುಂದೆ ಧರಣಿ ಸತ್ಯಾಗ್ರಹ ಮಾಡೋಣ. ಮಾರ್ಚ್ 4ರವರೆಗೆ ಧರಣಿ ಸತ್ಯಾಗ್ರಹ ಮಾಡೋಣ. ನಂತರ ಉಪವಾಸ ಸತ್ಯಾಗ್ರಹ ಮಾಡೋಣ ಎಂದು ವಿಜಯಾನಂದ ಕಾಶಪ್ಪನವರ್ ಸಮುದಾಯಕ್ಕೆ ಕರೆನೀಡಿದರು.

ಇದನ್ನೂ ಓದಿ: ಅಗತ್ಯವಾದ್ರೆ ರಾಜಕೀಯ ಬಿಡ್ತೀನಿ, ಪಂಚಮಸಾಲಿ ಸಮುದಾಯ ಬಿಡಲ್ಲ: ವಿಜಯಾನಂದ ಕಾಶಪ್ಪನವರ್

ಪಂಚಮಸಾಲಿ ಸಮಾವೇಶ: ಸರ್ಕಾರದ ಮೇಲೆ ವಿಶ್ವಾಸ ಇಡಿ ಎಂದ ಸಚಿವರು, ಸಭಿಕರ ವಿರೋಧ

Published On - 4:37 pm, Sun, 21 February 21

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ