Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು

6.6 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಕೋರ್ಟ್​ ಬಿಗ್ ರಿಲೀಫ್ ನೀಡಿದೆ.

Cheque Bounce Case: 6.6 ಕೋಟಿ ರೂ. ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ ಜಾಮೀನು
ಮಧು ಬಂಗಾರಪ್ಪ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 17, 2023 | 6:42 PM

ಬೆಂಗಳೂರು: 6.6 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ(Chequ Bounce Case) ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ (Madhu Bangarappa) ಜಾಮೀನು ಸಿಕ್ಕಿದೆ. 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಇಂದು(ಜನವರಿ 17) ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪಗೆ ಜಾಮೀನು ನೀಡಿದೆ.

ಆಕಾಶ್ ಆಡಿಯೋ ಕಂಪನಿಯ ಎಂಡಿ ಆಗಿದ್ದ ಮಧು ಬಂಗಾರಪ್ಪ ಅವರು 2011ರಲ್ಲಿ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂಪಾಯಿ ಚೆಕ್ ನೀಡಿದ್ದರು. ಆದ್ರೆ, ಆ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು.

ಈ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಇಂದು ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ.

2013ರಲ್ಲಿ ಸೊರಬ ಕ್ಷೇತ್ರದಿಂದ ಜೆಡಿಎಸ್​ನಿಂದ ಸ್ಪರ್ಧಿಸಿ ಗೆದ್ದಿದ್ದ ಮಧು ಬಂಗಾರಪ್ಪ ಮೊದ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದರು. ಬಳಿಕ 2018ರ ಚುನಾವಣೆ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಸೋಲುಕಂಡಿದ್ದರು. ಇದೀಗ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯರಾಗಿದ್ದಾರೆ.

Published On - 6:34 pm, Tue, 17 January 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ