ಬೆಂಗಳೂರು: 6.6 ಕೋಟಿ ರೂಪಾಯಿ ಚೆಕ್ ಬೌನ್ಸ್ ಪ್ರಕರಣದಲ್ಲಿ(Chequ Bounce Case) ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪಗೆ (Madhu Bangarappa) ಜಾಮೀನು ಸಿಕ್ಕಿದೆ. 2011ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಇಂದು(ಜನವರಿ 17) ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪಗೆ ಜಾಮೀನು ನೀಡಿದೆ.
ಆಕಾಶ್ ಆಡಿಯೋ ಕಂಪನಿಯ ಎಂಡಿ ಆಗಿದ್ದ ಮಧು ಬಂಗಾರಪ್ಪ ಅವರು 2011ರಲ್ಲಿ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂಪಾಯಿ ಚೆಕ್ ನೀಡಿದ್ದರು. ಆದ್ರೆ, ಆ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು.
ಈ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಇಂದು ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ.
2013ರಲ್ಲಿ ಸೊರಬ ಕ್ಷೇತ್ರದಿಂದ ಜೆಡಿಎಸ್ನಿಂದ ಸ್ಪರ್ಧಿಸಿ ಗೆದ್ದಿದ್ದ ಮಧು ಬಂಗಾರಪ್ಪ ಮೊದ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದರು. ಬಳಿಕ 2018ರ ಚುನಾವಣೆ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಸೋಲುಕಂಡಿದ್ದರು. ಇದೀಗ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಲ್ಲದೇ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯರಾಗಿದ್ದಾರೆ.
Published On - 6:34 pm, Tue, 17 January 23