ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ಬಳಿಕ ಮನೋಹರ್‌ ತಹಸೀಲ್ದಾರ್‌ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನಲಾಗುತ್ತಿದೆ. ಆ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದೆ. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ ಉಪಸ್ಥಿತರಿದ್ದರು. 

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್
ಕಾಂಗ್ರೆಸ್ ಮುಖಂಡ ಮನೋಹರ್ ತಹಸೀಲ್ದಾರ್ ಬಿಜೆಪಿ ಸೇರ್ಪಡೆ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 02, 2024 | 3:01 PM

ಬೆಂಗಳೂರು, ಮಾರ್ಚ್​ 2: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸಮ್ಮುಖದಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ. 50 ವರ್ಷಗಳಿಂದ ಕಾಂಗ್ರೆಸ್​ನಲ್ಲಿದ್ದ ಅವರು ಕಳೆದ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಜೆಡಿಎಸ್‌ ಸೇರ್ಪಡೆಕೊಂಡಿದ್ದರು. ಇದೀಗ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಬಿಜೆಪಿ ಆ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದೆ. ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ ಉಪಸ್ಥಿತರಿದ್ದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ಬಳಿಕ ಮನೋಹರ್‌ ತಹಸೀಲ್ದಾರ್‌ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನಲಾಗುತ್ತಿದೆ. ಮನೋಹರ್‌ ತಹಸೀಲ್ದಾರ್‌ ಅವರು ನಾಗರಿಕ ಸ್ನೇಹಿ ನಾಯಕರಾಗಿದ್ದಲ್ಲದೆ, ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದಾರೆ. ಜೊತೆಗೆ ಅವರದ್ದೇ ಆದ ವೋಟ್‌ ಬ್ಯಾಂಕ್‌ ಹೊಂದಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕರೆತರಲಾಗಿದೆ.

ಬಸವರಾಜ ಬೊಮ್ಮಾಯಿ ಹಾವೇರಿಯ ಬಿಜೆಪಿ ಅಭ್ಯರ್ಥಿ ಆಗಬೇಕು: ಮನೋಹರ್ ತಹಶೀಲ್ದಾರ್

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಮನೋಹರ್ ತಹಶೀಲ್ದಾರ್​, ಹಾವೇರಿಗೆ ಒಳ್ಳೆ ಅಭ್ಯರ್ಥಿ ಬೇಕು ಎನ್ನುವ ಮಾತು ಇದೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆ ಕೆಲಸ ಮಾಡಿದಾರೆ. ಅವರು ಹಾವೇರಿಯ ಬಿಜೆಪಿ ಅಭ್ಯರ್ಥಿ ಆಗಬೇಕು. ಇದು ಜನರ ಅಭಿಪ್ರಾಯ ನಮ್ಮ ಅಭಿಪ್ರಾಯವೂ ಹೌದು. ನಾವು ಬೊಮ್ಮಾಯಿ ಅವರನ್ನ ಲೋಕಸಭಾ ಸದಸ್ಯರನ್ನಾಗಿ ಮಾಡಿ ಕಳಿಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: 3ನೇ ಬಾರಿಗೆ ಹೊರಟು ನಿಂತಿದೆ ಮೋದಿ ಕುದುರೆ, ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಅಭ್ಯರ್ಥಿಗಳ ಆಯ್ಕೆ

ಎಲ್ಲರೂ ಒಪ್ಪಿದ್ದಕ್ಕೆ ಬಿಜೆಪಿಗೆ ಬಂದಿದ್ದೇನೆ. ಬಸವರಾಜ ಬೊಮ್ಮಾಯಿ ಅವರು ಇರುವಷ್ಟು ಕಾಲ ಅವರೊಂದಿಗೆ ಇರೋಣ ಅಂತ ಬಂದಿದ್ದೇನೆ. ಯಾವುದೇ ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ. ಪಕ್ಷದಲ್ಲಿ ಗೌರವ ಕೊಡಿ ಅಂತ ಅಷ್ಟೇ ಕೇಳಿದ್ದೇನೆ ಎಂದರು.

ಕಾಂಗ್ರೆಸ್ ಸೇರಲಿದ್ದಾರಾ ಕೆ.ಸಿ.ನಾರಾಯಣಗೌಡ?

ಕೆ.ಸಿ.ನಾರಾಯಣಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. JDS-ಬಿಜೆಪಿ ಮೈತ್ರಿ ವಿರುದ್ಧ ನಾರಾಯಣಗೌಡ ಸಿಡಿದೆದ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ರಹಸ್ಯ ಚರ್ಚೆ ನಡೆಸಿದ್ದಾರಂತೆ. ಮಂಡ್ಯ ಕ್ಷೇತ್ರವನ್ನ JDS​ಗೆ ಬಿಟ್ಟು ಕೊಡುವ ಬಗ್ಗೆ ನಾರಾಯಣಗೌಡ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ತೊರೆಯಲಿದ್ದಾರೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ