Priyanka Gandhi Karnataka Visit: ಕರ್ನಾಟಕಕ್ಕೆ ಇಂದು ಪ್ರಿಯಾಂಕಾ ಗಾಂಧಿ: ಎಲ್ಲೆಲ್ಲಿ ಪ್ರಚಾರ?

ಸೋಮವಾರ ರಾತ್ರಿ ರಾಹುಲ್‌ಗಾಂಧಿ ಅವರು ದೆಹಲಿಗೆ ವಾಪಸಾದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ  ಅವರು  ಕರ್ನಾಟಕಕ್ಕೆ ಬರಲಿದ್ದು, ಎಲ್ಲೆಲ್ಲಿ ಪ್ರಚಾರ ಮಾಡಲಿದ್ದಾರೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

Priyanka Gandhi Karnataka Visit: ಕರ್ನಾಟಕಕ್ಕೆ ಇಂದು ಪ್ರಿಯಾಂಕಾ ಗಾಂಧಿ: ಎಲ್ಲೆಲ್ಲಿ ಪ್ರಚಾರ?
ಪ್ರಿಯಾಂಕಾ ಗಾಂಧಿ
Follow us
ರಮೇಶ್ ಬಿ. ಜವಳಗೇರಾ
|

Updated on:Apr 25, 2023 | 8:29 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ (Karnataka Assembly Election 2023) ಅಖಾಡಕ್ಕೆ ಇಂದು (ಏಪ್ರಿಲ್ 25) ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ((Priyanak gandhi) ) ಪ್ರವೇಶ ಮಾಡಲಿದ್ದು, ಮಂಗಳವಾರ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಭಾನುವಾರ ಹಾಗೂ ಸೋಮವಾರ ಪ್ರಿಯಾಂಕಾ ಗಾಂಧಿ ಅವರ ಸಹೋದರ ರಾಹುಲ್‌ಗಾಂಧಿ(Rahul gandhi)) ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರ ನಡೆಸಿದ್ದರು. ಸೋಮವಾರ ರಾತ್ರಿ ರಾಹುಲ್‌ಗಾಂಧಿ ಅವರು ದೆಹಲಿಗೆ ವಾಪಸಾದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ  ಅವರು  ಕರ್ನಾಟಕಕ್ಕೆ ಬರಲಿದ್ದಾರೆ.

ಮಂಗಳವಾರ ಮಧ್ಯಾಹ್ನ ಮೈಸೂರಿನ ಟಿ.ನರಸೀಪುರ ಕ್ಷೇತ್ರದ ಯಳವರ ಹುಂಡಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಗೌರಿಶಂಕರ ಹಾಲ್‌ನಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ಕ್ಷೇತ್ರದಲ್ಲಿ ಬೃಹತ್‌ ರಾರ‍ಯಲಿ ನಡೆಸಲಿದ್ದಾರೆ. ತೋಪಮ್ಮ ದೇವಾಲಯದಿಂದ ಅಂಬೇಡ್ಕರ್‌ ಪ್ರತಿಮೆ ಮೂಲಕ ಪುರಸಭೆ ಕಚೇರಿವರೆಗೆ ಬೃಹತ್‌ ರಾರ‍ಯಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆಗೆ ಕೇವಲ ಹದಿನೈದು ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸಲು ಕಾಂಗ್ರೆಸ್‌ ರಣತಂತ್ರ ರೂಪಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ತಲಾ ಹತ್ತು ದಿನ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ನಾಯಕರು ನಿತ್ಯ ಮೂರು ಕ್ಷೇತ್ರಗಳಂತೆ ತಲಾ 30 ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವರು. ರಾಜ್ಯ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ನಿತ್ಯ 4-5 ಕ್ಷೇತ್ರಗಳಂತೆ ಬಹಿರಂಗ ಪ್ರಚಾರ ಅಂತ್ಯವಾಗುವ ವೇಳೆಗೆ 70-75 ಕ್ಷೇತ್ರಗಳಲ್ಲಿ ಸಂಚರಿಸಲಿದ್ದಾರೆ. ಇದೇ ವೇಳೆ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಅವರು 60-65 ಕ್ಷೇತ್ರಗಳಲ್ಲಿ ಮತಯಾಚನೆ ನಡೆಸಲು ಕಾಂಗ್ರೆಸ್‌ ವೇಳಾಪಟ್ಟಿಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ.

ರಾಹುಲ್‌ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಒಂದು ಬಾರಿ ರಾಜ್ಯಕ್ಕೆ ಭೇಟಿ ನೀಡಿದಾಗ ಸತತವಾಗಿ ಎರಡು ದಿನ ಪ್ರಚಾರ ನಡೆಸುವರು. ಇನ್ನು ಚುನಾವಣಾ ಪ್ರಚಾರದ ವೇಳೆ ಯಾವುದೇ ಕಾರಣಕ್ಕೂ ರಾಷ್ಟ್ರೀಯ ವಿಚಾರಗಳನ್ನು ಪ್ರಸ್ತಾಪಿಸಬಾರದು. ರಾಜ್ಯದಲ್ಲಿನ ಭ್ರಷ್ಟಾಚಾರ, ದುರಾಡಳಿತ ಹಾಗೂ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಮತ ಯಾಚಿಸಬೇಕು. ಅನಗತ್ಯ ವಿಚಾರಗಳ ಬಗ್ಗೆ ಮಾತನಾಡುವ ಮೂಲಕ ಚುನಾವಣೆ ಹೊಸ್ತಿಲಲ್ಲಿ ವಿವಾದ ಸೃಷ್ಟಿಸಬಾರದು ಎಂದು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಗಾಂಧಿ ಎಲ್ಲೆಲ್ಲಿ ಪ್ರಚಾರ?

  • ಇಂದು ಬೆಳಗ್ಗೆ 11.30ಕ್ಕೆ ಸುತ್ತೂರು ಹೆಲಿಪ್ಯಾಡ್‌ಗೆ ಆಗಮನ.
  • ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಸಾರ್ವಜನಿಕರ ಸಭೆಯಲ್ಲಿ ಭಾಗಿ ಸ್ಥಳ ಹೆಳವರಹುಂಡಿ, ಟಿ ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ ಹೆಚ್ ಸಿ‌ ಮಹದೇವಪ್ಪ‌ ಪರ‌ ಮತಯಾಚನೆ.
  • ಮಧ್ಯಾಹ್ನ 2:30ಕ್ಕೆ ಟಿ ನರಸೀಪುರದಿಂದ ಹನೂರಿಗೆ ಹೊರಡಲಿರುವ ಪ್ರಿಯಾಂಕಾ ಗಾಂಧಿ.
  • ಸಂಜೆ 05:30 ರಿಂದ 6:30 ಕೆ ಆರ್ ನಗರದಲ್ಲಿ ರೋಡ್ ಶೋ‌ನಲ್ಲಿ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ.
  • ಕೈ ಅಭ್ಯರ್ಥಿ ರವಿಶಂಕರ್ ಪರ ಮತಯಾಚನೆ. ಕೆ ಆರ್ ನಗರದ ತೋಪಮ್ಮನ ದೇವಸ್ಥಾನ, ಅಂಬೇಡ್ಕರ್ ಪುತ್ತಳಿ ಮಾರ್ಗವಾಗಿ ಮುನ್ಸಿಪಾಲಿಟಿ ಆಫೀಸ್ ವೃತ್ತದವರೆಗೂ ಸುಮಾರು 2 km ಮೆರವಣಿಗೆಯಲ್ಲಿ‌ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ.

ಚಾಮರಾಜನಗರದಲ್ಲಿ ಪ್ರಿಯಾಂಕಾ ಪ್ರಚಾರ

  • ನಾಳೆ (ಏಪ್ರಿಲ್ 26) ಮಧ್ಯಾಹ್ನ 2 ಗಂಟೆಗೆ ಹನೂರಿನ ಜಿ.ವಿ. ಗೌಡ ಪ್ರಥಮ ದರ್ಜೆ ಕಾಲೇಜು ಸಮೀಪದ ಆವರಣದಲ್ಲಿ ಸಂವಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ ಭಾಗಿಯಾಗಲಿದ್ದಾರೆ.
  •  2008ರಲ್ಲಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಬುಡಕಟ್ಟು ಸೋಲಿಗ ಸಮುದಾಯದವರೊಂದಿಗೆ ಸಂವಾದ ನಡೆಸಿದ್ದರು

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:46 am, Tue, 25 April 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ