AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು. ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ […]

ರಾಹುಲ್ ​ಗಾಂಧಿ ರಾಜ್ಯದಲ್ಲಿ ಎರಡು ದಿನ ಪ್ರವಾಸ, ರ‍್ಯಾಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Oct 20, 2020 | 4:17 PM

Share

ದಾವಣಗೆರೆ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್​ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್​ ಗಾಂಧಿ ಕರ್ನಾಟಕದಲ್ಲಿ ಪಂಜಾಬ್​ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಗುವುದು. ಹಾಗಾಗಿ, ನವೆಂಬರ್ 7-8 ರಂದು ಎರಡು ದಿನ ರಾಹುಲ್​ ಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಸಹಿ ಸಂಗ್ರಹ ಚಳುವಳಿಯು ಹುಬ್ಬಳ್ಳಿಯಿಂದ ಹುಳಿಯಾಳ್ ಮೂಲಕ‌ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದು ಮಾರ್ಗವನ್ನು ರಾಹುಲ್​ ಗಾಂಧಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.

Published On - 4:12 pm, Tue, 20 October 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು