ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್ 7 ಮತ್ತು 8 ರಂದು ರಾಜ್ಯದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ ವಿರೋಧಿಸಿ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಪಂಜಾಬ್ ಮಾದರಿ ರಾಜ್ಯದಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.
ರೈತ ವಿರೋಧಿ ನೀತಿಗೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳುವಳಿಗೆ ಚಾಲನೆ ನೀಡಲಾಗುವುದು. ಹಾಗಾಗಿ, ನವೆಂಬರ್ 7-8 ರಂದು ಎರಡು ದಿನ ರಾಹುಲ್ ಗಾಂಧಿ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಸಹಿ ಸಂಗ್ರಹ ಚಳುವಳಿಯು ಹುಬ್ಬಳ್ಳಿಯಿಂದ ಹುಳಿಯಾಳ್ ಮೂಲಕ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದು ಮಾರ್ಗವನ್ನು ರಾಹುಲ್ ಗಾಂಧಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ.
Published On - 4:12 pm, Tue, 20 October 20