AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಬಳಿ ಸೆಲೆಬ್ರಿಟಿಗಳ ಬರ್ತ್ ​ಡೇ ವಿಶ್ ಮಾಡಲು ಸಮಯವಿದೆ, ರೈತರಿಗಾಗಿ ಸಮಯವಿಲ್ಲ: ಸತೀಶ್​ ಜಾರಕಿಹೊಳಿ

ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ.

ಪ್ರಧಾನಿ ಮೋದಿ ಬಳಿ ಸೆಲೆಬ್ರಿಟಿಗಳ ಬರ್ತ್ ​ಡೇ ವಿಶ್ ಮಾಡಲು ಸಮಯವಿದೆ, ರೈತರಿಗಾಗಿ ಸಮಯವಿಲ್ಲ: ಸತೀಶ್​ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
shruti hegde
| Edited By: |

Updated on:Apr 04, 2021 | 3:59 PM

Share

ಬೆಳಗಾವಿ: ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ. ಮರಾಠಾ ಸಮುದಾಯ ಓಲೈಕೆಗೆ ಕಾಂಗ್ರೆಸ್ ಕಸರತ್ತು ಮಾಡಿದ್ದು ಕೇಸರಿ ಪೇಟ ಧರಿಸಿ ಸತೀಶ್ ಜಾರಕಿಹೊಳಿ ಮತಯಾಚನೆ ಕೈಗೊಂಡಿದ್ದಾರೆ.

ಮರಾಠಿ ಭಾಷಿಗರೇ ಹೆಚ್ಚಾಗಿರುವ ಯಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಮತ ಪ್ರಚಾರದಲ್ಲಿ ಸತೀಶ್ ಜಾರಕಿಹೊಳಿ‌ ಹಿಂದಿ ಭಾಷೆಯಲ್ಲಿ ಭಾಷಣ ಮಾಡಿದ್ದಾರೆ. ಪೆಟ್ರೋಲ್​, ಡೀಸೆಲ್​ ಜೊತೆಗೆ ಸಿಲೆಂಡರ್​ ಗ್ಯಾಸ್​ ಬೆಲೆ ಏರಿಕೆ ತಡೆಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಜನಪರ ಸರ್ಕಾರ ಬೇಕು. ಯಾವುದೇ ಅದಾನಿಗಾಗಲಿ, ಅಂಬಾನಿಗಾಗಲಿ ಸರ್ಕಾರ ಇರಬಾರದು. ದೆಹಲಿ ಸರ್ಕಾರ ಕೇವಲ ಎರಡ್ಮೂರು ಜನರಿಗಾಗಿ ನಡೆಯುತ್ತಿದೆ. ಇದನ್ನ ತಡೆಯಲು ಈ ಚುನಾವಣೆ ಮೂಲಕ ಸರ್ಕಾರಕ್ಕೆ ಉತ್ತರಿಸಬೇಕು ಎಂದು ಮಾತನಾಡಿದ್ದಾರೆ.

ಜನವಿರೋಧಿ ನೀತಿ ಅನುಸರಿಸದರೆ ಜನರು ತಕ್ಕ ಉತ್ತರ ನೀಡುತ್ತಾರೆ ಎಂಬ ಸಂದೇಶ ಸಾರಬೇಕಿದೆ. ಒಂದು ಮತವೂ ಬಹಳ ಬೆಲೆಯುಳ್ಳದ್ದು. ಯಾವುದೇ ಸರ್ಕಾರ ಬೀಳಿಸುವ ಅಥವಾ ಆರಿಸಿ ತರುವ ಶಕ್ತಿ ಒಂದು ಮತಕ್ಕಿದೆ. ಜನರ ಕಷ್ಟವನ್ನು ಆಲಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಹೇಳಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಈವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಸೆಲೆಬ್ರಿಟಿಗಳ ಬರ್ತ್ ​ಡೇಗೆ ವಿಶ್ ಮಾಡಲು ಸಮಯ ಇದೆ. ಆದರೆ ರೈತರಿಗಾಗಿ ಪ್ರಧಾನಿ ಮೋದಿ ಬಳಿ ಸಮಯ ಇಲ್ಲ. ಯಾರು ಕೆಲಸ ಮಾಡುತ್ತಾರೋ ಅವರ ಕೈಗೆ ಅಧಿಕಾರ ಬೇಕು. ಕೇವಲ ಭಾಷಣ, ರಾಮ ಮಂದಿರದಿಂದ ರಾಮರಾಜ್ಯ ಆಗಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸತೀಶ್ ಜಾರಕಿಹೊಳಿ‌ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆಯನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲುತ್ತೇವೆ: ಬಸವರಾಜ ಬೊಮ್ಮಾಯಿ

Karnataka ByElection 2021: ಕರ್ನಾಟಕ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ ; ಏಪ್ರಿಲ್ 17ರಂದು ನಡೆಯಲಿದೆ ಚುನಾವಣೆ

(satish jarkiholi started Congress vote campaign has begun in belagavi)

Published On - 3:57 pm, Sun, 4 April 21

Follow Us
shruti hegde
shruti hegde
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ