ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಜೂನ್ 1) ಜ್ವರ ಕಂಡುಬಂದ ಕಾರಣಕ್ಕೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದರು. ಅಗತ್ಯ ಕಂಡುಬಂದರೆ ವೈದ್ಯರ ಸೂಚನೆ ಅನುಸರಿಸಿ ದಾಖಲಾಗುವ ಬಗ್ಗೆ ಹೇಳಿದ್ದರು. ಆ ಬಳಿಕ, ಸಿದ್ದರಾಮಯ್ಯ ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ ನಾರ್ಮಲ್ ಬಂದಿತ್ತು. ಆದರೂ ವೈರಲ್ ಫೀವರ್ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಈಗ ಸಿದ್ದರಾಮಯ್ಯ ಜತೆ ಆಸ್ಪತ್ರೆಯಲ್ಲಿ ಪುತ್ರ ಡಾ.ಯತೀಂದ್ರ ಇದ್ದಾರೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು.
ಸಿದ್ದರಾಮಯ್ಯ ಮಾರ್ಚ್ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್ ಸರ್ ವ್ಯಾಕ್ಸಿನ್ ಹಾಕಿ ಆಯ್ತು ಎಂದು ಹೇಳಿದ್ದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ? ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದ್ದರು.
ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಜ್ವರ; ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ
ಲಸಿಕೆ ಸೇವಾ ಶುಲ್ಕ ಹೆಚ್ಚಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ರೋಶ; ಸರ್ಕಾರದ ನಡೆಯ ವಿರುದ್ಧ ಖಡಕ್ ಪ್ರಶ್ನೆ
Published On - 10:47 pm, Tue, 1 June 21