ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಡ್ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ಇಷ್ಟಕ್ಕೇ ಸೀಮತರಾಗಿ ಇರಬಾರದು. ರಾಜ್ಯದ ಸಂಸದರ ನಿಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಕರೆದೊಯ್ಯಬೇಕು. ರಾಜ್ಯದ ಪಾಲಿನ ಆಕ್ಸಿಜನ್ ಒದಗಿಸಲು ಪ್ರಧಾನಿ ಮೋದಿಗೆ ಬೇಡಿಕೆ ಇಡಬೇಕು ಎಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುವುದಾಗಿ ತಜ್ಞರು ಹೇಳಿದ್ದಾರೆ. ಹೀಗಾಗಿ ರಾಜ್ಯಕ್ಕೆ ಪೂರೈಕೆಯಾಗುತ್ತಿರುವ ಆಕ್ಸಿಜನ್ ಪ್ರಮಾಣ ಹೆಚ್ಚಾಗಬೇಕಿದೆ. ಪಕ್ಕದ ಕೇರಳ ರಾಜ್ಯವು ಆಕ್ಸಿಜನ್ ದಾಸ್ತಾನು ಇಟ್ಟುಕೊಂಡಿದೆ. ಆದರೆ ರಾಜ್ಯದಲ್ಲಿ ಮಾತ್ರ ಆಕ್ಸಿಜನ್ ಸರಿಯಾಗಿ ಪೂರೈಕೆಯಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಕೊಲಾರ, ಕಲಬುರಗಿ, ಬೀದರ್ ಹಾಗೂ ಬೆಂಗಳೂರಿನಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತರಾಗಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಕೂಡ ನ್ಯಾಯಾಂಗ ತನಿಖೆ ಆಗಬೇಕಿದೆ. ರಾಜ್ಯದಲ್ಲಿ ಪ್ರತಿದಿನ 812 ಟನ್ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ. ಆದರೆ ರಾಜ್ಯಕ್ಕೆ 625 ಟನ್ ಹಂಚಿಕೆ ಮಾಡಿದ್ದಾರೆ. ಒಡಿಶಾದಿಂದ 135 ಟನ್ ಆಕ್ಸಿಜನ್ ರಾಜ್ಯಕ್ಕೆ ಬರುತ್ತಿದೆ. ಅದಕ್ಕೆ 45 ಗಂಟೆ ಬೇಕು. ರಾಜ್ಯದಲ್ಲಿ ಉತ್ಪಾದನೆ ಆಗುತ್ತಿಗೆ ಆಮ್ಲಜನಕವನ್ನು ರಾಜ್ಯದಲ್ಲಿಯೇ ಬಳಸಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯ ಮಾಡಿದರು.
ಈಗ ಸಪ್ಲೈ ಆಗುತ್ತಿರುವ ಆಕ್ಸಿಜನ್ ನಮ್ಮ ಅಗತ್ಯದ ಅರ್ಧದಷ್ಟನ್ನೂ ಪೂರೈಸುತ್ತಿಲ್ಲ. ತಜ್ಞರು ಹೇಳಿದಂತೆ ಸರ್ಕಾರ ನಡೆದುಕೊಳ್ಳಬೇಕು. ಅವರ ಸಲಹೆಯನ್ನು ಗಂಭೀರವಾಗಿ ಸ್ವೀಕರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
(Congress Leader Siddaramaiah Demands Tejasvi Surya to Take a Delegation to Delhi to Meet Narendra Modi)
ಇದನ್ನೂ ಓದಿ: ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಸಂಸದರ ವಿರುದ್ಧ ಗುಪ್ತ ಕಾರ್ಯಾಚರಣೆ ನಡೆಸಬೇಕು; ಸಿದ್ದರಾಮಯ್ಯ ಟ್ವೀಟ್
ಇದನ್ನೂ ಓದಿ: ಜೂನ್ ವೇಳೆ ಬೆಂಗಳೂರಿಗೆ 70 ಸಾವಿರ ಆಕ್ಸಿಜನ್ ಬೆಡ್ ಬೇಕು: ಕೇಂದ್ರ ಸರ್ಕಾರ
Published On - 5:05 pm, Wed, 5 May 21