ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳ; ನೆರವಿಗೆ ಧಾವಿಸಿದ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9kannada Web Team

| Edited By: ganapathi bhat

Aug 23, 2021 | 12:27 PM

ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದ್ದಾರೆ. ಬಾದಾಮಿ ತಾಲೂಕು ಆಡಳಿತಕ್ಕೆ 3 ಆ್ಯಂಬುಲೆನ್ಸ್ ಹಸ್ತಾಂತರ ಮಾಡಿದ್ದಾರೆ. ಸಿದ್ದರಾಮಯ್ಯ ಬೆಂಬಲಿಗರು ಆ್ಯಂಬುಲೆನ್ಸ್ ಹಸ್ತಾಂತರಿಸಿದ್ದಾರೆ. ಬಾದಾಮಿ ತಹಸೀಲ್ದಾರ್ ಸುಹಾಸ ಇಂಗಳೆ, ಟಿಎಚ್​ಒ ಡಾ. ಎಂ.ಬಿ. ಪಾಟಿಲ್​ಗೆ ಸಿದ್ದರಾಮಯ್ಯ ಬೆಂಬಲಿಗರು ಆಂಬುಲೆನ್ಸ್ ಹಸ್ತಾಂತರಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಪ್ರತಿನಿಧಿಸುತ್ತಾರೆ. ತಮ್ಮ ಕ್ಷೇತ್ರದ ಆರೋಗ್ಯ ಸಿಬ್ಬಂದಿಗೆ 100 ಎನ್-95 ಮಾಸ್ಕ್ ವಿತರಿಸಿದ್ದಾರೆ. ಜೊತೆಗೆ, 50 ಪಿಪಿಇ ಕಿಟ್​ಗಳನ್ನು ಕೂಡ ಸಿದ್ದರಾಮಯ್ಯ ಬೆಂಗಲಿಗರು ವಿತರಿಸಿದ್ದಾರೆ.

ಬಾದಾಮಿ ತಾಲೂಕಿನಲ್ಲಿ ಪರಿಸ್ಥಿತಿ ಹೇಗಿದೆ? ಎರಡನೇ ಅಲೆ ಕಾಣಿಸಿಕೊಂಡ ಮೇಲೆ ಸಿದ್ದರಾಮಯ್ಯ ಇನ್ನೂ ತಮ್ಮ ಕ್ಷೇತ್ರಕ್ಕೆ ಬಂದಿಲ್ಲ. ಕಳೆದ ವಾರ ಕ್ಷೇತ್ರದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಕ್ರಮ ತಡಗೆದುಕೊಂಡಿದ್ದ ಸಿದ್ದರಾಮಯ್ಯ, ಅಧಿಕಾರಿಗಳ ಜೊತೆ ಮೊಬೈಲ್​ನಲ್ಲಿ ಮಾತನಾಡಿ ನಿತ್ಯ 40 ಜಂಬೂ ಸಿಲಿಂಡರ್ ಪೂರೈಕೆಗೆ ಕ್ರಮ ಕೈಗೊಂಡಿದ್ದರು. ಬಳಿಕ, ಇಂದು ಮೂರು ಅಂಬುಲೆನ್ಸ್ ಒದಗಿಸಿದ್ದಾರೆ. ಆದರೆ, ಕ್ಷೇತ್ರಕ್ಕೆ ಸಿದ್ದರಾಮಯ್ಯ ಯಾವಾಗ ಬರ್ತಾರೆ ಎಂದು ಕ್ಷೇತ್ರದ ಜನರು ಕಾಯುತ್ತಿದ್ದಾರೆ.

ಟ್ವಿಟರ್​ನಲ್ಲಿ ಪ್ರೊಫೈಲ್​ ಪಿಕ್ಚರ್​ ಬದಲಿಸಿದ ಸಿದ್ದರಾಮಯ್ಯ ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ವ್ಯಾಕ್ಸಿನ್ ನೀಡದ ವಿಚಾರಕ್ಕೆ ಸಿದ್ದರಾಮಯ್ಯ ಪ್ರೊಫೈಲ್ ಪಿಕ್ಚರ್​ ಬದಲಾವಣೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಜೀ, ನಮ್ಮನೆ ಮಕ್ಕಳ ಲಸಿಕೆ ವಿದೇಶಕ್ಕೆ ರಫ್ತು ಮಾಡಿದ್ಯಾಕೆ? ಎಂದು ಪ್ರೊಫೈಲ್ ಪಿಕ್ಚರ್ ಬದಲಾಯಿಸಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಬ್ರಿಟನ್​ನ​ಲ್ಲಿ ಕಂಡುಬರುವ ಕೊರೊನಾವೈರಸ್ ತಳಿಗಳ ವಿರುದ್ಧ ಕೊವಾಕ್ಸಿನ್ ಪರಿಣಾಮಕಾರಿ: ಭಾರತ್ ಬಯೋಟೆಕ್‌

ತಮಿಳುನಾಡಿನಲ್ಲಿ ಕೊರೊನಾ ಪ್ಯಾಕೇಜ್ ಘೋಷಣೆ; ಎಲ್ಲಾ ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊವಿಡ್​ಗೆ ಉಚಿತ ಚಿಕಿತ್ಸೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada