ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಜ್ವರ; ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಜ್ವರ; ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಸಿದ್ದರಾಮಯ್ಯ ತೆರಳಿದ್ದಾರೆ. ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದೂ ತಿಳಿದುಬಂದಿದೆ.

TV9kannada Web Team

| Edited By: ganapathi bhat

Aug 14, 2021 | 12:50 PM

ಬೆಂಗಳೂರು: ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯಗೆ ಜ್ವರ ಇದೆ ಎಂದು ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಅವರು ತೆರಳಿದ್ದಾರೆ. ವೈದ್ಯರು ಸೂಚಿಸಿದರೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದೂ ತಿಳಿದುಬಂದಿದೆ.

ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ತಪಾಸಣೆಗೆ ಒಳಪಡುತ್ತಿದ್ದಾರೆ. ಅಗತ್ಯ ಬಿದ್ದರೆ ವೈದ್ಯರ ಸಲಹೆ ಆಧರಿಸಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ಕೊರೊನಾ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ವರ್ಷ ಆಗಸ್ಟ್​ನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ವಾರದ ಬಳಿಕ ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದರು. ಸೋಂಕಿನಿಂದ ಗುಣಮಖರಾದ ಬಳಿಕ, ಕೊವಿಡ್‌ ಮಾರ್ಗಸೂತ್ರಗಳಂತೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ನಂತರ ನಿಯಮದಂತೆ ಮನೆಯಲ್ಲಿ ಕ್ವಾರಂಟೈನ್‌ ಆಗಿದ್ದರು.

ಸಿದ್ದರಾಮಯ್ಯ ಮಾರ್ಚ್​ನಲ್ಲಿ ಕೊರೊನಾ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಕೊವಿಡ್​ ಲಸಿಕೆ ಹಾಕಿಸಿಕೊಂಡಿದ್ದರು. ಲಸಿಕೆ ಪಡೆದ ಬಳಿಕ ಸ್ವಲ್ಪ ಹೊತ್ತು ಹಾಗೇ ಕುಳಿತಿದ್ದ ಸಿದ್ದರಾಮಯ್ಯಗೆ ನರ್ಸ್​ ಸರ್​ ವ್ಯಾಕ್ಸಿನ್​ ಹಾಕಿ ಆಯ್ತು ಎಂದು ಹೇಳಿದ್ದರು. ಅದಕ್ಕೆ ಕೊಂಚ ಆಶ್ಚರ್ಯಗೊಂಡ ಸಿದ್ದರಾಮಯ್ಯ, ಹೌದಾ?  ಗೊತ್ತೇ ಆಗಲಿಲ್ಲ ಎಂದು ನಗೆ ಚಟಾಕಿ ಹಾರಿಸಿದ್ದರು. 

ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿದ ಮೆಡಿಸನ್‌ ತಗೊಂಡ್ರೆ 99.97 % ಕೊರೊನಾ ಬರಲ್ವಂತೆ

ರಾಜ್ಯದಲ್ಲಿ ಕೊರೊನಾ ನಿಯಂತ್ರಣ, ಚಿಕಿತ್ಸೆಗೆಂದು ಮುಖ್ಯಮಂತ್ರಿ ಯಡಿಯೂರಪ್ಪ- ಪ್ರಧಾನಿ ಮೋದಿಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

Follow us on

Related Stories

Most Read Stories

Click on your DTH Provider to Add TV9 Kannada