ಜಮೀರ್ ಹೃದಯವಂತ ರಾಜಕಾರಣಿ; ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ: ಸಿದ್ದರಾಮಯ್ಯ ಪ್ರತಿಕ್ರಿಯೆ

| Updated By: ganapathi bhat

Updated on: Jun 19, 2021 | 5:30 PM

ಶಾಸಕರು ಅವರ ಅಭಿಪ್ರಾಯವನ್ನು ಹೇಳ್ತಾರೆ. ಆದರೆ, ನಮ್ಮಲ್ಲಿ ಒಂದು ಪದ್ಧತಿಯಿದೆ, ಇಂತಹ ವಿಚಾರಗಳನ್ನು ಹೈಕಮಾಂಡ್ ನಿರ್ಧರಿಸುತ್ತೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನೂ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಮೀರ್ ಹೃದಯವಂತ ರಾಜಕಾರಣಿ; ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ: ಸಿದ್ದರಾಮಯ್ಯ ಪ್ರತಿಕ್ರಿಯೆ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಶಾಸಕ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಜಮೀರ್ ಅಹ್ಮದ್ ಹೇಳಿದ್ದು ಪಕ್ಷದ ಅಭಿಪ್ರಾಯವಲ್ಲ. ಶಾಸಕರು ಅವರ ಅಭಿಪ್ರಾಯವನ್ನು ಹೇಳಿದ್ದಾರೆ ಎಂದು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಶಾಸಕರು ಅವರ ಅಭಿಪ್ರಾಯವನ್ನು ಹೇಳ್ತಾರೆ. ಆದರೆ, ನಮ್ಮಲ್ಲಿ ಒಂದು ಪದ್ಧತಿಯಿದೆ, ಇಂತಹ ವಿಚಾರಗಳನ್ನು ಹೈಕಮಾಂಡ್ ನಿರ್ಧರಿಸುತ್ತೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನೂ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ವೇಳೆ, ಜಮೀರ್ ಹೃದಯವಂತ ರಾಜಕಾರಣಿ. ಅವರು ತಮ್ಮ ಕ್ಷೇತ್ರದ ಜನರಿಗೆ ಶಕ್ತಿ ಮೀರಿ ಸಹಾಯ ಮಾಡ್ತಿದ್ದಾರೆ. ಇಂತಹ ಶಾಸಕನನ್ನ ಪಡೆದಿರೋ ಚಾಮರಾಜಪೇಟೆ ಜನರು ಧನ್ಯರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ಧಾರೆ.

ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಹೇಳಿಕೆ ವಿಚಾರಕ್ಕೆ ಈಗ ಬಿಜೆಪಿ ನಾಯಕರಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗೆಂದು ಸಿದ್ದರಾಮಯ್ಯನವರೇ ಪ್ರಚಾರ ಮಾಡುವುದಕ್ಕೆ ಹೇಳಿರಬೇಕು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರನ್ನು ಕೇಳಿ ಎಂದು ಕೊಪ್ಪಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ಸದ್ಯಕ್ಕೆ ಮುಖ್ಯಮಂತ್ರಿ ಯಾರೆಂಬ ಪ್ರಶ್ನೆಯೇ ಬರುವುದಿಲ್ಲ. ಮುಂದಿನ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್‌ನವರು ಸುಮ್ಮನೆ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ಕೃಷಿ ಇಲಾಖೆ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಅವರ ತಟ್ಟೆಯಲ್ಲೇ ಕತ್ತೆ ಬಿದ್ದಿದೆ, ಅವರು ಇನ್ನೇನು ಬಿಜೆಪಿ ಬಗ್ಗೆ ಮಾತಾಡ್ತಾರೆ? ನೀವು ಜಮೀರ್ ಅಹ್ಮದ್ ಅಥವಾ ಡಿಕೆಶಿ ಅವರನ್ನು ಕೇಳಿ. ನಾನು ಬಿಜೆಪಿ ಪಕ್ಷದಲ್ಲಿ‌ ಇದ್ದೇನೆ, ನಾನು ಕಾಂಗ್ರೆಸ್ ಅಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿರುವುದು 8-10 ಪರ್ಸೆಂಟ್ ಕಮಿಷನ್ ಸರ್ಕಾರ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

Siddaramaiah: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕುರುಬ ನಾಯಕರ ಆಕ್ರೋಶ