ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಸಿಎಂ ಮಾಡಿದರೆ ಏನು ಪ್ರಯೋಜನ?-ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್​

TV9 Digital Desk

| Edited By: Lakshmi Hegde

Updated on:Jul 26, 2021 | 1:29 PM

BS Yediyurappa Resign: ಬಿಜೆಪಿ ತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಸವಾಲು ಹಾಕಿದೆ.

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಸಿಎಂ ಮಾಡಿದರೆ ಏನು ಪ್ರಯೋಜನ?-ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್​
ಸಿದ್ದರಾಮಯ್ಯ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ಸರಣಿ ಟ್ವೀಟ್​ ಮಾಡಿ, ಬಿಜೆಪಿಯನ್ನು ಟೀಕಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಪದತ್ಯಾಗ ಅಲ್ಲ..ಪದಚ್ಯುತಿ ಎಂದು ಹೇಳಿದೆ. ಯಡಿಯೂರಪ್ಪನವರು ಪದತ್ಯಾಗ ಮಾಡಿದ್ದಲ್ಲ. ಬದಲಿಗೆ ಅವರನ್ನು ಪದಚ್ಯುತಿಗೊಳಿಸಲಾಗಿದೆ ಎಂಬುದನ್ನು ಅವರ ಕಣ್ಣೀರೇ ಹೇಳುತ್ತಿದ್ದವು. ತಮ್ಮದು ವಿಫಲ ನಾಯಕತ್ವ ಎಂಬುದಕ್ಕೆ ಬಿಎಸ್​ವೈ ರಾಜೀನಾಮೆ ಘೋಷಿಸಿದ್ದೇ ಸಾಕ್ಷಿ ಎಂದೂ ವ್ಯಂಗ್ಯವಾಡಿದೆ.

ಕಾಂಗ್ರೆಸ್​ ಟ್ವೀಟ್​ನ ಸಾರಾಂಶ ಹೀಗಿದೆ..ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎಂಬುದನ್ನು ಬಿ.ಎಸ್​.ಯಡಿಯೂರಪ್ಪನವರು ರಾಜೀನಾಮೆ ಘೋಷಣೆ ಮಾಡುವ ಮೂಲಕ ಒಪ್ಪಿಕೊಂಡಿಂತಾಗಿದೆ. ಅವರೇ ಹೇಳಿಕೊಳ್ಳುವಂತೆ ಸಮರ್ಥ ಆಡಳಿತವೇ ಆಗಿದ್ದರೆ ಈಗ ಪದಚ್ಯುತಿ ಮಾಡಿದ್ದೇಕೆ?

ಬಿಜೆಪಿ ದುರಾಡಳಿತದಿಂದ ಬೇಸತ್ತ ರಾಜ್ಯದ ಜನರು ಬಯಸುತ್ತಿರುವುದು ನಾಯಕತ್ವ ಬದಲಾವಣೆಯನ್ನಲ್ಲ..ಸರ್ಕಾರವೇ ಬದಲಾಗಲಿ ಎಂದು ಬಯಸುತ್ತಿದ್ದಾರೆ. ತಾಕತ್ತಿದ್ದರೆ, ನೈತಿಕತೆಯಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ರಾಜ್ಯವನ್ನು ಯಾರು ಆಳಬೇಕು ಎನ್ನುವುದನ್ನು ಜನರೇ ನಿರ್ಧರಿಸಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸಿದ್ದರಾಮಯ್ಯ ಟ್ವೀಟ್​ ಇನ್ನೊಂದೆಡೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರೂ ಟ್ವೀಟ್​ ಮಾಡಿದ್ದಾರೆ. ಜನ ಕಷ್ಟದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಜಾನುವಾರುಗಳು ಸಾವಿಗೀಡಾಗಿವೆ. ಜನರ ಕಷ್ಟ ಅರಿತು ಅವರ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಬಿಜೆಪಿ ನಾಯಕರು ನಾಯಕರು ಮುಖ್ಯಮಂತ್ರಿ ಬದಲಾವಣೆ, ಮಂತ್ರಿ ಪದವಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿದ್ದಾರೆ.

ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ. ಇಷ್ಟಾದರೂ ಹೆತ್ತವರಿಗೆ ಹೆಗ್ಗಣ ಮುದ್ದು ಎಂಬ ಗಾದೆ ಮಾತಿನಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ಬಿಎಸ್​ವೈ ಅವರೇ ಉತ್ತಮ ಮುಖ್ಯಮಂತ್ರಿಯಾಗಿ ಕಂಡಿದ್ದಾರೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada