‘ಯಡಿಯೂರಪ್ಪರನ್ನು ಇಟ್ಟುಕೊಳ್ತೀರಾ ಕಿತ್ತುಹಾಕ್ತೀರಾ ಬೇಗ ನಿರ್ಧಾರ ಮಾಡಿ; ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ’

ಈಗಲೂ ಕಾಲ ಮಿಂಚಿಲ್ಲ, ಇಂಥ ಅನೈತಿಕ ಬೆಂಬಲ ಬೇಡವಾದ್ರೆ. ಪಕ್ಷಾಂತರಿಗಳನ್ನು ಕಿತ್ತು ಹಾಕಿ, ಯಾಕೆ ಗೋಳಾಡುತ್ತೀರಿ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

‘ಯಡಿಯೂರಪ್ಪರನ್ನು ಇಟ್ಟುಕೊಳ್ತೀರಾ ಕಿತ್ತುಹಾಕ್ತೀರಾ ಬೇಗ ನಿರ್ಧಾರ ಮಾಡಿ; ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ’
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ganapathi bhat

Updated on:Jun 16, 2021 | 10:06 PM

ಬೆಂಗಳೂರು: ಕೊವಿಡ್ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸಿಎಂ ಯಡಿಯೂರಪ್ಪರನ್ನು ಇಟ್ಟುಕೊಳ್ತೀರಾ? ಕಿತ್ತುಹಾಕ್ತೀರಾ? ಇದು ಬಿಜೆಪಿಗೆ ಸಂಬಂಧಿಸಿದ ವಿಚಾರ. ಆದರೆ, ಶೀಘ್ರ ಈ ಬಗ್ಗೆ ನಿರ್ಧಾರ ಕೈಗೊಳ್ಳಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಶೀಘ್ರ ನಿರ್ಧಾರಕ್ಕೆ ಬಂದು ರಾಜ್ಯಕ್ಕೊಂದು ಸುಭದ್ರ ಸರ್ಕಾರ ಕೊಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ತೊಲಗಿ. ಪಕ್ಷಾಂತರಿಗಳ ಅನೈತಿಕ ಬಲದಿಂದ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರ ಅನುಭವಿಸುತ್ತಿದೆ. ಮೂಲ ನಾಯಕರು ಈಗ ಅವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ತಿರುಗಿ ಬಿದ್ದಿರುವುದು ಪ್ರಕೃತಿಯ ಸಹಜ ನ್ಯಾಯವೇ ಸರಿ. ಈಗಲೂ ಕಾಲ ಮಿಂಚಿಲ್ಲ, ಇಂಥ ಅನೈತಿಕ ಬೆಂಬಲ ಬೇಡವಾದ್ರೆ. ಪಕ್ಷಾಂತರಿಗಳನ್ನು ಕಿತ್ತು ಹಾಕಿ, ಯಾಕೆ ಗೋಳಾಡುತ್ತೀರಿ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರ ಜೊತೆ ಅರುಣ್​ ಸಿಂಗ್​ ಸಭೆ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ. ಕಚೇರಿಯಲ್ಲಿ ಕುಳಿತು ಕೆಲಸ ಮಾಡಬೇಕಾದ ಸಚಿವರು, ಕ್ಷೇತ್ರದಲ್ಲಿ ಜನರ ಜೊತೆ ಇರಬೇಕಾದ ಬಿಜೆಪಿ ಶಾಸಕರು, ತಮ್ಮ ಅಹವಾಲು ಸಲ್ಲಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹೈಕಮಾಂಡ್​ ಪ್ರತಿನಿಧಿಗೆ ಅಹವಾಲು ಸಲ್ಲಿಸಲು ಕ್ಯೂ ಇದೆ ಎಂದು ವ್ಯಂಗ್ಯವಾಡಿದ್ದಾರೆ.

ಸಿಎಂ ಬಿಎಸ್​ವೈ ಪರ-ವಿರೋಧಿ ಬಣಗಳ ಕಿತ್ತಾಟದಲ್ಲಿ, ರಾಜ್ಯದ ಜನರ ನೋವನ್ನು ಕೇಳುವವರು ಯಾರು? ಎಂದು ಟ್ವಿಟರ್​ನಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಘಟಕ ಪ್ರಶ್ನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ. ಜನರಿಗೆ ವ್ಯಾಕ್ಸಿನ್​​ ನೀಡಿಕೆಯ ಕಾರ್ಯ ಕುಂಟುತ್ತಾ ಸಾಗಿದೆ ಎಂದು ವಿರೋಧ ವ್ಯಕ್ತಪಡಿಸಿದೆ.

ಇನ್ನೊಂದೆಡೆ 3ನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಸುತ್ತಿದ್ದಾರೆ. ಆದರೆ ಸಿಎಂ ತನ್ನ ಕುರ್ಚಿ ಉಳಿಸಿಕೊಳ್ಳಲು ಹೋರಾಡ್ತಿದ್ದಾರೆ. ರಾಜ್ಯದ ಜನರನ್ನು ಉಳಿಸುವವರು ಯಾರು ಎಂದು ಟ್ವಿಟರ್​ನಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಘಟಕ ಪ್ರಶ್ನೆ ಮಾಡಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ಇಲ್ಲ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ನಾನು ದೆಹಲಿಗೆ ಹೋಗಿಲ್ಲ; ಎಲ್ಲವನ್ನೂ ಅರುಣ್ ಸಿಂಗ್ ಮುಂದೆ ಹೇಳ್ತೀನಿ: ಸಿ ಪಿ ಯೋಗೇಶ್ವರ್

Published On - 9:19 pm, Wed, 16 June 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?