ಯಡಿಯೂರಪ್ಪ, ಮಗ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ; ಇದನ್ನು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ಮೊದಲು, 4 ಸಾವಿರದಲ್ಲಿ ಜೀವನ ಸಾಗಿಸುತ್ತಿದ್ದವರಿಗೆ 10,000 ರೂಪಾಯಿ ಬೇಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ದೇಶ, ರಾಜ್ಯದಲ್ಲಿ ಇಂತಹ ಕೆಟ್ಟ ಸರ್ಕಾರವಿದೆ.

ಯಡಿಯೂರಪ್ಪ, ಮಗ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ; ಇದನ್ನು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: ganapathi bhat

Updated on: Jun 21, 2021 | 4:30 PM

ಕೊಪ್ಪಳ: ನರೇಂದ್ರ ಮೋದಿ ಅಚ್ಛೇದಿನ್ ಬರುತ್ತೆ ಅಂದ್ರು, ಬಂದಿದೆಯಾ? ಯಡಿಯೂರಪ್ಪ ನೇತೃತ್ವದ ಸರ್ಕಾರ ಲೂಟಿ ಹೊಡೆಯುತ್ತಿದೆ. ಲೂಟಿ ಹೊಡೆಯುವುದನ್ನು ಬಿಟ್ಟರೆ ಬೇರೇನನ್ನೂ ಮಾಡುತ್ತಿಲ್ಲ. ಯಡಿಯೂರಪ್ಪ, ಮಗ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ, ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಎಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್​ ಆರೋಪ ಮಾಡ್ತಿದ್ದಾರೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಬೆಲೆ ಹೆಚ್ಚಳವಾಗಿದೆ ಎಂದು ಕೊಪ್ಪಳದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು, 4 ಸಾವಿರದಲ್ಲಿ ಜೀವನ ಸಾಗಿಸುತ್ತಿದ್ದವರಿಗೆ 10,000 ರೂಪಾಯಿ ಬೇಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ದೇಶ, ರಾಜ್ಯದಲ್ಲಿ ಇಂತಹ ಕೆಟ್ಟ ಸರ್ಕಾರವಿದೆ. ಅನುದಾನ ಕೇಳಿದರೆ ಸಿಎಂ ಬಿಎಸ್​ವೈ ಕೊರೊನಾ ಅಂತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಸುಮ್ನೆ ಬಂದಿದ್ರಾ. ಬಿಜೆಪಿಯಲ್ಲಿ ಗೊಂದಲ ಇಲ್ಲದೆಯೇ ಸುಮ್ಮನೆ ಬಂದಿದ್ರಾ? ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಗೆ ಬಂದಿತ್ತು. ನನಗಿರೋ ಮಾಹಿತಿ ಪ್ರಕಾರ ಯಡಿಯೂರಪ್ಪ ಬದಲಾಗ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೋದಿ ಸರ್ಕಾರ ಜನರ ರಕ್ತ ಹೀರುತ್ತಿದೆ ಎಂದೂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಮ್ಮಲ್ಲಿ ಯಾವುದೇ ಬಣ ಇಲ್ಲ, ಇರುವುದು ಒಂದೇ ಬಣ. ಸಿದ್ದರಾಮಯ್ಯ ಬಣವೂ ಇಲ್ಲ, ಡಿಕೆಶಿ ಬಣವೂ ನಮ್ಮಲ್ಲಿಲ್ಲ. ನಮ್ಮಲ್ಲಿರುವುದು ಒಂದೇ ಅಖಿಲ ಭಾರತ ಕಾಂಗ್ರೆಸ್ ಬಣ. ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗಿರೋದು ಬೇರೆ ಕೆಲಸಕ್ಕೆ. ಡಿ.ಕೆ. ಶಿವಕುಮಾರ್ ನನಗೆ ಹೇಳಿಯೇ ದೆಹಲಿಗೆ ಹೋಗಿದ್ದಾರೆ. ವಲಸೆ ಹೋದ ಶಾಸಕರು ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ನಾನೀಗ ಬಾದಾಮಿ ಕ್ಷೇತ್ರದ ಶಾಸಕ, ಮುಂದೆ ನೋಡೋಣ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ನಾನೇನು ನಮ್ಮಪ್ಪನ ಮನೆಯಿಂದ ಕೊಡುತ್ತಿರಲಿಲ್ಲ, ನಿಮ್ಮ ದುಡ್ಡಿಂದ ಕೊಡುತಿದ್ದೆ; ವಿಪಕ್ಷ ನಾಯಕ ಸಿದ್ದರಾಮಯ್ಯ  

ಜಮೀರ್ ಹೃದಯವಂತ ರಾಜಕಾರಣಿ; ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ: ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್