ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕೈ ನಾಯಕರ ಪ್ರಕರಣ: ಡಿಕೆಶಿ, ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ ರಿಲೀಫ್

| Updated By: ಗಂಗಾಧರ​ ಬ. ಸಾಬೋಜಿ

Updated on: Aug 09, 2024 | 5:20 PM

ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್​ ಸಿಡಿದೆದ್ದಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್​ ಅನುಮತಿ ಇಲ್ಲದೆಯೇ ಪ್ರತಿಭಟನೆ ಮಾಡಿತ್ತು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಇತರೆ ನಾಯಕರ ವಿರುದ್ಧ ಕೇಸ್​ ದಾಖಲಾಗಿತ್ತು. ಇದೀಗ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರವಣೆಯನ್ನು ಸುಪ್ರೀಂಕೋರ್ಟ್ 6 ವಾರಗಳ ಕಾಲ ಮುಂದೂಡಿದೆ.

ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕೈ ನಾಯಕರ ಪ್ರಕರಣ: ಡಿಕೆಶಿ, ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ ರಿಲೀಫ್
ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕೈ ನಾಯಕರ ಪ್ರಕರಣ: ಡಿಕೆಶಿ, ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ ರಿಲೀಫ್
Follow us on

ಬೆಂಗಳೂರು, ಆಗಸ್ಟ್​ 09: ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣ ರದ್ದು ಕೋರಿದ್ದ ಅರ್ಜಿ ವಿಚಾರವಣೆಯನ್ನು ಸುಪ್ರೀಂಕೋರ್ಟ್ 6 ವಾರಗಳ ಕಾಲ ಮುಂದೂಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮತಿ ಇಲ್ಲದೆಯೂ ಪ್ರತಿಭಟನೆ ನಡೆಸಿದ್ದಕ್ಕೆ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar)​ ಸೇರಿದಂತೆ ಇತರೆ ನಾಯಕರ‌ ವಿರುದ್ಧ ಕೇಸ್ ದಾಖಲಾಗಿತ್ತು. ಹೀಗಾಗಿ ಪ್ರಕರಣ ರದ್ದು ಮಾಡುವಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ಗೆ ಇತ್ತೀಚೆಗೆ ಕೋರ್ಟ್​ ಸಮನ್ಸ್ ನೀಡಿತ್ತು. ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ ಸಮನ್ಸ್ ಜಾರಿ ಮಾಡಿತ್ತು. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು 2022ರಲ್ಲಿ ವಿಲ್ಸನ್​​​ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು.

ಇದನ್ನೂ ಓದಿ: ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ಗೆ ಕೋರ್ಟ್​ ಸಮನ್ಸ್

ನ್ಯಾಷನಲ್​ ಹೆರಾಲ್ಡ್​ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆ ನೆಪದಲ್ಲಿ ಇಡಿ ಅಧಿಕಾರಿಗಳಿಂದ ಕಾಂಗ್ರೆಸ್​  ನಾಯಕ ರಾಹುಲ್ ಗಾಂಧಿಗೆ ಅನಗತ್ಯ ಕಿರುಕುಳ ಆರೋಪಿಸಿ ರಾಜ್ಯ ಕಾಂಗ್ರೆಸ್​ ಸಮಿತಿಯು ಜೂನ್ 2022 ರಲ್ಲಿ ಪ್ರತಿಭಟನೆಯನ್ನು ಆಯೋಜಿಸಿತ್ತು. ಪ್ರತಿಭಟನೆಗೆ ನಿರ್ಬಂಧವಿದ್ದರೂ ಧಿಕ್ಕರಿಸಿ ಸಿದ್ದರಾಮಯ್ಯ, ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದರು. ಹೀಗಾಗಿ  ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಚುನಾವಣೆ ಡೆಪಾಸಿಟ್ ಕಟ್ಟಲು 250 ರೂ ಸಹ ಇರಲಿಲ್ಲ: ಮುಡಾ ಆರೋಪದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಸಿಎಂ

ಪ್ರತಿಭಟನೆಯಿಂದ ಸಾರ್ವಜನಿಕರ ನೆಮ್ಮದಿಗೆ ಭಂಗವುಂಟಾಗಿದೆ ಮತ್ತು ಅಧಿಕಾರಿಗಳಿಂದ ಅಗತ್ಯ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಇದೇ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನಂತರ ರದ್ದುಗೊಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Fri, 9 August 24