ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ

ವಿಧಾನಸೌಧ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತವಾಗಿದೆ.

ಕಾಂಗ್ರೆಸ್​ ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ
ಶಾಸಕ ಮಹಾಂತೇಶ ಕೌಜಲಗಿ ಕಾರು ಅಪಘಾತ
Follow us
Shivaprasad
| Updated By: ವಿವೇಕ ಬಿರಾದಾರ

Updated on:May 20, 2024 | 12:04 PM

ಬೆಂಗಳೂರು, ಮೇ 20: ವಿಧಾನಸೌಧ (Vidhan Soudha) ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ (Mahantesh Koujalagi) ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಬ್ಬನ್ ಪಾರ್ಕ್​ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಸಕರ ಭವನದಿಂದ ಬರುವಾಗ, ಅತಿವೇಗವಾಗಿ ಬಂದ ಪೊಲೋ ಕಾರು ಶಾಸಕ ಮಹಾಂತೇಶ ಕೌಜಲಗಿಯವರ ಕಾರಿಗೆ ಗುದ್ದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದರಿಂದ, ಶಾಸಕ ಮಹಾಂತೇಶ್ ಕೌಜಲಗಿಯವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Published On - 11:57 am, Mon, 20 May 24