ವೇದಿಕೆಗೆ ಕರೆದಿಲ್ಲವೆಂದು ಸಿಎಂ ಕಾರ್ಯಕ್ರಮದಿಂದ ಹೊರ ನಡೆದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್

ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿ, ಆಮಂತ್ರಣ ಪತ್ರ ನೀಡಲಾಗಿತ್ತು. ಆದರೆ ವೇದಿಕೆಗೆ ಕರೆಯದೇ ಅವಮಾನಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮ ಬಿಜೆಪಿಯ ಕಾರ್ಯಕ್ರಮದಂತಿದೆ. ಹೀಗಾಗಿ ಕಾರ್ಯಕ್ರಮ ಬಹಿಷ್ಕಾರ ಮಾಡುವುದಾಗಿ ಹೇಳಿ ಎಂ.ವೈ.ಪಾಟೀಲ್ ಹೊರ ನಡೆದಿದ್ದಾರೆ.

ವೇದಿಕೆಗೆ ಕರೆದಿಲ್ಲವೆಂದು ಸಿಎಂ ಕಾರ್ಯಕ್ರಮದಿಂದ ಹೊರ ನಡೆದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್
ಎಂ.ವೈ.ಪಾಟೀಲ್
Follow us
TV9 Web
| Updated By: sandhya thejappa

Updated on:Jul 10, 2021 | 2:49 PM

ಕಲಬುರಗಿ: ಕಣ್ಣಿ ಮಾರುಕಟ್ಟೆ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕೈ ಶಾಸಕರನ್ನು ವೇದಿಕೆ ಮೇಲೆ ಕರೆದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್, ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ. ಕಾಂಗ್ರೆಸ್​ನ ಯಾವುದೇ ಶಾಸಕರನ್ನು ವೇದಿಕೆಗೆ ಆಹ್ವಾನಿಸಿಲ್ಲ. ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಅಂತ ಆರೋಪಿಸಿದ ಎಂ.ವೈ.ಪಾಟೀಲ್, ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ.

ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿ, ಆಮಂತ್ರಣ ಪತ್ರ ನೀಡಲಾಗಿತ್ತು. ಆದರೆ ವೇದಿಕೆಗೆ ಕರೆಯದೇ ಅವಮಾನಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮ ಬಿಜೆಪಿಯ ಕಾರ್ಯಕ್ರಮದಂತಿದೆ. ಹೀಗಾಗಿ ಕಾರ್ಯಕ್ರಮ ಬಹಿಷ್ಕಾರ ಮಾಡುವುದಾಗಿ ಹೇಳಿ ಎಂ.ವೈ.ಪಾಟೀಲ್ ಹೊರ ನಡೆದಿದ್ದಾರೆ.

ಪ್ರಧಾನಿ ಮೋದಿ ರೈತ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವರ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು. ರೈತರ ಪರವಾಗಿ ಶೋಭಾ ಕರಂದ್ಲಾಜೆ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಅವರು ರಾಜ್ಯದ ರೈತರ ಸಮಸ್ಯೆಗಳನ್ನು ಕೇಂದ್ರಕ್ಕೆ ತಿಳಿಸಲಿದ್ದಾರೆ. ಹೆಚ್ಚಿನ ಕೆಲಸ ಮಾಡುವ ಶಕ್ತಿ ಶೋಭಾ ಕರಂದ್ಲಾಜೆ ಅವರಿಗೆ ನೀಡಲಿ. ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇಂತಹ ಒಳ್ಳೆಯ ಕಾಲ ಬಂದಿರೋದು ನಮ್ಮ ಸುದೈವ ಎಂದು ನಗರದ ಕಣ್ಣಿ ತರಕಾರಿ ಮಾರುಕಟ್ಟೆಯಲ್ಲಿ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿಲ್ಲ ಕಲಬುರಗಿಯಲ್ಲಿ ನೂತನ ಕಣ್ಣಿ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚಿಂತನೆಯೂ ನಡೆದಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಗೆ ಬಂದರೆ ತಿಳಿಸುತ್ತೇನೆ ಎಂದರು. ಸಂಸದೆ ಸುಮಲತಾ, ಹೆಚ್.ಡಿ.ಕುಮಾರಸ್ವಾಮಿ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ರೀತಿಯಾಗಿ ಕಚ್ಚಾಡುವ ಅವಶ್ಯಕತೆ ಇಲ್ಲ. ಎಲ್ಲರೂ ಸಹೋದರರಂತೆ ಬಾಳುವುದನ್ನು ಕಲಿಯಬೇಕು. ಅಲ್ಲಿನ ಅಭಿವೃದ್ಧಿ ಬಗ್ಗೆ ಎಲ್ಲರೂ ಒಟ್ಟಾಗಿ ಹೋಗಬೇಕು. ಅಂಬಿ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದು ನನಗೆ ಸಮಾಧಾನವಿದೆ ಎಂದು ಅಭಿಪ್ರಾಯಪಟ್ಟರು.

ಸಾಲ ವಿತರಣೆಗೆ ಚಾಲನೆ ಡಿಸಿಸಿ ಬ್ಯಾಂಕ್​ನಿಂದ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆಗೆ ಬಿಎಸ್​ವೈ ಚಾಲನೆ ನೀಡಿದರು. 50 ಕೋಟಿ ರೂಪಾಯಿ ಸಾಲ ವಿತರಣೆಗೆ ಸಿಎಂ ಚಾಲನೆ ನೀಡಿದ್ದಾರೆ. ಕಲಬುರಗಿಯ ರಂಗಮಂದಿರದಲ್ಲಿ ಡಿಸಿಸಿ ಬ್ಯಾಂಕ್ ಕಾರ್ಯಕ್ರಮ ನಡೆಯಿತು. ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಾಲದ ಚೆಕ್​ನ ಮುಖ್ಯಮಂತ್ರಿ ವಿತರಿಸಿದ್ದಾರೆ.

ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಜಿಲ್ಲೆಯಲ್ಲಿ ಪಿಡಬ್ಲ್ಯುಡಿ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಉದ್ಘಾಟಿಸಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಚೆಕ್​​ ವಿತರಿಸಿದ್ದಾರೆ.

ಇದನ್ನೂ ಓದಿ

ಮುಕ್ಕಾಲು ಎಕರೆ ಭೂಮಿಯಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದು ಆದಾಯ ಗಳಿಸಿದ ರೈತ; ಬಿಬಿಎಂ ಪದವೀಧರನ ಕೃಷಿ ಒಲವು

ಕೆಆರ್​ಎಸ್​ ಒಡೆದಿಲ್ಲ ಅಂತಿದ್ದಾರೆ ಅಧಿಕಾರಿಗಳು, ಈಗಲಾದರೂ ಕ್ಷಮೆ ಕೇಳಿ ವಿವಾದಕ್ಕೆ ಇಲ್ಲಿಗೇ ತೆರೆ ಎಳೆಯೋಣ -ದಳಪತಿಗಳಿಂದ ಹಸಿರು ಬಾವುಟ

(Congress MLA MY Patil walked out of the CM program in Kalaburagi)

Published On - 12:50 pm, Sat, 10 July 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ