AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಟ್ಟಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಕಾಂಗ್ರೆಸ್​ ಎಂಎಲ್​​​ಸಿ, ಅವಿಶ್ವಾಸ ನಿರ್ಣಯದ ತಂತ್ರವೇ?

ಬಸವರಾಜ ಹೊರಟ್ಟಿ ಅಜಾತ ಶತ್ರುವಾಗಿ ಗುರುತಿಸಿಕೊಂಡಿರುವ ಹಿರಿಯ ನಾಯಕ. ದಾಖಲೆಯ ಅವಧಿಗೆ ಎಂಎಲ್ಸಿಯಾಗಿ ಜನಸೇವೆ ಮಾಡುತ್ತಿರುವ ಬಸವರಾಜ ಹೊರಟ್ಟಿ ಸಭಾಪತಿಯಾಗಿಗೂ ಗಮನ ಸೆಳೆದವರು. ಎಲ್ಲ ಪಕ್ಷಗಳಲ್ಲೂ ತಮ್ಮದೇ ಸ್ನೇಹಿತರ ವರ್ಗವನ್ನು ಹೊಂದಿರುವ ಬಸವರಾಜ ಹೊರಟ್ಟಿ ವಿರುದ್ದ ಕಾಂಗ್ರೆಸ್​​ ಎಂಎಲ್ಸಿ ನಾಗರಾಜ್ ಯಾದವ್ ಸಾಲು ಸಾಲು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಹೊರಟ್ಟಿ ಸಹ ಸವಾಲು ಹಾಕಿದ್ದಾರೆ.

ಹೊರಟ್ಟಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಕಾಂಗ್ರೆಸ್​ ಎಂಎಲ್​​​ಸಿ, ಅವಿಶ್ವಾಸ ನಿರ್ಣಯದ ತಂತ್ರವೇ?
Basavaraj Horatti
ಪ್ರಸನ್ನ ಗಾಂವ್ಕರ್​
| Edited By: |

Updated on: Dec 08, 2025 | 6:58 PM

Share

ಬೆಳಗಾವಿ, (ಡಿಸೆಂಬರ್ 08): ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ವಿರುದ್ದ ಕಾಂಗ್ರೆಸ್ ಎಂಎಲ್​​ಸಿ ನಾಗರಾಜ್ ಯಾದವ್ (Nagaraj Yadav) ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಭ್ರಷ್ಟಾಚಾರ, ಅಕ್ರಮ ನೇಮಕಾತಿ, ಫೋನ್ ಟ್ಯಾಪಿಂಗ್ ಸೇರಿದಂತೆ ಹಲವು ಇತರೆ ಆರೋಪ ಮಾಡಿದ್ದಾರೆ. ಹೀಗೆ ಹಲವು ಆರೋಪ ಎದುರಿಸುತ್ತಿರುವ ಹೊರಟ್ಟಿಯವರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಬೇಕು ಎಂದು ಯಾದವ್ ಆಗ್ರಹಿಸಿದ್ದಾರೆ.

ಬಸವರಾಜ್ ಹೊರಟ್ಟಿ ಹಾಗೂ ನಾಗರಾಜ್ ಯಾದವ್ ಮುನಿಸು ಅಷ್ಟಕ್ಕೇ ನಿಂತಿಲ್ಲ. ವಿಧಾನ ಪರಿಷತ್ ಕಲಾಪದ ವೇಳೆಯೂ ಪರೋಕ್ಷವಾಗಿ ನಾಗರಾಜ್ ಯಾದವ್ ಅವರು ಹೊರಟ್ಟಿ ವಿರುದ್ದ ಆಕ್ಷೇಪ ಎತ್ತಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ನಾಗರಾಜ್ ಯಾದವ್ ಮತ್ತು ಸಭಾಪತಿ ಹೊರಟ್ಟಿ ನಡುವೆ ಮಾತು ತಾರಕಕ್ಕೇರಿದೆ. ಇದರ ತೀವ್ರತೆ ಅರಿತುಕೊಂಡ ಕಾಂಗ್ರೆಸ್ ಹಿರಿಯ ನಾಯಕರು ನಾಗರಾಜ್ ಯಾದವರನ್ನೇ ಸಮಾಧಾನಪಡಿಸಿದ್ದಾರೆ‌.

ಇದನ್ನೂ ಓದಿ: ಪರಿಷತ್​​ ಸದಸ್ಯ ನಾಗರಾಜ್​​ ಯಾದವ್​​ಗೆ ಸಭಾಪತಿ ಹೊರಟ್ಟಿ ಸವಾಲು: ಕಾರಣ ಏನು​​ ಗೊತ್ತಾ?

ನಾಗರಾಜ್​​ ಯಾದವ್​​ಗೆ​ ಹೊರಟ್ಟಿ ಸವಾಲ್

ಇನ್ನು ನಾಗರಾಜ್ ಯಾದವ್ ಅವರ ಸಾಲು ಸಾಲು ಆರೋಪಕ್ಕೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದು. ತಮ್ಮ ವಿರುದ್ದದ ಆರೋಪಗಳಿಗೆ ದಾಖಲೆ ಬಿಡುಗಡೆ ಮಾಡುವಂತೆ ಸವಾಲು ಹಾಕಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಹೊರಟ್ಟಿ, ದಾಖಲೆ ಬಿಡುಗಡೆ ಮಾಡದೆಯೇ ಕೇವಲ ಆರೋಪ ಮಾಡುವವರು ಹೇಡಿಗಳು ಎಂದು ಚಾಟಿಬೀಸಿದ್ದಾರೆ.

ಸಭಾಪತಿ ಕುರ್ಚಿಯಿಂದ ಕೆಳಗಿಳಿಸುವ ತಂತ್ರವೇ?

ಹೌದು…ನಾಗರಾಜ್ ಯಾದವ್ ಅವರು ಸದನ ಆರಂಭದಿಂದಲೇ ಹೊರಟ್ಟಿ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಸಭಾಪತಿ ಎಲ್ಲ ಪಕ್ಷದ ಪರ ಇರಬೇಕು. ಆದರೆ ಬಸವರಾಜ್​ ಹೊರಟ್ಟಿ ಅವರು ಆಡಳಿತ ಪಕ್ಷಕ್ಕೆ ಒಂದು, ವಿಪಕ್ಷಗಳಿಗೆ ಮತ್ತೊಂದು ಎಂಬ ರೀತಿ ಮಾಡುತ್ತಿದ್ದಾರೆ. ಬಿಜೆಪಿಯವರನ್ನು ಓಲೈಕೆ ಮಾಡಲು ನಮಗೆ ಮಾತನಾಡಲು ಅವಕಾಶ ಕೊಡ್ತಿಲ್ಲ. ಆ ಮೂಲಕ ಹೊರಟ್ಟಿ ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಸದನಲ್ಲಿ ಗುಡುಗಿದರು.

ಇಷ್ಟಕ್ಕೆ ಸುಮ್ಮನಾಗದ ನಾಗರಾಜ್ ಯಾದವ್, ತಮ್ಮ ಕೈ ಕೆಳಗೆ ಕೆಲಸ ಮಾಡುವ ನೌಕರರ ಫೋನ್​​ಕಾಲ್ ಲಿಸ್ಟ್​​ಗಳನ್ನು ಅವರು ತೆಗೆದುಕೊಂಡಿದ್ದು, ಈ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರಲಿದೆ. ಜೊತೆಗೆ ನೇಮಕಾತಿಗಳಲ್ಲಿಯೂ ಹೊರಟ್ಟಿ ಅವ್ಯವಹಾರ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಿ.ಟಿ. ರವಿ ಅವಾಚ್ಯ ಶಬ್ದ ಬಳಕೆ ಮಾಡಿದ್ದ ಬಗ್ಗೆ ಬಗ್ಗೆ ದೂರು ಕೊಟ್ಟಾಗ ನಾನು ಆ ಮಾತು ಕೇಳಿಸಿಕೊಂಡಿಲ್ಲ ಅಂದಿದ್ದರು. ನೈತಿಕತೆ ಕಳೆದುಕೊಂಡ ಮೇಲೆ ಅವರು ರಾಜೀನಾಮೆ ಕೊಟ್ಟು ಹೋಗುವುದು ಸೂಕ್ತ ಎಂದು ವಾಗ್ದಾಳಿ ನಡೆಸಿದ್ದರು. ಹೀಗೆ ನಾಗರಾಜ್ ಯಾದವ್ ಸಾಲು ಸಾಲು ಆರೋಪ ಮಾಡುವ ಮೂಲಕ ಹೊರಟ್ಟಿಯವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸುವ ತಂತ್ರವೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಅವಿಶ್ವಾಸ ನಿರ್ಣಯ ಮಂಡನೆ?

ಸದ್ಯ ಹೊರಟ್ಟಿ ವಿರುದ್ದ ಕಲಹಕ್ಕೆ ಬಿದ್ದಿರೋ ಯಾದವ್ ಪಕ್ಷದ ಅಂಗಳದಲ್ಲೂ ವಿಷಯ ಚರ್ಚೆ ಮಾಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಇರುವಾಗ ಪರಿಷತ್ ನಲ್ಲಿ ಸಂಖ್ಯಾಬಲವು ಹೆಚ್ಚಿರುವಾಗ ಬಿಜೆಪಿ ಪಕ್ಷದ ಸಭಾಪತಿ ಮುಂದುವರಿಯುವುದು ಬೇಡ ಎಂದು ಯಾದವ್ ಆಗ್ರಹಿಸಿದ್ದಾರೆ. ಇದೇ ಕಾರಣಕ್ಕೋಸ್ಕರ ಮುಂದಿನ ದಿನಗಳಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಆದರೂ ಆಶ್ಚರ್ಯವಿಲ್ಲ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?