ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕು ಆಸ್ಪತ್ರೆಯ ಕೊವಿಡ್19 ವಾರ್ಡ್ಗೆ ಶಾಸಕ ಪ್ರಿಯಾಂಕ್ ಖರ್ಗೆ ಭೇಟಿ ನೀಡಿದ್ದಾರೆ. ಪಿಪಿಇ ಕಿಟ್ ಧರಿಸಿ ಕೊವಿಡ್ ವಾರ್ಡ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಸೋಂಕಿತರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದ್ದಾರೆ. ಪ್ರಿಯಾಂಕ್ ಖರ್ಗೆ ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದು, ಸೋಂಕಿತರ ಯೋಗಕ್ಷೇಮ ವಿಚಾರಿಸಿದ್ದಾರೆ.
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 47,930 ಜನರಿಗೆ ಕೊರೊನಾ ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಸೋಂಕಿನಿಂದ 490 ಜನರ ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 20,897 ಜನರಿಗೆ ಸೋಂಕು ಪತ್ತೆಯಾಗಿದ್ದು, 281 ಜನರು ಮೃತಪಟ್ಟಿದ್ದಾರೆ. ಇಂದು ಹೊಸದಾಗಿ ಪತ್ತೆಯಾದ ಕೊರೊನಾ ಪ್ರಕರಣಗಳನ್ನೂ ಸೇರಿಸಿ ರಾಜ್ಯದಲ್ಲಿ ಈವರೆಗಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 19,34,378 ಕ್ಕೆ ಏರಿಕೆಯಾಗಿದೆ. ಇದುವರೆಗೆ ಕರ್ನಾಟಕದಲ್ಲಿ ಕೊರೊನಾದಿಂದ 18,776 ಜನ ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 13,51,097 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಸದ್ಯ 5,64,485 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕೊವಿಡ್ ನಿಭಾಯಿಸಲು ನರೇಂದ್ರ ಮೋದಿಗೆ ಮಲ್ಲಿಕಾರ್ಜುನ ಖರ್ಗೆಯಿಂದ ಸಲಹೆ
ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದು ಕೊವಿಡ್ 19 ಸಾಂಕ್ರಾಮಿಕ ನಿಭಾಯಿಸಲು ಆರು ಸಲಹೆಗಳನ್ನು ನೀಡಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷದ ನಾಯಕರಾಗಿರುವ ಖರ್ಗೆ, ಸಂಸತ್ತಿನ ಸ್ಥಾಯಿ ಸಮಿತಿಗಳ ಸರ್ವಪಕ್ಷ ಸಭೆ ಮತ್ತು ವರ್ಚುವಲ್ ಸಭೆ ಕರೆಯುವಂತೆ ಪ್ರಧಾನಿ ಮೋದಿ ಅವರಿಗೆ ಸಲಹೆ ನೀಡಿದ್ದಾರೆ.
ಎಲ್ಲರಿಗೂ ಉಚಿತ ಲಸಿಕೆ ಖಾತ್ರಿಪಡಿಸಿಕೊಳ್ಳಲು ಕೇಂದ್ರ ಬಜೆಟ್‌ನಲ್ಲಿ ನಿಗದಿಪಡಿಸಿದ ರೂ35,000 ಕೋಟಿಗಳನ್ನು ಬಳಸಿ. ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸಲು ಕಡ್ಡಾಯ ಪರವಾನಗಿ ನೀಡಿ ಎಂದು ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ (MNREGA) ವ್ಯಾಪ್ತಿಯನ್ನು 200 ದಿನಗಳವರೆಗೆ ವಿಸ್ತರಿಸಲು ಖರ್ಗೆ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಕೊವಿಡ್ ನಿಭಾಯಿಸಲು ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ 6 ಸಲಹೆ
ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್
Published On - 8:18 pm, Sun, 9 May 21