24 ಸಾವು ಪ್ರಕರಣ: ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ; ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಗಂಭೀರ ಆರೋಪ
ಜಿಲ್ಲಾಡಳಿತ ಮೃತಪಟ್ಟವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೃತಪಟ್ಟವರ ಪಟ್ಟಿಯಲ್ಲಿ ಹನೂರು ಕ್ಷೇತ್ರದವರ ಹೆಸರು ಇಲ್ಲ. ಹನೂರು ಕ್ಷೇತ್ರದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆದರೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಲ್ಲ.
ಚಾಮರಾಜನಗರ: ರಾಜ್ಯದಲ್ಲಿ ಆಕ್ಸಿಜನ್ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಆಕ್ಸಿಜನ್ ಸಿಗದೆ ಪ್ರತಿದಿನ ಸಾವನ್ನಪ್ಪುತ್ತಿದ್ದಾರೆ. ಜೊತೆಗೆ ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಿಗದೆ 24 ಗಂಟೆಯಲ್ಲಿ ಸುಮಾರು 24 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. 24 ರೋಗಿಗಳೆಲ್ಲರೂ ಆಕ್ಸಿಜನ್ ಸಿಗದೆ ಸಾವನ್ನಪ್ಪಿಲ್ಲ. ಬೇರೆ ಬೇರೆ ರೋಗಗಳಿಂದ ಬಳಲುತ್ತಿದ್ದವರು ಸಾವನ್ನಪ್ಪಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಈ ನಡುವೆ ಸಾವಿನ ಸಂಖ್ಯೆ ಸರಿಯಾಗಿ ಹೇಳುತ್ತಿಲ್ಲವೆಂದು ಕೆಲವರು ಆರೋಪಿಸುತ್ತಿದ್ದಾರೆ. ಹನೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ನರೇಂದ್ರ ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆಂದು ಇದೀಗ ಗಂಭೀರವಾಗಿ ಆರೋಪಿಸುತ್ತಿದ್ದಾರೆ.
ಜಿಲ್ಲಾಡಳಿತ ಮೃತಪಟ್ಟವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೃತಪಟ್ಟವರ ಪಟ್ಟಿಯಲ್ಲಿ ಹನೂರು ಕ್ಷೇತ್ರದವರ ಹೆಸರು ಇಲ್ಲ. ಹನೂರು ಕ್ಷೇತ್ರದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆದರೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಹೆಸರಿಲ್ಲ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು, ಜಿಲ್ಲಾಡಳಿತ ಸಾವಿನ ಸಂಖ್ಯೆ ಮುಚ್ಚಿಡುತ್ತಿದೆ ಎಂದು ಆರೋಪಿಸುತ್ತಿರುವ ಶಾಸಕ ಆರ್.ನರೇಂದ್ರ ಸಾವಿನ ಸಂಖ್ಯೆ ಮುಚ್ಚಿಡುತ್ತಿಲ್ಲವೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿಯನ್ನು ತರಾಟೆ ತೆಗೆದುಕೊಂಡರು.
ಜಿಲ್ಲಾಡಳಿತ ಎಲ್ಲವನ್ನೂ ಮುಚ್ಚಿಡುತ್ತಿದೆ ಎಂದು ಜಿಲ್ಲಾಧಿಕಾರಿ ಎದುರಲ್ಲಿಯೇ ಶಾಸಕರು ಗಂಭೀರ ಆರೋಪ ಮಾಡಿದರು. ಈ ವೇಳೆ ಶಾಸಕರ ಬಾಯಿಯನ್ನು ಮುಚ್ಚಿಸಲು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮುಂದಾದರು. ಅಲ್ಲೇ ಜಿಲ್ಲಾಧಿಕಾರಿಗಳನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.
ಇದನ್ನೂ ಓದಿ
ಈಗಲಾದರೂ ಮೌಢ್ಯದ ಪೊರೆ ಕಳಚಿ ಚಾಮರಾಜನಗರಕ್ಕೆ ಭೇಟಿ ನೀಡ್ತಾರಾ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕೊರೊನಾ ಲಾಕ್ಡೌನ್ನಿಂದ ಕುಸಿದು ಬಿತ್ತು ಕೃಷಿ ಉತ್ಪನ್ನಗಳ ಬೆಲೆ; ಕೋಲಾರದ ರೈತರಲ್ಲಿ ಹೆಚ್ಚಿದ ಆತಂಕ
(Congress MLA R Narendra is blaming district collector for death toll in Chamarajanagar)