ಬೇಲೆಕೇರಿ ಅದಿರು ಸಾಗಾಟ ಪ್ರಕರಣ: 6 ಕೇಸ್​ನಲ್ಲೂ ಕೈ​ ಶಾಸಕ ಸತೀಶ್ ಸೈಲ್‌ ದೋಷಿ!

ಬೇಲೆಕೇರಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಶಾಸಕ ಸತೀಶ್ ಸೈಲ್‌ ಅವರನ್ನು ಸೇರಿದಂತೆ ಮೂವರು ಆರೋಪಿಗಳನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ತೀರ್ಪು ಪ್ರಕಟಿಸಿದೆ. ಇನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಸೂಚಿಸಿ ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿದೆ.

ಬೇಲೆಕೇರಿ ಅದಿರು ಸಾಗಾಟ ಪ್ರಕರಣ: 6 ಕೇಸ್​ನಲ್ಲೂ ಕೈ​ ಶಾಸಕ ಸತೀಶ್ ಸೈಲ್‌ ದೋಷಿ!
ಕಾಂಗ್ರೆಸ್ ಶಾಸಕ ಸತೀಶ್ ಸೈಲ್
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Oct 24, 2024 | 7:55 PM

ಬೆಂಗಳೂರು/ಕಾರವಾರ, ಅಕ್ಟೋಬರ್ 24):  ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಒಂದಲ್ಲ ಎರಡಲ್ಲ ಬರೋಬ್ಬರಿ 6 ಕೇಸ್‌ಗಳಲ್ಲೂ ಸಹ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ದೋಷಿ ಎಂದು ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಅಲ್ಲದೇ ಎಲ್ಲಾ ಅಪರಾಧಿಗಳನ್ನು  ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ಆದೇಶಿಸಿ , ಶಿಕ್ಷೆ ಪ್ರಮಾಣವನ್ನೂ ನಾಳೆಗೆ (ಅಕ್ಟೋಬರ್ 25) ಕಾಯ್ದಿರಿಸಿದ್ದಾರೆ.

ತೀರ್ಪು ಪ್ರಕಟವಾದ ಬಳಿಕ ಕೋರ್ಟ್‌ನಿಂದ ಹೊರಬರುತ್ತಿದ್ದಂತೆ ಎಲ್ಲಾ ಅಪರಾಧಿಗಳನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು, ಇದೀಗ 6 ಪ್ರಕರಣಗಳ ಎಲ್ಲಾ ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಿದ್ದಾರೆ. ಇನ್ನು ನಾಳೆ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗುವುದಿರಂದ ನಾಳೆ ಮಧ್ಯಾಹ್ನ 12.30ಕ್ಕೆ ಎಲ್ಲಾ ಆಪರಾಧಿಗಳನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ: ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಸಿದ್ದರಾಮಯ್ಯ

ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರ ಅಪರಾಧಿಗಳಿಗೆ ನಾಳೆ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ಏನು ಶಿಕ್ಷೆ ಕೊಡಬಹುದು ಎಂದು ಅಪರಾಧಿಗಳಿಗೆ ಆತಂಕ ಶುರುವಾಗಿದೆ.

ಬೆಲೇಕೆರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳಲ್ಲಿ ಇಂದು ಅಂತಿಮ ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದ ತನಿಖಾ ಸಂಸ್ಥೆ ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು. ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದ ಆಲಿಸಿ ಅಂತಿಮ ಆದೇಶವನ್ನು ಹೊರಡಿಸಿದ್ದಾರೆ. ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಲಿಯಾ ಸೇರಿ ಹಲವರ ವಿರುದ್ಧದ ಕೇಸ್ ಇದೆ. ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ, ಶಾಸಕ ಸತೀಶ್ ಸೇರಿ ಎಲ್ಲಾ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.

ಪ್ರಕರಣದ ಹಿನ್ನಲೆ

2010ರಲ್ಲಿ ಬಳ್ಳಾರಿಯಿಂದ ಮ್ಯಾಂಗನೀಸ್ ಸಾಗಾಟ ಮಾಡಿ ಕಾರವಾರ ಬಂದರು ಮೂಲಕ ವಿದೇಶಕ್ಕೆ ರಫ್ತು ಮಾಡಲಾಗಿತ್ತು. ಈ ಸ್ಕ್ಯಾಮ್ ಅನ್ನು ಮಾಜಿ ಕರ್ನಾಟಕ ಲೋಕಾಯುಕ್ತರಾದ ಎನ್. ಸಂತೋಶ್ ಹೆಗ್ಡೆ ಬೆಳಕಿಗೆ ತಂದಿದ್ದರು. ಈ ವರದಿಯನ್ವಯ 7.74 ಮಿಲಿಯನ್ ಟನ್ ಕಬ್ಬಿಣದ ಅದಿರು ವಿದೇಶಕ್ಕೆ ರಫ್ತಾಗಿತ್ತು. 2006-07 ಹಾಗೂ 2010-11ರ ನಡುವೆ ಭಾರೀ ಪ್ರಮಾಣದ ಅದಿರು ವಿದೇಶಕ್ಕೆ ರಫ್ತಾಗಿತ್ತು. ಇದರಿಂದ ಸರಕಾರದ ಖಜಾನೆಗೆ ಭಾರೀ ನಷ್ಟವುಂಟಾಗಿತ್ತು

ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ವಿರುದ್ಧ ಕ್ರಿಮಿನಲ್ ಕಾನ್ಸ್ಪಿರೆಸಿ, ಚೀಟಿಂಗ್, ಪೋರ್ಜರಿ, ಟ್ರೆಸ್‌ಪಾಸ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಸಿಬಿಐ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿತ್ತು. ಪ್ರಕರಣ ಸಂಬಂಧಿಸಿ 2013ರ ಸೆಪ್ಟೆಂಬರ್ ತಿಂಗಳಲ್ಲಿ ಸಿಬಿಐ ಸತೀಶ್ ಸೈಲ್ ಅವರನ್ನು ಬಂಧಿಸಿತ್ತು. ಇನ್ನು ಈ ಪ್ರಕರಣದಲ್ಲಿ ಅಂದಿನ ಬಿಎಸ್‌ಆರ್ ಕಾಂಗ್ರೆಸ್ ಕಂಪ್ಲಿ ಶಾಸಕ ಸುರೇಶ್ ಬಾಬು ಸಹ ಅರೆಸ್ಟ್ ಆಗಿದ್ದರು. ಬಳಿಕ ಸತೀಶ್ ಸೈಲ್ ಸಹ ಬಂಧನಕ್ಕೊಳಗಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:31 pm, Thu, 24 October 24

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ